16ನೇ ಆವೃತ್ತಿಯ ಐಪಿಎಲ್ ಟೂರ್ನಿಯಿಂದ ಹೊರಬಿದ್ದಿರುವ ರಜತ್ ಪಾಟೀದಾರ್‌ರಜತ್ ಪಾಟೀದಾರ್ ಬದಲಿಗೆ ಆರ್‌ಸಿಬಿ ತಂಡ ಕೂಡಿಕೊಂಡ ಕರ್ನಾಟಕದ ವೇಗಿರೀಸ್ ಟಾಪ್ಲಿ ಬದಲಿಗೆ ಆರ್‌ಸಿಬಿ ಕೂಡಿಕೊಂಡ ವೇಯ್ನ್ ಪಾರ್ನೆಲ್
ಬೆಂಗಳೂರು(ಏ.07): ಹಿಮ್ಮಡಿ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ರಜತ್ ಪಾಟೀದಾರ್ 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನಿಂದ ಹೊರಬಿದ್ದಿದ್ದರು. ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಶುಕ್ರವಾರವಾದ ಇಂದು(07/04/22) ರಜತ್ ಪಾಟೀದಾರ್ ಅವರ ಬದಲಿಗೆ ಕರ್ನಾಟಕದ ವೇಗಿ ವೈಶಾಕ್ ವಿಜಯ್ ಕುಮಾರ್‌ಗೆ ತಂಡದಲ್ಲಿ ಸ್ಥಾನ ಕಲ್ಪಿಸಿದೆ.
ಕಳೆದ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಎಲಿಮಿನೇಟರ್ ಪಂದ್ಯದಲ್ಲಿ ಕೆಚ್ಚೆದೆಯ ಶತಕ ಸಿಡಿಸುವ ಮೂಲಕ ಮಿಂಚಿದ್ದ ರಜತ್ ಪಾಟೀದಾರ್, ಈ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಒಂದೂ ಪಂದ್ಯವನ್ನಾಡದೇ ತಂಡದಿಂದ ಹೊರಬಿದ್ದಿದ್ದರು. ಇದೀಗ ಪಾಟೀದಾರ್ ಬದಲಿಗೆ ಕರ್ನಾಟಕದ ಪ್ರತಿಭಾನ್ವಿತ ವೇಗದ ಬೌಲರ್ ವೈಶಾಕ್ ವಿಜಯ್ ಕುಮಾರ್ ಅವರನ್ನು ತಮ್ಮ ತೆಕ್ಕೆಗೆ ಸೆಳೆದುಕೊಳ್ಳುವಲ್ಲಿ ಆರ್‌ಸಿಬಿ ಯಶಸ್ವಿಯಾಗಿದೆ. ಕರ್ನಾಟಕ ಪರ 14 ಟಿ20 ಪಂದ್ಯಗಳನ್ನಾಡಿ 22 ವಿಕೆಟ್ ಕಬಳಿಸಿರುವ ವೈಶಾಕ್ ವಿಜಯ್ ಕುಮಾರ್ ಅವರನ್ನು 20 ಲಕ್ಷ ರುಪಾಯಿ ಮೂಲ ಬೆಲೆಗೆ ಆರ್‌ಸಿಬಿ ಪಾಳಯ ಕೂಡಿಕೊಂಡಿದ್ದಾರೆ.
ಇನ್ನು ಇದೇ ವೇಳೆ ಗಾಯಗೊಂಡು ಆರ್‌ಸಿಬಿ ತಂಡದಿಂದ ಹೊರಬಿದ್ದ ರೀಸ್ ಟಾಪ್ಲೆ ಅವರ ಬದಲಿ ಆಟಗಾರನನ್ನು ಹೆಸರಿಸಿದೆ. ರೀಸ್ ಟಾಪ್ಲೆ ಬದಲಿಗೆ ದಕ್ಷಿಣ ಆಫ್ರಿಕಾದ ಆಲ್ರೌಂಡರ್ ವೇಯ್ನ್ ಪಾರ್ನೆಲ್ ಹಾಗೂ ರಜತ್ ಪಾಟೀದಾರ್ ಬದಲಿಗೆ ಕರ್ನಾಟಕದ ವೇಗಿ ವೈಶಾಕ್ ವಿಜಯ್ ಕುಮಾರ್ ಇನ್ನುಳಿದ ಐಪಿಎಲ್ ಪಂದ್ಯಗಳಿಗೆ ಆರ್‌ಸಿಬಿ ತಂಡ ಕೂಡಿಕೊಂಡಿದ್ದಾರೆ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಟ್ವೀಟ್ ಮೂಲಕ ತಿಳಿಸಿದೆ.
16ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 5 ಬಾರಿಯ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ಎದುರು ಭರ್ಜರಿ ಗೆಲುವು ಸಾಧಿಸಿತ್ತು. ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಆರ್‌ಸಿಬಿ ತಂಡವು 8 ವಿಕೆಟ್ ಜಯ ಸಾಧಿಸಿತ್ತು. ಇನ್ನು ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಅರ್‌ಸಿಬಿ ಪಾಲಿನ ಎರಡನೇ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಎದುರು 81 ರನ್ ಹೀನಾಯ ಸೋಲು ಕಂಡಿತ್ತು.
IPL 2023 ಗಾಯಾಳು ರೀಸ್ ಟಾಪ್ಲಿ ಔಟ್, RCB ಪಡೆಗೆ ಹೊಸ ಮಾರಕ ವೇಗಿ ಸೇರ್ಪಡೆ..!
ಆರ್‌ಸಿಬಿಯ ನೆಟ್ ರನ್‌ರೇಟ್‌ಗೆ ಹೊಡೆತ!
ಈ ಸೋಲು ಆರ್‌ಸಿಬಿಯ ನೆಟ್ ರನ್‌ರೇಟ್‌ಗೆ ಭಾರೀ ಹೊಡೆತ ನೀಡಿದೆ. ಮೊದಲ ಪಂದ್ಯದ ಬಳಿಕ +1.981 ಇದ್ದ ನೆಟ್ ರನ್‌ರೇಟ್, ಈ ಸೋಲಿನ ಬಳಿಕ -1.256ಗೆ ಕುಸಿದಿದೆ. ಮುಂದಿನ ಪಂದ್ಯಗಳಲ್ಲಿ ತಂಡ ಗೆಲ್ಲುವುದು ಮಾತ್ರವಲ್ಲ, ನೆಟ್ ರನ್‌ರೇಟ್ ಉತ್ತಮಗೊಳಿಸಿಕೊಳ್ಳುವುದರ ಕಡೆಗೂ ಹೆಚ್ಚಿನ ಗಮನ ನೀಡಬೇಕಿದೆ.
ಇದೀಗ ಫಾಫ್ ಡು ಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಏಪ್ರಿಲ್ 10ರಂದು ಎಂ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಲಖನೌ ತಂಡದ ಎದುರು ಗೆದ್ದು ಜಯದ ಹಳಿಗೆ ಮರಳಲು ಆರ್‌ಸಿಬಿ ತಂಡವು ಎದುರು ನೋಡುತ್ತಿದೆ.
