ಮಂಗಳವಾರ ಬಿಸಿಸಿಐ 4ನೇ ಪಂದ್ಯಕ್ಕೆ ತಂಡವನ್ನು ಪ್ರಕಟಿಸಿತು. ಸರಣಿಯಲ್ಲಿ 80.5 ಓವರ್‌ ಬೌಲಿಂಗ್‌ ಮಾಡಿರುವ ಬೂಮ್ರಾಗೆ ಬಿಸಿಸಿಐ ಅಗತ್ಯ ವಿಶ್ರಾಂತಿ ನೀಡಿದ್ದು, ಅವರ ಬದಲು ಯುವ ವೇಗಿ ಮುಕೇಶ್‌ ಕುಮಾರ್‌ರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ರಾಂಚಿ(ಫೆ.21): ಇಂಗ್ಲೆಂಡ್‌ ವಿರುದ್ಧದ 4 ಟೆಸ್ಟ್‌ ಪಂದ್ಯಕ್ಕೆ ವೇಗಿ ಜಸ್‌ಪ್ರೀತ್ ಬುಮ್ರಾ ಹಾಗೂ ಕೆ.ಎಲ್‌.ರಾಹುಲ್‌ ಗೈರಾಗಲಿದ್ದಾರೆ. ಬೂಮ್ರಾಗೆ ಈ ಪಂದ್ಯಕ್ಕೆ ವಿಶ್ರಾಂತಿ ನೀಡಲಾಗಿದ್ದರೆ, ಕೆ.ಎಲ್‌.ರಾಹುಲ್‌ ಗಾಯದಿಂದ ಇನ್ನೂ ಚೇತರಿಸಿಕೊಳ್ಳದ ಕಾರಣ ಪಂದ್ಯದಿಂದ ಹೊರಬಿದ್ದಿದ್ದಾರೆ.

ಮಂಗಳವಾರ ಬಿಸಿಸಿಐ 4ನೇ ಪಂದ್ಯಕ್ಕೆ ತಂಡವನ್ನು ಪ್ರಕಟಿಸಿತು. ಸರಣಿಯಲ್ಲಿ 80.5 ಓವರ್‌ ಬೌಲಿಂಗ್‌ ಮಾಡಿರುವ ಬುಮ್ರಾಗೆ ಬಿಸಿಸಿಐ ಅಗತ್ಯ ವಿಶ್ರಾಂತಿ ನೀಡಿದ್ದು, ಅವರ ಬದಲು ಯುವ ವೇಗಿ ಮುಕೇಶ್‌ ಕುಮಾರ್‌ರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಮುಕೇಶ್‌ 2ನೇ ಪಂದ್ಯದಲ್ಲಿ ಸಿರಾಜ್‌ ಬದಲು ಆಡುವ 11ರ ಬಳಗದಲ್ಲಿ ಅವಕಾಶ ಪಡೆದಿದ್ದರು. ಇನ್ನು, ಮೊದಲ ಪಂದ್ಯದ ವೇಳೆ ತೊಡೆಯ ಗಾಯಕ್ಕೆ ತುತ್ತಾಗಿದ್ದ ರಾಹುಲ್‌ ಇನ್ನೂ ಚೇತರಿಸಿಕೊಂಡಿಲ್ಲ. ಅವರು ಫಿಟ್ನೆಸ್‌ ಸಾಬೀತು ಪಡಿಸಿದರಷ್ಟೇ 5ನೇ ಟೆಸ್ಟ್‌ಗೆ ಆಯ್ಕೆಯಾಗಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

17ನೇ ಆವೃತ್ತಿ ಐಪಿಎಲ್‌ಗೆ ಮಾರ್ಚ್ 22ರಂದು ಚಾಲನೆ..!

ಕ್ರಿಕೆಟಿಗ ಕೆ ಎಲ್ ರಾಹುಲ್, ಸದ್ಯ ಇಂಗ್ಲೆಂಡ್ ಎದುರು ನಡೆಯುತ್ತಿರುವ 5 ಪಂದ್ಯಗಳ ಟೆಸ್ಟ್ ಸರಣಿಯ ಪೈಕಿ ಮೊದಲ ಪಂದ್ಯದಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಂಡಿದ್ದರು. ಅದರೆ ಫಿಟ್ನೆಸ್ ಸಮಸ್ಯೆಯಿಂದಾಗಿ ಇಂಗ್ಲೆಂಡ್ ಎದುರಿನ ವೈಜಾಗ್ ಹಾಗೂ ರಾಜ್‌ಕೋಟ್ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು. ಇಂಗ್ಲೆಂಡ್ ಎದುರು ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಕೆ ಎಲ್ ರಾಹುಲ್ ಸಮಯೋಚಿತ 86 ರನ್ ಸಿಡಿಸಿದ್ದರು. ಇನ್ನು ಎರಡನೇ ಇನಿಂಗ್ಸ್‌ನಲ್ಲಿ 22 ರನ್ ಬಾರಿಸಿ ವಿಕೆಟ್ ಒಪ್ಪಿಸಿದ್ದರು. ಇದಾದ ಬಳಿಕ ಎರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದರು.

Scroll to load tweet…

ಸದ್ಯ ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲ ಮೂರು ಪಂದ್ಯಗಳು ಮುಕ್ತಾಯವಾಗಿದ್ದು, ಭಾರತ 2-1ರ ಮುನ್ನಡೆ ಸಾಧಿಸಿದೆ. ಮೊದಲ ಪಂದ್ಯದ ಸೋಲಿನ ಬಳಿಕ ಎಚ್ಚೆತ್ತುಕೊಂಡಿರುವ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಇದೀಗ ಕಳೆದೆರಡು ಟೆಸ್ಟ್ ಪಂದ್ಯಗಳನ್ನು ದೊಡ್ಡ ಅಂತರದಲ್ಲಿ ಜಯಿಸಿ ಆಂಗ್ಲರಿಗೆ ತಿರುಗೇಟು ನೀಡುವಲ್ಲಿ ಯಶಸ್ವಿಯಾಗಿದೆ.

IPL 2024 ಆರಂಭ ಯಾವಾಗ..? ಇಲ್ಲಿದೆ ನೋಡಿ ಐಪಿಎಲ್ ಚೇರ್‌ಮನ್ ಕೊಟ್ಟ ಅಧಿಕೃತ ಅಪ್‌ಡೇಟ್

ಇಂಗ್ಲೆಂಡ್ ಎದುರಿನ ನಾಲ್ಕನೇ ಟೆಸ್ಟ್‌ಗೆ ಭಾರತ ತಂಡ ಹೀಗಿದೆ:

ರೋಹಿತ್ ಶರ್ಮಾ(ನಾಯಕ), ಯಶಸ್ವಿ ಜೈಸ್ವಾಲ್, ಶುಭ್‌ಮನ್ ಗಿಲ್, ರಜತ್ ಪಾಟೀದಾರ್, ಸರ್ಫರಾಜ್ ಖಾನ್, ಧೃವ್ ಜುರೆಲ್(ವಿಕೆಟ್ ಕೀಪರ್), ಕೆ ಎಸ್ ಭರತ್(ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಆಕಾಶ್ ದೀಪ್.