ರಾಂಚಿ ಟೆಸ್ಟ್: ಟೀಂ ಇಂಡಿಯಾ ಡಿಕ್ಲೇರ್ @497/9

ರಾಂಚಿ ಟೆಸ್ಟ್ ಪಂದ್ಯದಲ್ಲಿ ಭಾರತ ಮೊದಲ ಇನಿಂಗ್ಸ್ 497 ರನ್’ಗಳಿಗೆ ಡಿಕ್ಲೇರ್ ಮಾಡಿಕೊಂಡಿದೆ. ರೋಹಿತ್,ರಹಾನೆ ಹಾಗೂ ಜಡೇಜಾ ಟೀಂ ಇಂಡಿಯಾ ಗೌರವಾನ್ವಿತ ಮೊತ್ತ ಕಲೆಹಾಕಲು ನೆರವಾದರು. ಈ ಕುರಿತಾದ ವರದಿ ಇಲ್ಲಿದೆ ನೋಡಿ...

Ranchi Test India declare on 497 after Rohit Sharma, Ajinkya Rahane masterclass

ರಾಂಚಿ[ಅ.20]: ರೋಹಿತ್ ಶರ್ಮಾ ಮಿಂಚಿನ ದ್ವಿಶತಕ[212], ಅಜಿಂಕ್ಯ ರಹಾನೆ ಆಕರ್ಷಕ ಶತಕ[115], ರವೀಂದ್ರ ಜಡೇಜಾ[51] ಸಮಯೋಚಿತ ಅರ್ಧಶತಕ ಹಾಗೂ ಉಮೇಶ್ ಯಾದವ್[31] ಸಿಡಿಲಬ್ಬರದ ಬ್ಯಾಟಿಂಗ್ ನೆರವಿನಿಂದ ಭಾರತ ಮೊದಲ ಇನಿಂಗ್ಸ್’ನಲ್ಲಿ 9 ವಿಕೆಟ್ ಕಳೆದುಕೊಂಡು 497 ರನ್ ಬಾರಿಸಿ ಡಿಕ್ಲೇರ್ ಮಾಡಿಕೊಂಡಿದೆ.

ರಾಂಚಿ ಟೆಸ್ಟ್: ರೋಹಿತ್ ಶರ್ಮಾ ಭರ್ಜರಿ ಡಬಲ್ ಸೆಂಚುರಿ

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದ ಭಾರತ ಉತ್ತಮ ಆರಂಭ ಪಡೆಯಲು ವಿಫಲವಾಗಿತ್ತು. ತಂಡದ ಮೊತ್ತ 39 ರನ್’ಗಳಾಗುವಷ್ಟರಲ್ಲಿ ಮೂವರು ಬ್ಯಾಟ್ಸ್’ಮನ್’ಗಳು ಪೆವಿಲಿಯನ್ ಸೇರಿದ್ದರು. ಈ ವೇಳೆ ಜತೆಯಾದ ರೋಹಿತ್ ಶರ್ಮಾ-ಅಜಿಂಕ್ಯ ರಹಾನೆ ದ್ವಿಶತಕದ[267] ಜತೆಯಾಟವಾಡುವ ಮೂಲಕ ತಂಡದ ಮೊತ್ತವನ್ನು ಮುನ್ನೂರರ ಗಡಿ ದಾಟಿಸಿದರು. ರಹಾನೆ 192 ಎಸೆತಗಳಲ್ಲಿ 17 ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 115 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಆ ಬಳಿಕ ರೋಹಿತ್-ಜಡೇಜಾ ಜತೆ 64 ರನ್’ಗಳ ಜತೆಯಾಟ ನಿಭಾಯಿಸಿದರು.

ರಾಂಚಿ ಟೆಸ್ಟ್: ಶತಕ ಸಿಡಿಸಿ ವಿಕೆಟ್ ಒಪ್ಪಿಸಿದ ರಹಾನೆ

ರೋಹಿತ್ ಶರ್ಮಾ ಸಿಕ್ಸರ್ ಮೂಲಕ ಚೊಚ್ಚಲ ದ್ವಿಶತಕ ಪೂರೈಸಿದರು. 255 ಎಸೆತಗಳನ್ನು ಎದುರಿಸಿದ ರೋಹಿತ್ 28 ಬೌಂಡರಿ ಹಾಗೂ 6 ಸಿಕ್ಸರ್ ನೆರವಿನಿಂದ 212 ರನ್ ಬಾರಿಸಿ ರಬಾಡಗೆ ವಿಕೆಟ್ ಒಪ್ಪಿಸಿದರು. ಜಡೇಜಾ-ಸಾಹಾ 47 ರನ್’ಗಳ ಜತೆಯಾಟವಾಡಿ ತಂಡವನ್ನು ನಾನೂರ ಗಡಿ ದಾಟಿಸಿದರು. ಎಚ್ಚರಿಕೆಯ ಬ್ಯಾಟಿಂಗ್ ನಡೆಸಿದ ರವೀಂದ್ರ ಜಡೇಜಾ 119 ಎಸೆತಗಳಲ್ಲಿ 4 ಬೌಂಡರಿ ನೆರವಿನಿಂದ 51 ರನ್ ಬಾರಿಸಿ ಲಿಂಡೆಗೆ ಮೂರನೇ ಬಲಿಯಾದರು. ಕೊನೆಯಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ ಉಮೇಶ್ ಯಾದವ್ 10 ಎಸೆತಗಳಲ್ಲಿ 5 ಸಿಕ್ಸರ್ ನೆರವಿನಿಂದ 31 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಶಮಿ 10 ರನ್ ಬಾರಿಸಿ ಅಜೇಯರಾಗುಳಿದರು.

ದಕ್ಷಿಣ ಆಫ್ರಿಕಾ ಪರ ಪದಾರ್ಪಣೆ ಮಾಡಿದ ಜಾರ್ಜ್ ಲಿಂಡೆ 113 ರನ್ ನೀಡಿ 4 ವಿಕೆಟ್ ಪಡೆದರು. ಇನ್ನು ರಬಾಡ 3 ಹಾಗೂ ಡೇನ್ ಪೀಟ್ ಹಾಗೂ ಆ್ಯನ್ರಿಚ್ ನೋರ್ಜೆ ತಲಾ ಒಂದೊಂದು ವಿಕೆಟ್ ಪಡೆದರು.  

ಸಂಕ್ಷಿಪ್ತ ಸ್ಕೋರ್:
ಭಾರತ: 497/9
ರೋಹಿತ್ ಶರ್ಮಾ: 212

Latest Videos
Follow Us:
Download App:
  • android
  • ios