ಇನ್ನು ಕಾರ್ಗಿಲ್ ವೀರ ಯೋಧನ ಪುತ್ರ 23 ವರ್ಷದ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಧೃವ್ ಜುರೆಲ್ ಕೇವಲ 96 ಎಸೆತಗಳನ್ನು ಎದುರಿಸಿ ಚೊಚ್ಚಲ ಟೆಸ್ಟ್ ಶತಕ ಸಿಡಿಸಿ ಸಂಭ್ರಮಿಸಿದರು. ಕಳೆದ ಟೆಸ್ಟ್ ಪಂದ್ಯದ ವೇಳೆ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದ್ದ ಜುರೆಲ್, ತಾವಾಡಿದ ಮೊದಲ ಪಂದ್ಯದಲ್ಲಿ 46 ರನ್ ಬಾರಿಸಿ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಅನುಭವಿಸಿದ್ದರು.

ರಾಂಚಿ(ಫೆ.25): ಟೀಂ ಇಂಡಿಯಾ ಪ್ರತಿಭಾನ್ವಿತ ವಿಕೆಟ್ ಕೀಪರ್ ಬ್ಯಾಟರ್ ಧೃವ್ ಜುರೆಲ್, ಇಂಗ್ಲೆಂಡ್ ಎದುರಿನ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಕೆಚ್ಚೆದೆಯ ಅರ್ಧಶತಕ ಸಿಡಿಸುವ ಮೂಲಕ ಟೀಂ ಇಂಡಿಯಾಗೆ ಆಸರೆಯಾದರು. ರಾಂಚಿ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಜುರೆಲ್ ಕೇವಲ 10 ರನ್ ಅಂತರದಲ್ಲಿ ಚೊಚ್ಚಲ ಶತಕ ಸಿಡಿಸುವ ಅವಕಾಶದಿಂದ ವಂಚಿತರಾದರು. ಧೃವ್ ಜುರೆಲ್ 149 ಎಸೆತಗಳನ್ನು ಎದುರಿಸಿ 6 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ 90 ರನ್ ಬಾರಿಸಿ ಕೊನೆಯವರಾಗಿ ವಿಕೆಟ್ ಒಪ್ಪಿಸಿದರು.

161 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ಟೀಂ ಇಂಡಿಯಾ ಪರ ಕಣಕ್ಕಿಳಿದ ವಿಕೆಟ್ ಕೀಪರ್ ಬ್ಯಾಟರ್ ಧೃವ್ ಜುರೆಲ್ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸುವ ಮೂಲಕ ತಂಡಕ್ಕೆ ಆಸರೆಯಾದರು. 8ನೇ ವಿಕೆಟ್‌ಗೆ ಕುಲ್ದೀಪ್ ಯಾದವ್ ಜತೆ 76 ರನ್ ಜತೆಯಾಟವಾಡಿದ ಜುರೆಲ್, ಆ ಬಳಿಕ 9ನೇ ವಿಕೆಟ್‌ಗೆ ಆಕಾಶ್‌ ದೀಪ್ ಜತೆ ಅಮೂಲ್ಯ 40 ರನ್‌ಗಳ ಜತೆಯಾಟ ನಿಭಾಯಿಸಿದರು. ಟೀಂ ಇಂಡಿಯಾ ಮೊದಲ ಇನಿಂಗ್ಸ್‌ನಲ್ಲಿ 307 ರನ್‌ಗಳಿಗೆ ಸರ್ವಪತನ ಕಂಡಿದ್ದು, ಪ್ರವಾಸಿ ಇಂಗ್ಲೆಂಡ್ ತಂಡವು 46 ರನ್‌ಗಳ ಅಮೂಲ್ಯ ಮುನ್ನಡೆ ಪಡೆದಿದೆ. 

ಇನ್ನು ಕಾರ್ಗಿಲ್ ವೀರ ಯೋಧನ ಪುತ್ರ 23 ವರ್ಷದ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಧೃವ್ ಜುರೆಲ್ ಕೇವಲ 96 ಎಸೆತಗಳನ್ನು ಎದುರಿಸಿ ಚೊಚ್ಚಲ ಟೆಸ್ಟ್ ಶತಕ ಸಿಡಿಸಿ ಸಂಭ್ರಮಿಸಿದರು. ಕಳೆದ ಟೆಸ್ಟ್ ಪಂದ್ಯದ ವೇಳೆ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದ್ದ ಜುರೆಲ್, ತಾವಾಡಿದ ಮೊದಲ ಪಂದ್ಯದಲ್ಲಿ 46 ರನ್ ಬಾರಿಸಿ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಅನುಭವಿಸಿದ್ದರು. ಆದರೆ ಇದೀಗ ರಾಂಚಿ ಟೆಸ್ಟ್ ಪಂದ್ಯದಲ್ಲಿ ಚೊಚ್ಚಲ ಟೆಸ್ಟ್ ಅರ್ಧಶತಕ ಸಿಡಿಸಿದರು. ಈ ಟೆಸ್ಟ್ ಅರ್ಧಶತಕವನ್ನು ಕಾರ್ಗಿಲ್ ವೀರ ತಮ್ಮ ತಂದೆಗೆ ಅರ್ಪಿಸಿದ್ದಾರೆ. ಜತೆಗೆ ಸೆಲ್ಯೂಟ್ ಮಾಡಿ ಸಂಭ್ರಮಿಸಿದ್ದಾರೆ. ಈ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.

Scroll to load tweet…

ಹೀಗಿತ್ತು ನೋಡಿ ಆ ಕ್ಷಣ:

Scroll to load tweet…

ಇನ್ನು 59 ರನ್ ಗಳಿಸಿದ್ದಾಗ ಓಲಿ ರಾಬಿನ್‌ಸನ್ ಅವರಿಂದ ಜೀವಧಾನ ಪಡೆದ ಧೃವ್ ಜುರೆಲ್ ಚುರಕಾಗಿ 90 ರನ್ ಸಿಡಿಸಿದರು. ಜುರೆಲ್‌ಗೆ ಕುಲ್ದೀಪ್ ಯಾದವ್ ಹಾಗೂ ಆಕಾಶ್ ದೀಪ್ ಉತ್ತಮ ಸಾಥ್ ನೀಡುವಲ್ಲಿ ಯಶಸ್ವಿಯಾದರು.