ಎಲೈಟ್‌ ‘ಸಿ’ ಗುಂಪಿನಲ್ಲಿರುವ ರಾಜ್ಯ ತಂಡ ಟೂರ್ನಿಯಲ್ಲಿ ಆಡಿರುವ 4 ಪಂದ್ಯಗಳಲ್ಲಿ 2ರಲ್ಲಿ ಗೆದ್ದಿದ್ದು, 1 ಡ್ರಾ, 1 ಸೋಲಿನೊಂದಿಗೆ 15 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ರಾಜ್ಯಕ್ಕೆ ರೈಲ್ವೇಸ್‌ ಪಂದ್ಯ ಹೊರತುಪಡಿಸಿ ಇನ್ನೂ 2 ಪಂದ್ಯ ಬಾಕಿ ಇದೆ.

ಸೂರತ್‌(ಫೆ.02): ಈ ಬಾರಿ ರಣಜಿ ಟ್ರೋಫಿ ಕ್ರಿಕೆಟ್‌ ಟೂರ್ನಿಯಲ್ಲಿ ಕ್ವಾರ್ಟರ್‌ ಫೈನಲ್‌ ಸ್ಥಾನದ ಮೇಲೆ ಕಣ್ಣಿಟ್ಟಿರುವ 8 ಬಾರಿ ಚಾಂಪಿಯನ್‌ ಕರ್ನಾಟಕ, ಮಹತ್ವದ ಪಂದ್ಯದಲ್ಲಿ ಶುಕ್ರವಾರದಿಂದ ರೈಲ್ವೇಸ್‌ ವಿರುದ್ಧ ಸೆಣಸಾಡಲಿದೆ.

ಎಲೈಟ್‌ ‘ಸಿ’ ಗುಂಪಿನಲ್ಲಿರುವ ರಾಜ್ಯ ತಂಡ ಟೂರ್ನಿಯಲ್ಲಿ ಆಡಿರುವ 4 ಪಂದ್ಯಗಳಲ್ಲಿ 2ರಲ್ಲಿ ಗೆದ್ದಿದ್ದು, 1 ಡ್ರಾ, 1 ಸೋಲಿನೊಂದಿಗೆ 15 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ರಾಜ್ಯಕ್ಕೆ ರೈಲ್ವೇಸ್‌ ಪಂದ್ಯ ಹೊರತುಪಡಿಸಿ ಇನ್ನೂ 2 ಪಂದ್ಯ ಬಾಕಿ ಇದೆ. ಸದ್ಯ ತಮಿಳುನಾಡು ಕೂಡಾ 15 ಅಂಕ ಪಡೆದಿದ್ದು, ನೆಟ್‌ ರನ್‌ರೇಟ್‌ ಆಧಾರದಲ್ಲಿ ಅಗ್ರಸ್ಥಾನದಲ್ಲಿದೆ. ಕ್ವಾರ್ಟರ್‌ಗೇರಲು ಗುಂಪಿನಲ್ಲಿ ಅಗ್ರ-2 ಸ್ಥಾನ ಪಡೆಯಬೇಕಿದ್ದು, ಹೀಗಾಗಿ ರಾಜ್ಯಕ್ಕೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯ. ಅತ್ತ ರೈಲ್ವೇಸ್‌ 4 ಪಂದ್ಯದಲ್ಲಿ 1ರಲ್ಲಿ ಮಾತ್ರ ಗೆದ್ದಿದ್ದು, 12 ಅಂಕದೊಂದಿಗೆ 4ನೇ ಸ್ಥಾನದಲ್ಲಿದೆ.

Vizag Test: ಟೀಂ ಇಂಡಿಯಾಗೆ ಸರಣಿ ಸಮಬಲದ ಗುರಿ..!

ಪಂದ್ಯ: ಬೆಳಗ್ಗೆ 9.30ಕ್ಕೆ

ಮಯಾಂಕ್‌ ಗೈರು

ತ್ರಿಪುರಾ ವಿರುದ್ಧ ಪಂದ್ಯದ ಬಳಿಕ ವಿಮಾನದಲ್ಲಿ ದ್ರವ ಪದಾರ್ಥ ಕುಡಿದು ಅಸ್ವಸ್ಥಗೊಂಡ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕರ್ನಾಟಕ ನಾಯಕ ಮಯಾಂಕ್‌ ಅಗರ್‌ವಾಲ್‌ ಈ ಪಂದ್ಯದಲ್ಲಿ ಆಡುತ್ತಿಲ್ಲ. ಹೀಗಾಗಿ ಯುವ ಆಟಗಾರ ನಿಕಿನ್ ಜೋಸ್ ಈ ಪಂದ್ಯದಲ್ಲಿ ರಾಜ್ಯ ತಂಡವನ್ನು ಮುನ್ನಡೆಸಲಿದ್ದಾರೆ. ಇನ್ನು, ಕಳೆದ ಪಂದ್ಯಕ್ಕೆ ಗಾಯದ ಕಾರಣಕ್ಕೆ ಗೈರಾಗಿದ್ದ ಮನೀಶ್ ಪಾಂಡೆ ಈ ಪಂದ್ಯಕ್ಕೆ ಆಯ್ಕೆಗೆ ಲಭ್ಯರಿದ್ದಾರೆ. 

ಅಂ-19 ವಿಶ್ವಕಪ್: ಇಂದು ಭಾರತ vs ನೇಪಾಳ ಫೈಟ್‌

ಬ್ಲೂಮ್‌ಫೌಂಟೇನ್‌(ದ.ಆಫ್ರಿಕಾ): ಈ ಬಾರಿ ಅಂಡರ್‌-19 ವಿಶ್ವಕಪ್‌ನಲ್ಲಿ ಸೆಮಿಫೈನಲ್‌ ಸ್ಥಾನದ ಮೇಲೆ ಕಣ್ಣಿಟ್ಟಿರುವ 5 ಬಾರಿ ಚಾಂಪಿಯನ್‌ ಭಾರತ ತಂಡ, ಸೂಪರ್‌-6 ಹಂತದ ಕೊನೆ ಪಂದ್ಯದಲ್ಲಿ ಶುಕ್ರವಾರ ನೇಪಾಳ ವಿರುದ್ಧ ಸೆಣಸಾಡಲಿದೆ.

ಭಾರತ ಗುಂಪು ಹಂತದಲ್ಲಿ ಬಾಂಗ್ಲಾದೇಶ, ಐರ್ಲೆಂಡ್‌ ಹಾಗೂ ಸೂಪರ್‌-6 ಹಂತದಲ್ಲಿ ನ್ಯೂಜಿಲೆಂಡ್‌ ವಿರುದ್ಧ ಗೆದ್ದಿದ್ದು, ಹೀಗಾಗಿ ಗುಂಪು 1ರಲ್ಲಿ ಉತ್ತಮ ನೆಟ್‌ ರನ್‌ರೇಟ್‌(+3.32)ನೊಂದಿಗೆ ಅಗ್ರಸ್ಥಾನದಲ್ಲಿದೆ. ಪಾಕಿಸ್ತಾನ ಕೂಡಾ 6 ಅಂಕ ಪಡೆದಿದ್ದರೂ +1.06 ನೆಟ್‌ ರನ್‌ರೇಟ್‌ನೊಂದಿಗೆ 2ನೇ ಸ್ಥಾನದಲ್ಲಿದೆ. ಬಾಂಗ್ಲಾದೇಶ 4, ನ್ಯೂಜಿಲೆಂಡ್‌ 2 ಅಂಕ ಸಂಪಾದಿಸಿದೆ. ಪ್ರತಿ ಗುಂಪಿನಿಂದ ಅಗ್ರ-2 ತಂಡಗಳು ಸೆಮೀಸ್‌ಗೇರಲಿವೆ.

ವಿರಾಟ್ ಕೊಹ್ಲಿ ಮೊದಲೆರಡು ಟೆಸ್ಟ್‌ನಿಂದ ಹೊರಗುಳಿದಿದ್ದೇಕೆ..? ಕೊನೆಗೂ ಬಯಲಾಯ್ತು ಸತ್ಯ..!

ಭಾರತ ಈ ಪಂದ್ಯದಲ್ಲಿ ಗೆದ್ದು ಅಗ್ರಸ್ಥಾನಿಯಾಗಿಯೇ ಸೆಮೀಸ್‌ಗೇರಲು ಕಾಯುತ್ತಿದೆ. ಒಂದು ವೇಳೆ ಸೋತರೂ ನೆಟ್‌ ರನ್‌ರೇಟ್‌ ಉತ್ತಮವಾಗಿರುವ ಹಿನ್ನೆಲೆಯಲ್ಲಿ ತಂಡಕ್ಕೆ ಸೆಮೀಸ್‌ ಅವಕಾಶ ಸಿಗುವ ಸಾಧ್ಯತೆ ಹೆಚ್ಚು. ಅತ್ತ ನೇಪಾಳ ಒಂದೂ ಪಂದ್ಯ ಗೆಲ್ಲದೆ ಅಂಕಪಟ್ಟಿಯಲ್ಲಿ ಕೊನೆ ಸ್ಥಾನದಲ್ಲಿದೆ. ಹೀಗಾಗಿ ಭಾರತ ವಿರುದ್ಧ ಗೆದ್ದರೂ ಸೆಮಿಫೈನಲ್‌ಗೇರುವುದಿಲ್ಲ.

ಪಂದ್ಯ: ಮಧ್ಯಾಹ್ನ 1.30ಕ್ಕೆ