ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ವಿದಾಯ ಘೋಷಿಸಿದ ಸ್ಪಿನ್ ಲೆಜೆಂಡ್ ರವಿಚಂದ್ರನ್ ಅಶ್ವಿನ್!

ಟೀಂ ಇಂಡಿಯಾ ದಿಗ್ಗಜ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಭಾರತ ಪರ 106 ಟೆಸ್ಟ್ ಪಂದ್ಯಗಳನ್ನಾಡಿ 537 ವಿಕೆಟ್ ಕಬಳಿಸಿರುವ ಅಶ್ವಿನ್, 37 ಬಾರಿ 5+ ವಿಕೆಟ್ ಕಬಳಿಸಿದ ಸಾಧನೆ ಮಾಡಿದ್ದಾರೆ ಮತ್ತು 6 ಶತಕಗಳನ್ನು ಸಹ ಬಾರಿಸಿದ್ದಾರೆ.

Ravichandran Ashwin Announces Retirement From International Cricket kvn

ಬ್ರಿಸ್ಬೇನ್: ಟೀಂ ಇಂಡಿಯಾ ದಿಗ್ಗಜ ಆಫ್ ಸ್ಪಿನ್ನರ್, ಭಾರತ ಪರ ಎರಡನೇ ಗರಿಷ್ಠ ವಿಕೆಟ್ ಕಬಳಿಸಿದ ಬೌಲರ್ ರವಿಚಂದ್ರನ್ ಅಶ್ವಿನ್, ದಿಢೀರ್ ಎನ್ನುವಂತೆ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಗಾಬಾ ಟೆಸ್ಟ್ ಪಂದ್ಯವು ಡ್ರಾನಲ್ಲಿ ಅಂತ್ಯವಾದ ಬೆನ್ನಲ್ಲೇ ಅಚ್ಚರಿ ಎನ್ನುವಂತೆ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್ ಬೈ ಹೇಳಿದ್ದಾರೆ.

ಭಾರತ ಪರ 106 ಟೆಸ್ಟ್ ಪಂದ್ಯಗಳನ್ನಾಡಿ 537 ವಿಕೆಟ್ ಕಬಳಿಸಿರುವ ಅಶ್ವಿನ್, 37 ಬಾರಿ 5+ ವಿಕೆಟ್ ಕಬಳಿಸಿದ ಸಾಧನೆ ಮಾಡಿದ್ದಾರೆ. ಇದಷ್ಟೇ ಅಲ್ಲದೇ ಬ್ಯಾಟಿಂಗ್‌ನಲ್ಲೂ 6 ಶತಕ ಸಿಡಿಸುವ ಮೂಲಕ ತಾವೊಬ್ಬ ಉಪಯುಕ್ತ ಆಲ್ರೌಂಡರ್ ಎನ್ನುವುದನ್ನು ಜಗತ್ತಿನ ಮುಂದೆ ಅನಾವರಣ ಮಾಡಿದ್ದರು. ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪರ್ತ್ ಟೆಸ್ಟ್ ಪಂದ್ಯದಿಂದ ಅಶ್ವಿನ್ ಹೊರಗುಳಿದಿದ್ದರು. ಇನ್ನು ಇದಾದ ಬಳಿಕ ಅಡಿಲೇಡ್‌ನಲ್ಲಿ ನಡೆದ ಪಿಂಕ್ ಬಾಲ್ ಟೆಸ್ಟ್‌ನಲ್ಲಿ ಅಶ್ವಿನ್ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದಿದ್ದರು. ಇನ್ನು ಗಾಬಾ ಟೆಸ್ಟ್‌ನಲ್ಲಿ ಅಶ್ವಿನ್‌ಗೆ ಸ್ಥಾನ ಸಿಕ್ಕಿರಲಿಲ್ಲ.

ಭಾರತ-ಆಸ್ಟ್ರೇಲಿಯಾ ನಡುವಿನ ಗಾಬಾ ಟೆಸ್ಟ್ ಡ್ರಾನಲ್ಲಿ ಅಂತ್ಯ!

ರವಿಚಂದ್ರನ್ ಅಶ್ವಿನ್‌ ಟೆಸ್ಟ್‌ ಕ್ರಿಕೆಟ್‌ನಲ್ಲಿ ಭಾರತ ಪರ ಅತಿವೇಗದ 50, 100, 150, 200, 250, 300, 350, 400, 450, 500 ವಿಕೆಟ್ ಕಬಳಿಸಿದ ಸಾಧನೆ ಮಾಡಿದ್ದರು.  ಅನಿಲ್ ಕುಂಬ್ಳೆ ಬಳಿಕ ಭಾರತ ಕ್ರಿಕೆಟ್ ಕಂಡ ದಿಗ್ಗಜ ಸ್ಪಿನ್ನರ್ ಆಗಿ ರವಿಚಂದ್ರನ್ ಅಶ್ವಿನ್ ಹೊರಹೊಮ್ಮಿದ್ದರು. ರವಿಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಜೋಡಿ ಹಲವಾರು ಟೆಸ್ಟ್ ಸರಣಿಯನ್ನು ಗೆಲ್ಲಿಸಿಕೊಡುವಲ್ಲಿ ಯಶಸ್ವಿಯಾಗಿತ್ತು.

Latest Videos
Follow Us:
Download App:
  • android
  • ios