ಬೆಂಗಳೂರು(ಫೆ.14): ಅಭಿಮನ್ಯು ರಜಪೂತ್(52) ಹಾಗೂ ಪಾರ್ಥ್ ಕೊಹ್ಲಿ(42) ದಿಟ್ಟ ಹೋರಾಟದ ಹೊರತಾಗಿಯೂ ಬರೋಡ ಎರಡನೇ ಇನಿಂಗ್ಸ್‌ನಲ್ಲಿ 296 ರನ್‌ಗಳಿಗೆ ಸರ್ವಪತನ ಕಂಡಿದೆ. ಈ ಮೂಲಕ ಕರ್ನಾಟಕಕ್ಕೆ ಗೆಲ್ಲಲು 149 ರನ್‌ಗಳ ಗುರಿ ನೀಡಿದೆ.

ಇನ್ನು ಗುರಿ ಬೆನ್ನತ್ತಿದ ಕರ್ನಾಟಕ ತಮಡ ಆರಂಭದಲ್ಲೇ ದೇವದತ್ ಪಡಿಕ್ಕಲ್ ವಿಕೆಟ್ ಕಳೆದುಕೊಂಡಿದೆ. ಲಂಚ್ ಬ್ರೇಕ್ ವೇಳೆಗೆ ಕರ್ನಾಟಕ 1 ವಿಕೆಟ್ ಕಳೆದುಕೊಂಡು 14 ರನ್ ಬಾರಿಸಿದೆ. ಗೆಲುವಿನೊಂದಿಗೆ ಕ್ವಾರ್ಟರ್ ಫೈನಲ್ ಪ್ರವೇಶಿಸಲು ಕರ್ನಾಟಕ ತಂಡಕ್ಕೆ ಇನ್ನು 135 ರನ್‌ಗಳ ಅವಶ್ಯಕತೆಯಿದೆ. 

ರಣಜಿ ಟ್ರೋಫಿ: ಕರ್ನಾಟಕಕ್ಕೆ ಸಿಗುತ್ತಾ ಗೆಲುವು?

2ನೇ ದಿನದಂತ್ಯಕ್ಕೆ 5 ವಿಕೆಟ್‌ ನಷ್ಟಕ್ಕೆ 205 ರನ್‌ ಗಳಿಸಿದ್ದ ಬರೋಡ ತಂಡಕ್ಕೆ ಅಭಿಮನ್ಯು ಹಾಗೂ ಪಾರ್ಥ್ ಕೊಹ್ಲಿ ಆಸರೆಯಾದರು. ರಜಪೂತ್ 72 ಎಸೆತಗಳಲ್ಲಿ 8 ಬೌಂಡರಿ ಸಹಿತ 52 ರನ್ ಬಾರಿಸಿದರು.  ಈ ವೇಳೆ ರೋನಿತ್ ಮೋರೆ ಕ್ಲೀನ್ ಬೌಲ್ಡ್ ಮಾಡುವ ಮೂಲಕ ಕರ್ನಾಟಕಕ್ಕೆ ಉಪಯುಕ್ತ ಬ್ರೇಕ್ ನೀಡಿದರು. ಇನ್ನು ಪಾರ್ಥ್ ಕೊಹ್ಲಿ ಎಚ್ಚರಿಕೆಯ ಬ್ಯಾಟಿಂಗ್ ನಡೆಸುವ ಮೂಲಕ 88 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 42 ರನ್ ಬಾರಿಸಿ ಮಿಥುನ್‌ಗೆ ವಿಕೆಟ್ ಒಪ್ಪಿಸಿದರು. ಕೊನೆಯಲ್ಲಿ ವಿರಾಜದ ಬೋಸ್ಲೆ 16 ರನ್ ಬಾರಿಸುವ ಮೂಲಕ ತಂಡದ ಮೊತ್ತವನ್ನು 290ರ ಗಡಿ ದಾಟಿಸಿದರು.

ಕರ್ನಾಟಕದ ಪರ ಪ್ರಸಿದ್ಧ್ ಕೃಷ್ಣ 4 ವಿಕೆಟ್ ಪಡೆದರೆ, ರೋನಿತ್ ಮೋರೆ 3, ಕೆ. ಗೌತಮ್ 2 ಹಾಗೂ ಅಭಿಮನ್ಯು ಮಿಥುನ್ ಒಂದು ವಿಕೆಟ್ ಪಡೆದರು.