ಕೊರೋನಾ ಲಸಿಕೆ ಪಡೆದ ಟೀಂ ಇಂಡಿಯಾ ಕೋಚ್ ರವಿ ಶಾಸ್ತ್ರಿ!
ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವರು ಕೊರೋನಾ ಲಸಿಕೆ ಹಾಕಿಸಿಕೊಂಡಿದ್ದಾರೆ. 60 ವರ್ಷ ಮೇಲ್ಪಟ್ಟ ವಿಭಾಗದಲ್ಲಿ ಮೊದಲ ಡೋಸ್ ಪಡೆದಿದ್ದಾರೆ. ಇದೀಗ ಟೀಂ ಇಂಡಿಯಾ ಕೋಚ್ ರವಿ ಶಾಸ್ತ್ರಿ ಕೂಡ ಲಸಿಕೆ ಪಡೆದಿದ್ದಾರೆ.
ಅಹಮ್ಮದಾಬಾದ್(ಮಾ.02): ಭಾರತದಲ್ಲಿ ಕೊರೋನಾ ವೈರಸ್ ವಿರುದ್ಧದ ಲಸಿಕೆ ಅಭಿಯಾನ ಮತ್ತಷ್ಟು ಚುರುಕುಗೊಂಡಿದೆ. ನಿನ್ನೆಯಿಂದ (ಮಾ.01) 60 ವರ್ಷ ಮೇಲ್ಪಟ್ಟ ಹಾಗೂ ಆರೋಗ್ಯ ಸಮಸ್ಯೆ ಎದುರಿಸುತ್ತಿರವ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ. ಮೊದಲ ದಿನ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವರು ಲಸಿಕೆ ಪಡೆದುಕೊಂಡಿದ್ದರು. ಇದೀಗ 2ನೇ ದಿನ ಟೀಂ ಇಂಡಿಯಾ ಕೋಚ್ ರವಿ ಶಾಸ್ತ್ರಿ ಕೊರೋನಾ ಲಸಿಕೆ ಪಡೆದುಕೊಂಡಿದ್ದಾರೆ.
ದಪ್ಪ ಚರ್ಮದ ರಾಜಕಾರಣಿಗಳಿಗೆ ಯಾವ ಸೂಜಿ? ಆಸ್ಪತ್ರೆಯಲ್ಲಿ ಮೋದಿ ಹಾಸ್ಯಚಟಾಕಿ
ಇಂಗ್ಲೆಂಡ್ ವಿರುದ್ಧದ 3ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಅಹಮ್ಮದಾಬಾದ್‌ನಲ್ಲಿ ಭರ್ಜರಿ ಅಭ್ಯಾಸ ನಡೆಸುತ್ತಿದೆ. ಇದರ ನಡುವೆ ಇಂದು ರವಿ ಶಾಸ್ತ್ರಿ ಅಹಮ್ಮದಾಬಾದ್ ಅಪೋಲೋ ಆಸ್ಪತ್ರೆಗೆ ತೆರಳಿ ಲಸಿಕೆ ಹಾಕಿಸಿಕೊಂಡಿದ್ದಾರೆ. ಮೊದಲ ಡೋಸ್ ಹಾಕಿಸಿಕೊಂ ಸಂತಸವನ್ನು ಶಾಸ್ತ್ರಿ ಟ್ವಿಟರ್ ಮೂಲಕ ಹಂಚಿಕೊಂಡಿದ್ದಾರೆ.
ಸಾಂಕ್ರಾಮಿಕ ರೋಗದ ವಿರುದ್ಧ ಶಕ್ತವಾಗಿ ಹೋರಾಡಬಲ್ಲ ಲಸಿಕೆ ಕಂಡುಹಿಡಿಯೋ ಮೂಲಕ ವೈದ್ಯರು, ವಿಜ್ಞಾನಿಗಳು ಭಾರತದ ಹಿರಿಮೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದಿದ್ದಾರೆ. ವೈದ್ಯರು ಮತ್ತು ವಿಜ್ಞಾನಿಗಳಿಗೆ ಧನ್ಯವಾದಗಳು. ಅಹಮ್ಮದಾಬಾದ್‌ನಲ್ಲಿ ಆಸ್ಪತ್ರೆ ಸಿಬ್ಬಂದಿ ತೋರಿದ ವೃತ್ತಿಪರತೆಗೆ ಸಲಾಂ ಎಂದು ಶಾಸ್ತ್ರಿ ಟ್ವೀಟ್ ಮಾಡಿದ್ದಾರೆ.
ಮಾರ್ಚ್ 4 ರಿಂದ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಅಂತಿಮ ಪಂದ್ಯ ನಡೆಯಲಿದೆ. ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲೂ ಜಯಭೇರಿ ಬಾರಿಸುವ ವಿಶ್ವಾಸ ಕೊಹ್ಲಿ ಸೈನ್ಯಕ್ಕಿದೆ