ಆರ್‌ಸಿಬಿ ಫ್ರಾಂಚೈಸಿಯು ಮುಂಬರುವ ಐಪಿಎಲ್ ಮೆಗಾ ಹರಾಜಿನಲ್ಲಿ ಈ ಇಬ್ಬರು ಆಟಗಾರರಿಗಾಗಿ ಆರ್‌ಟಿಎಂ ಕಾರ್ಡ್ ಬಳಸಲು ಮಾಸ್ಟರ್ ಪ್ಲಾನ್ ರೂಪಿಸಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ
ಬೆಂಗಳೂರು: 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚೊಚ್ಚಲ ಕಪ್ ಗೆಲ್ಲುವ ಕನವರಿಕೆಯಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು, ಇದೀಗ ಐಪಿಎಲ್ ಮೆಗಾ ಹರಾಜಿಗೆ ಸಜ್ಜಾಗುತ್ತಿದೆ. ಈಗಾಗಲೇ ಮೆಗಾ ಹರಾಜಿಗೂ ಮುನ್ನ ಸಾಕಷ್ಟು ಅಳೆದುತೂಗಿ ವಿರಾಟ್ ಕೊಹ್ಲಿ, ರಜತ್ ಪಾಟೀದಾರ್ ಹಾಗೂ ಯಶ್ ದಯಾಳ್ ಅವರನ್ನು ರೀಟೈನ್ ಮಾಡಿಕೊಂಡಿದೆ. ಇನ್ನು ಆರ್‌ಸಿಬಿ ಫ್ರಾಂಚೈಸಿಯು ತನ್ನ ನಾಯಕ ಫಾಫ್ ಡು ಪ್ಲೆಸಿಸ್, ಸ್ಪೋಟಕ ಬ್ಯಾಟರ್‌ಗಳಾದ ಗ್ಲೆನ್ ಮ್ಯಾಕ್ಸ್‌ವೆಲ್, ವಿಲ್ ಜ್ಯಾಕ್ಸ್ ಅವರನ್ನು ಅಚ್ಚರಿಯ ರೀತಿಯಲ್ಲಿ ತಂಡದಿಂದ ರಿಲೀಸ್ ಮಾಡಿದೆ. ಆದರೆ ಆರ್‌ಸಿಬಿ ಫ್ರಾಂಚೈಸಿಯು ಮೆಗಾ ಹರಾಜಿನಲ್ಲಿ ತನಗೆ ಬೇಕಾದ ಇಬ್ಬರು ಆಟಗಾರರನ್ನು ತನ್ನ ತೆಕ್ಕೆಗೆ ಸೆಳೆದುಕೊಳ್ಳಲು ಮಾಸ್ಟರ್ ಪ್ಲಾನ್ ರೂಪಿಸಿದೆ. ಹೀಗಾದಲ್ಲಿ ಮತ್ತೆ ಈ ಇಬ್ಬರು ಆರ್‌ಸಿಬಿ ಆಟಗಾರರು ಮುಂದಿನ ಆವೃತ್ತಿಯಲ್ಲೂ ಬೆಂಗಳೂರು ತಂಡದಲ್ಲೇ ಕಾಣಿಸಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ.
ಉಳಿದೆಲ್ಲಾ ಐಪಿಎಲ್ ಫ್ರಾಂಚೈಸಿಗಳಿಗೆ ಹೋಲಿಸಿದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅತಿದೊಡ್ಡ ಫ್ಯಾನ್ ಬೇಸ್ ಹೊಂದಿದೆ. ಕಳೆದ 17 ಐಪಿಎಲ್ ಅವೃತ್ತಿಯಲ್ಲಿ ಪಾಲ್ಗೊಂಡು ಕಪ್ ಗೆಲ್ಲದೇ ಇದ್ದರೂ ಆರ್‌ಸಿಬಿ ಅಭಿಮಾನಿಗಳ ಸಂಖ್ಯೆ ಮಾತ್ರ ಕಮ್ಮಿಯಾಗಿಲ್ಲ. ಆರ್‌ಸಿಬಿ ತಂಡದಲ್ಲಿ ಕ್ರಿಸ್ ಗೇಲ್, ಎಬಿ ಡಿವಿಲಿಯರ್ಸ್, ಡೇಲ್ ಸ್ಟೇನ್ ಅವರಂತಹ ಆಟಗಾರರು ತಂಡದಲ್ಲಿದ್ದರೂ ಅರ್‌ಸಿಬಿ ಕಪ್ ಗೆದ್ದಿಲ್ಲ. ವಿರಾಟ್ ಕೊಹ್ಲಿ ಐಪಿಎಲ್ ಇತಿಹಾಸದಲ್ಲೇ ಗರಿಷ್ಠ ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಕಳೆದ 17 ಆವೃತ್ತಿಗಳಲ್ಲಿ ಆರ್‌ಸಿಬಿ ತಂಡವನ್ನು ಪ್ರತಿನಿಧಿಸಿದ್ದರೂ ಕ್ರಿಕೆಟ್ ದಿಗ್ಗಜ ಕೊಹ್ಲಿಗೆ ಐಪಿಎಲ್ ಕಪ್ ಗೆಲ್ಲಲು ಸಾಧ್ಯವಾಗಿಲ್ಲ. ಆದರೆ ಇದೀಗ ಮೆಗಾ ಹರಾಜಿನಲ್ಲಿ ಹೊಸ ರಣತಂತ್ರದೊಂದಿಗೆ ಕಣಕ್ಕಿಳಿಯಲು ಆರ್‌ಸಿಬಿ ಸಜ್ಜಾಗಿದ್ದು, ತನ್ನ ಬಳಿ ಇರುವ ಮೂರು RTM ಕಾರ್ಡ್ ಅನ್ನು ಸರಿಯಾಗಿ ಬಳಸಿಕೊಳ್ಳಲು ಎದುರು ನೋಡುತ್ತಿದೆ.
ನನ್ನ ಮಗನ ಕ್ರಿಕೆಟ್ ಭವಿಷ್ಯ ಹಾಳು ಮಾಡಿದ್ದೇ ಈ ನಾಲ್ವರು: ಸಂಜು ಸ್ಯಾಮ್ಸನ್ ತಂದೆಯ ಗಂಭೀರ ಆರೋಪ!
ಈ ಇಬ್ಬರನ್ನು ಆರ್‌ಟಿಎಂ ಕಾರ್ಡ್ ಬಳಸಿ ಖರೀದಿಸಲು ಆರ್‌ಸಿಬಿ ಮಾಸ್ಟರ್ ಪ್ಲಾನ್:
1. ಗ್ಲೆನ್ ಮ್ಯಾಕ್ಸ್‌ವೆಲ್:
ಆಸ್ಟ್ರೇಲಿಯಾ ಮೂಲದ ಸ್ಟಾರ್ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಅವರನ್ನು 2021ರ ಐಪಿಎಲ್ ಹರಾಜಿನಲ್ಲಿ ಆರ್‌ಸಿಬಿ ಫ್ರಾಂಚೈಸಿಯು 14.25 ಕೋಟಿ ರುಪಾಯಿ ನೀಡಿ ಖರೀದಿಸಿತ್ತು. ಆರಂಭದಲ್ಲಿ ಆರ್ಭಟಿಸಿದ್ದ ಮ್ಯಾಕ್ಸ್‌ವೆಲ್ ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ದಯನೀಯ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದರು. 2024ರ ಐಪಿಎಲ್‌ನಲ್ಲಿ ಆರ್‌ಸಿಬಿ ಪರ 10 ಪಂದ್ಯಗಳನ್ನಾಡಿ ಕೇವಲ 52 ರನ್ ಬಾರಿಸಲಷ್ಟೇ ಶಕ್ತರಾಗಿದ್ದರು. ಈ ಕಾರಣಕ್ಕಾಗಿಯೇ ಆರ್‌ಸಿಬಿ ಮ್ಯಾಕ್ಸ್‌ವೆಲ್ ರನ್ನು ಕೈಬಿಟ್ಟಿತು. ಆದರೆ ಏಕಾಂಗಿ ಪಂದ್ಯವನ್ನು ಗೆಲುವಿನ ದಡ ಸೇರಿಸುವ ಕ್ಷಮತೆ ಇರುವ ಮ್ಯಾಕ್ಸ್‌ವೆಲ್ ಅವರನ್ನು RTM ಕಾರ್ಡ್ ಬಳಸಿ ಕಡಿಮೆ ಮೊತ್ತಕ್ಕೆ ಖರೀದಿಸುವ ಲೆಕ್ಕಾಚಾರ ಹಾಕಿಕೊಂಡಿದೆ ಆರ್‌ಸಿಬಿ.
ಐಪಿಎಲ್ ಮೆಗಾ ಹರಾಜು: ಅನ್‌ಸೋಲ್ಡ್ ಭೀತಿಯಲ್ಲಿದ್ದಾರೆ ಈ 5 ವಿದೇಶಿ ಸ್ಟಾರ್ ಪ್ಲೇಯರ್ಸ್!
2. ವಿಲ್ ಜ್ಯಾಕ್ಸ್:
ಇಂಗ್ಲೆಂಡ್ ಮೂಲದ ವಿಸ್ಪೋಟಕ ಬ್ಯಾಟರ್ ವಿಲ್ ಜ್ಯಾಕ್ಸ್ ಅವರನ್ನು ಆರ್‌ಸಿಬಿ ಆರ್‌ಟಿಎಂ ಕಾರ್ಡ್ ಬಳಸಿ ರೀಟೈನ್ ಮಾಡುವ ರಣತಂತ್ರ ಹೆಣೆದಿದೆ. ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ಪರ ವಿಲ್ ಜ್ಯಾಕ್ಸ್ ಅದ್ಭುತ ಪ್ರದರ್ಶನ ತೋರಿದ್ದರು. ವಿಲ್ ಜ್ಯಾಕ್ಸ್ ಅವರನ್ನು ಕಡಿಮೆ ಮೊತ್ತಕ್ಕೆ ರೀಟೈನ್ ಮಾಡಿಕೊಳ್ಳುವ ಉದ್ದೇಶದಿಂದ ಆರ್‌ಟಿಎಂ ಕಾರ್ಡ್ ಬಳಸಿ ಬೆಂಗಳೂರಿನಲ್ಲೇ ಉಳಿಸಿಕೊಳ್ಳಲು ಆರ್‌ಸಿಬಿ ಫ್ರಾಂಚೈಸಿ ಮಾಸ್ಟರ್ ಪ್ಲಾನ್ ಮಾಡಿದೆ.
