ಕರ್ನಾಟಕ ಹಾಗೂ ಕೇರಳ ನಡುವಿನ ಎರಡನೇ ರಣಜಿ ಪಂದ್ಯವು ಮತ್ತೊಮ್ಮೆ ನೀರಸ ಡ್ರಾನಲ್ಲಿ ಅಂತ್ಯವಾಗುವ ಸಾಧ್ಯತೆ ದಟ್ಟವಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ

ಬೆಂಗಳೂರು: ದಶಕಗಳ ಬಳಿಕ ಟ್ರೋಫಿ ಗೆಲ್ಲುವ ನಿರೀಕ್ಷೆಯೊಂದಿಗೆ ಈ ಸಲ ರಣಜಿ ಟ್ರೋಫಿ ಕ್ರಿಕೆಟ್‌ ಟೂರ್ನಿಗೆ ಕಾಲಿಟ್ಟಿದ್ದ ಕರ್ನಾಟಕಕ್ಕೆ ಮತ್ತೆ ಮತ್ತೆ ಅದೃಷ್ಠ ಕೈಕೊಡುತ್ತಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ತಂಡದ ಸತತ 2ನೇ ಪಂದ್ಯವೂ ಮೊದಲ ಇನ್ನಿಂಗ್ಸ್‌ ಮುಕ್ತಾಯಗೊಳ್ಳದೆ ಡ್ರಾಗೊಳ್ಳುವ ಸಾಧ್ಯತೆ ಹೆಚ್ಚಿದೆ.

ಕರ್ನಾಟಕ-ಕೇರಳ ನಡುವೆ ನಗರದ ಹೊರವಲಯದ ಆಲೂರಿನಲ್ಲಿ ನಡೆಯುತ್ತಿರುವ ಪಂದ್ಯದ 3ನೇ ದಿನದಾಟ ಮಳೆಗೆ ಆಹುತಿಯಾಯಿತು. ಮೊದಲ ದಿನ 23 ಹಾಗೂ 2ನೇ ದಿನ 27 ಓವರ್‌ ಆಟ ನಡೆದಿತ್ತು. 3ನೇ ದಿನ ಹೆಚ್ಚು ಮಳೆ ಇಲ್ಲದಿದ್ದರೂ ಮೈದಾನ ಸಂಪೂರ್ಣ ಒದ್ದೆಯಾಗಿದ್ದ ಕಾರಣ ಆಟ ನಡೆಯಲಿಲ್ಲ. ಸೋಮವಾರ ಕೊನೆ ದಿನವಾಗಿದ್ದು, ಪಂದ್ಯ ಡ್ರಾಗೊಳ್ಳುವುದು ಬಹುತೇಕ ಖಚಿತ ಎನಿಸಿಕೊಂಡಿದೆ. ಮೊದಲ ಇನ್ನಿಂಗ್ಸ್ ಪೂರ್ಣಗೊಳ್ಳದೆ ಪಂದ್ಯ ಡ್ರಾ ಆದರೆ ಇತ್ತಂಡಗಳು ತಲಾ ಒಂದು ಅಂಕ ಪಡೆಯುತ್ತವೆ. ಮಧ್ಯಪ್ರದೇಶ ವಿರುದ್ಧ ಮೊದಲ ಪಂದ್ಯದಲ್ಲೂ ರಾಜ್ಯ ತಂಡ ಒಂದು ಅಂಕಕ್ಕೆ ತೃಪ್ತಿಪಟ್ಟುಕೊಂಡಿತ್ತು.

ಪೋಕ್ಸೋ ಪ್ರಕರಣ ರದ್ದು: ಭಾರತ ಹಾಕಿ ತಂಡಕ್ಕೆ ಮರಳಿಗೆ ವರುಣ್‌ ಕುಮಾರ್

ಮಹಿಳಾ ಟಿ20: ಮಳೆಗೆ ಕರ್ನಾಟಕದ ಪಂದ್ಯ ಬಲಿ

ಕೋಲ್ಕತಾ: ರಾಷ್ಟ್ರೀಯ ಮಹಿಳಾ ಟಿ20 ಟೂರ್ನಿಯಲ್ಲಿ ಭಾನುವಾರ ಕರ್ನಾಟಕ ಹಾಗೂ ಛತ್ತೀಸ್‌ಗಢ ನಡುವಿನ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿದೆ. ಶುಕ್ರವಾರ ಉತ್ತರ ಪ್ರದೇಶ ವಿರುದ್ಧ ಪಂದ್ಯವೂ ಮಳೆಗೆ ಬಲಿಯಾಗಿತ್ತು. ಸದ್ಯ ಕರ್ನಾಟಕ 3 ಪಂದ್ಯಗಳಲ್ಲಿ 1 ಗೆಲುವಿನೊಂದಿಗೆ ಒಟ್ಟು 8 ಅಂಕ ಗಳಿಸಿ ‘ಬಿ’ ಗುಂಪಿನಲ್ಲಿ 3ನೇ ಸ್ಥಾನದಲ್ಲಿದೆ. ತಂಡದ ನಾಕೌಟ್‌ ಪ್ರವೇಶ ಅನುಮಾನವೆನಿಸಿದೆ.

ಮಹಿಳಾ ಚುಟುಕು ವಿಶ್ವಕಪ್: ಹರಿಣಗಳನ್ನು ಮಣಿಸಿದ ಕಿವೀಸ್‌ಗೆ ಚೊಚ್ಚಲ ಟಿ20 ವಿಶ್ವಕಪ್ ಕಿರೀಟ!

ಜೆಎಸ್‌ಡಬ್ಲ್ಯು ಸ್ಪೋರ್ಟ್ಸ್‌ ಸಂಸ್ಥೆ ಕ್ರಿಕೆಟ್‌ ನಿರ್ದೇಶಕರಾಗಿ ದಾದಾ

ನವದೆಹಲಿ: ಭಾರತದ ಮಾಜಿ ನಾಯಕ, ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್‌ ಗಂಗೂಲಿ ಅವರು ಜೆಎಸ್‌ಡಬ್ಲ್ಯು ಸ್ಪೋರ್ಟ್ಸ್‌ ಸಂಸ್ಥೆಯ ಕ್ರಿಕೆಟ್‌ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ. ಅವರು ಐಪಿಎಲ್‌, ಡಬ್ಲ್ಯುಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಹಾಗೂ ದಕ್ಷಿಣ ಆಫ್ರಿಕಾದ ಟಿ20 ಲೀಗ್‌ನಲ್ಲಿ ಪ್ರಿಟೋರಿಯಾ ಕ್ಯಾಪಿಟಲ್ಸ್‌ ತಂಡಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ ಎಂದು ಜೆಎಸ್‌ಡಬ್ಲ್ಯು ಸಂಸ್ಥೆ ತಿಳಿಸಿದೆ. ಗಂಗೂಲಿ 2019ರಲ್ಲಿ ಡೆಲ್ಲಿ ತಂಡದ ಮಾರ್ಗದರ್ಶಕರಾಗಿ ನೇಮಕಗೊಂಡಿದ್ದರು. ಬಳಿಕ ತಂಡದ ಡೈರೆಕ್ಟರ್ ಆಫ್‌ ಕ್ರಿಕೆಟರ್‌ ಆಗಿಯೂ ಸೇವೆ ಸಲ್ಲಿಸಿದ್ದಾರೆ.