42ನೇ ಬಾರಿಗೆ ರಣಜಿ ಟ್ರೋಫಿ ಗೆದ್ದ ಮುಂಬೈ..! ವಿದರ್ಭ ತಂಡಕ್ಕೆ ನಿರಾಸೆ

ಫೈನಲ್‌ನಲ್ಲಿ ವಿದರ್ಭ ಎದುರು ಗೆಲುವು ಸಾಧಿಸುವ ಮೂಲಕ ಬರೋಬ್ಬರಿ 8 ವರ್ಷಗಳ ಬಳಿಕ ಮುಂಬೈ ರಣಜಿ ಟ್ರೋಫಿ ಜಯಿಸುವಲ್ಲಿ ಯಶಸ್ವಿಯಾಗಿದೆ. ಮುಂಬೈ ತಂಡವು 2015-16ರಲ್ಲಿ ಕೊನೆಯ ಬಾರಿಗೆ ರಣಜಿ ಟ್ರೋಫಿ ಜಯಿಸಿತ್ತು. ಇದೀಗ ಅಜಿಂಕ್ಯ ರಹಾನೆ ಮುಂಬೈ ಪರ ರಣಜಿ ಟ್ರೋಫಿ ಗೆದ್ದ 29ನೇ ನಾಯಕ ಎನ್ನುವ ಹಿರಿಮೆಗೆ ಪಾತ್ರರಾಗಿದ್ದಾರೆ.

Ranji Trophy 2024 Mumbai win title after beating Vidarbha kvn

ಮುಂಬೈ(ಮಾ.14): ಅಜಿಂಕ್ಯ ರಹಾನೆ ನೇತೃತ್ವದ ಮುಂಬೈ ಕ್ರಿಕೆಟ್ ತಂಡವು 2024ನೇ ಸಾಲಿನ ರಣಜಿ ಟ್ರೋಫಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇಲ್ಲಿನ ವಾಂಖೇಡೆ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದ ಕೊನೆಯ ದಿನ ವಿದರ್ಭ ಎದುರು 169 ರನ್ ಅಂತರದ ಭರ್ಜರಿ ಗೆಲುವು ಸಾಧಿಸಿದ ಮುಂಬೈ 42ನೇ ಬಾರಿಗೆ ರಣಜಿ ಟ್ರೋಫಿಗೆ ಮುತ್ತಿಕ್ಕುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ದೇಶಿ ಕ್ರಿಕೆಟ್‌ನಲ್ಲಿ ಮುಂಬೈ ಕ್ರಿಕೆಟ್ ತಂಡವು ಮತ್ತೊಮ್ಮೆ ತನ್ನ ಪ್ರಾಬಲ್ಯ ಮೆರೆಯುವಲ್ಲಿ ಯಶಸ್ವಿಯಾಗಿದೆ.

ಫೈನಲ್‌ನಲ್ಲಿ ವಿದರ್ಭ ಎದುರು ಗೆಲುವು ಸಾಧಿಸುವ ಮೂಲಕ ಬರೋಬ್ಬರಿ 8 ವರ್ಷಗಳ ಬಳಿಕ ಮುಂಬೈ ರಣಜಿ ಟ್ರೋಫಿ ಜಯಿಸುವಲ್ಲಿ ಯಶಸ್ವಿಯಾಗಿದೆ. ಮುಂಬೈ ತಂಡವು 2015-16ರಲ್ಲಿ ಕೊನೆಯ ಬಾರಿಗೆ ರಣಜಿ ಟ್ರೋಫಿ ಜಯಿಸಿತ್ತು. ಇದೀಗ ಅಜಿಂಕ್ಯ ರಹಾನೆ ಮುಂಬೈ ಪರ ರಣಜಿ ಟ್ರೋಫಿ ಗೆದ್ದ 29ನೇ ನಾಯಕ ಎನ್ನುವ ಹಿರಿಮೆಗೆ ಪಾತ್ರರಾಗಿದ್ದಾರೆ.

Ranji Trophy Final: ಮುಂಬೈ ಎದುರು ಸೋಲು ತಪ್ಪಿಸಲು ವಿದರ್ಭ ಹೋರಾಟ

ಮುಂಬೈ ನೀಡಿದ್ದ ಬರೋಬ್ಬರಿ 538 ರನ್‌ಗಳ ಸವಾಲಿನ ಗುರಿ ಬೆನ್ನತ್ತಿದ ವಿದರ್ಭ ತಂಡವು ನಾಲ್ಕನೇ ದಿನದಾಟದಂತ್ಯದ ವೇಳೆಗೆ 5 ವಿಕೆಟ್ ಕಳೆದುಕೊಂಡು 248 ರನ್ ಗಳಿಸಿತ್ತು. ಕೊನೆಯ ದಿನ ಗೆಲ್ಲಲು ವಿದರ್ಭ ತಂಡಕ್ಕೆ ಇನ್ನೂ 290 ರನ್‌ಗಳ ಅಗತ್ಯವಿತ್ತು. ಕೊನೆಯ ದಿನ ನಾಯಕ ಅಕ್ಷಯ್ ವಾಡ್ಕರ್ ಹಾಗೂ ಹರ್ಷ್ ದುಬೆ ಶತಕದ ಜತೆಯಾಟವಾಡುವ ಮೂಲಕ ಮುಂಬೈ ಬೌಲರ್‌ಗಳನ್ನು ಕಾಡಿದರು. ನಾಯಕ ಅಕ್ಷಯ್ ವಾಡ್ಕರ್ 199 ಎಸೆತಗಳನ್ನು ಎದುರಿಸಿ 9 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 102 ರನ್ ಸಿಡಿಸಿದರು. ಈ ಜೋಡಿಯನ್ನು ಬೇರ್ಪಡಿಸುವಲ್ಲಿ ತನುಷ್ ಕೋಟ್ಯಾನ್ ಯಶಸ್ವಿಯಾದರು. ನಾಯಕನ ವಿಕೆಟ್ ಪತನದ ಬೆನ್ನಲ್ಲೇ ಅರ್ಧಶತಕ ಸಿಡಿಸಿ ಮುನ್ನುಗ್ಗುತ್ತಿದ್ದ ಹರ್ಷ್ ದುಬೆ(65 ರನ್, 128 ಎಸೆತ) ಕೂಡಾ ಪೆವಿಲಿಯನ್ ಹಾದಿ ಹಿಡಿದರು. ಇದಾದ ಕೆಲವೇ ಹೊತ್ತಿನಲ್ಲಿ ವಿದರ್ಭ ತಂಡವು ಎಲ್ಲಾ ವಿಕೆಟ್ ಕಳೆದುಕೊಂಡಿತು. ಅಂತಿಮವಾಗಿ ವಿದರ್ಭ ತಂಡವು 368 ರನ್‌ಗಳಿಗೆ ಸರ್ವಪತನ ಕಂಡಿತು.

ನಮಗೆ 3 ಸ್ಟೇಡಿಯಂ ನಿರ್ವಹಿಸಲು ಆಗಲ್ಲ, ಧರ್ಮಶಾಲಾದಂತ ಸ್ಟೇಡಿಯಂ ನಿರ್ಮಾಣ ಕನಸಷ್ಟೇ: ವಾಸೀಂ ಅಕ್ರಂ

ಎರಡನೇ ಇನಿಂಗ್ಸ್‌ನಲ್ಲಿ ಮುಂಬೈ ಪರ ತನುಷ್ ಕೋಟ್ಯಾನ್ 95 ರನ್ ನೀಡಿ 4 ವಿಕೆಟ್ ಪಡೆದರೆ, ಮುಷೀರ್ ಖಾನ್ ಹಾಗೂ ತುಷಾರ್ ದೇಶಪಾಂಡೆ ತಲಾ ಎರಡು ವಿಕೆಟ್ ಕಬಳಿಸಿದರು. ಇನ್ನು ಶಮ್ಸ್ ಮುಲಾನಿ ಹಾಗೂ ಧವಳ್ ಕುಲಕರ್ಣಿ ತಲಾ ಒಂದೊಂದು ವಿಕೆಟ್ ತಮ್ಮ ಬುಟ್ಟಿಗೆ ಹಾಕಿಕೊಂಡರು.

ಇನ್ನು ಮುಂಬೈ ಪರ ಎರಡನೇ ಇನಿಂಗ್ಸ್‌ನಲ್ಲಿ ಶತಕ ಹಾಗೂ ಬೌಲಿಂಗ್‌ನಲ್ಲೂ ವಿಕೆಟ್ ಕಬಳಿಸಿ ಮಿಂಚಿದ ಮುಷೀರ್ ಖಾನ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಪಾತ್ರರಾದರು. ಇನ್ನು ತನುಷ್ ಕೂಟ್ಯಾನ್ ಸರಣಿಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.

 

 

Latest Videos
Follow Us:
Download App:
  • android
  • ios