ರೋಹಿತ್ ಶರ್ಮಾಗೆ ಆರ್‌ಸಿಬಿ ತಂಡ ಕೂಡಿಕೊಳ್ಳಲು ಬೆಂಗಳೂರು ಅಭಿಮಾನಿಯೊಬ್ಬ ಮನವಿ ಮಾಡಿಕೊಂಡ ವಿಡಿಯೋವೀಗ ವೈರಲ್ ಆಗಿದೆ

ಬೆಂಗಳೂರು: ನ್ಯೂಜಿಲೆಂಡ್‌ ವಿರುದ್ಧದ ಮೊದಲ ಟೆಸ್ಟ್‌ನ 4ನೇ ದಿನವಾದ ಶನಿವಾರ ಭಾರತದ ನಾಯಕ ರೋಹಿತ್‌ ಶರ್ಮಾಗೆ ಬೆಂಗಳೂರಿನ ಅಭಿಮಾನಿಗಳು ಐಪಿಎಲ್‌ನಲ್ಲಿ ಆರ್‌ಸಿಬಿ ತಂಡವನ್ನು ಸೇರಿಕೊಳ್ಳುವಂತೆ ಮನವಿ ಮಾಡಿದ ಪ್ರಸಂಗ ನಡೆಯಿತು. ಇದಕ್ಕೆ ರೋಹಿತ್ ಶರ್ಮಾ ಕೊಟ್ಟ ರಿಪ್ಲೇ ವೈರಲ್ ಆಗಿದೆ.

ರೋಹಿತ್‌ ಮೈದಾನದಿಂದ ಪೆವಿಲಿಯನ್‌ಗೆ ತೆರಳುವಾಗ ಕೆಲ ಅಭಿಮಾನಿಗಳು ‘ರೋಹಿತ್‌ ಐಪಿಎಲ್‌ನಲ್ಲಿ ಯಾವ ತಂಡಕ್ಕೆ ಸೇರುತ್ತೀರ’ ಎಂದು ಕೇಳಿದರು. ಇದಕ್ಕೆ ರೋಹಿತ್‌, ‘ಯಾವ ತಂಡ ನೀವೇ ಹೇಳಿ’ ಎಂದಾಗ, ಅಭಿಮಾನಿಯೊಬ್ಬ ‘ಆರ್‌ಸಿಬಿಗೆ ಬನ್ನಿ’ ಎಂದು ಹೇಳಿದ. ಈ ಪ್ರಸಂಗದ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿದೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ಧೋನಿ ಹೆಸರಲ್ಲಿದ್ದ ಅಪರೂಪದ ದಾಖಲೆ ಮುರಿದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್!

ಹೀಗಿತ್ತು ನೋಡಿ ಆ ವಿಡಿಯೋ

Scroll to load tweet…

ಅಕ್ಟೋಬರ್ ತಿಂಗಳೊಳಗಾಗಿ ಎಲ್ಲಾ ಫ್ರಾಂಚೈಸಿಗಳು ತಮಗೆ ಬೇಕಾದ ಆಟಗಾರರ ರೀಟೈನ್ ಮಾಡಿಕೊಳ್ಳಲು ಬಿಸಿಸಿಐ ಅವಕಾಶ ಮಾಡಿಕೊಟ್ಟಿದೆ. ಆದರೆ ಈ ಬಾರಿ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಲಿದ್ದಾರೆ ಎನ್ನುವಂತಹ ಗಾಳಿ ಸುದ್ದಿ ಹರಿದಾಡುತ್ತಿದೆ. ಐಪಿಎಲ್ ಕಂಡ ಯಶಸ್ವಿ ನಾಯಕರಲ್ಲಿ ರೋಹಿತ್ ಶರ್ಮಾ ಅಗ್ರಸ್ಥಾನದಲ್ಲಿ ನಿಲ್ಲುತ್ತಾರೆ. ರೋಹಿತ್ ಶರ್ಮಾ ನಾಯಕತ್ವದಲ್ಲೇ ಮುಂಬೈ ಇಂಡಿಯನ್ಸ್ ತಂಡವು ಬರೋಬ್ಬರಿ 5 ಬಾರಿ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಗೂ ಮುನ್ನ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್ ಪಾಂಡ್ಯ ಅವರನ್ನು ಗುಜರಾತ್ ಟೈಟಾನ್ಸ್ ತಂಡದಿಂದ ಕರೆತಂದು ನಾಯಕ ಪಟ್ಟ ಕಟ್ಟಲಾಗಿತ್ತು. ಹೀಗಿದ್ದೂ ರೋಹಿತ್ ಶರ್ಮಾ, ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಪರ 14 ಪಂದ್ಯಗಳನ್ನಾಡಿ 150ರ ಸ್ಟ್ರೈಕ್‌ರೇಟ್‌ನಲ್ಲಿ 417 ರನ್ ಸಿಡಿಸಿದ್ದರು. ಈ ಮೂಲಕ ಮುಂಬೈ ಇಂಡಿಯನ್ಸ್ ಪರ ಗರಿಷ್ಠ ರನ್ ಸರದಾರರಾಗಿ ಹೊರಹೊಮ್ಮಿದ್ದರು.

ಮಹಿಳಾ ಟಿ20 ವಿಶ್ವಕಪ್: ಇಂದು ದಕ್ಷಿಣ ಆಫ್ರಿಕಾ Vs ನ್ಯೂಜಿಲೆಂಡ್ ಫೈನಲ್

ಇನ್ನು ಕೆಲ ಮಾಧ್ಯಮಗಳ ವರದಿಯ ಪ್ರಕಾರ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಈ ಬಾರಿಯ ಮೆಗಾ ಹರಾಜಿಗೂ ಮುನ್ನ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಜಸ್ಪ್ರೀತ್ ಬುಮ್ರಾ ಹಾಗೂ ಹಾರ್ದಿಕ್ ಪಾಂಡ್ಯ ಅವರನ್ನು ರೀಟೈನ್ ಮಾಡಿಕೊಳ್ಳಲು ಮುಂದಾಗಿದೆ ಎಂದು ವರದಿಯಾಗಿದೆ.

ಚೊಚ್ಚಲ ಐಪಿಎಲ್ ಟ್ರೋಫಿ ಕನವರಿಕೆಯಲ್ಲಿ ಆರ್‌ಸಿಬಿ:

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕಳೆದ 17 ಆವೃತ್ತಿಯಲ್ಲಿ ಪಾಲ್ಗೊಂಡಿದ್ದರೂ ಒಮ್ಮೆಯೂ ಕಪ್ ಗೆಲ್ಲಲು ಸಾಧ್ಯವಾಗಿಲ್ಲ. ಮೂರು ಬಾರಿ ಫೈನಲ್ ಪ್ರವೇಶಿಸಿದ್ದೇ ಇಲ್ಲಿವರೆಗಿನ ಶ್ರೇಷ್ಠ ಸಾಧನೆ ಎನಿಸಿಕೊಂಡಿದೆ. ಮುಂಬರುವ ಐಪಿಎಲ್‌ನಲ್ಲಾದರೂ ಆರ್‌ಸಿಬಿ ಕಪ್ ಗೆಲ್ಲುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.