ಮೊದಲ ಪಂದ್ಯದಲ್ಲೇ ಬಲಿಷ್ಠ ಮುಂಬೈ ಎದುರು ಬೀಗಿರುವ ಆರ್‌ಸಿಬಿ ಇದೀಗ ಸನ್‌ರೈಸರ್ಸ್‌ ಹೈದರಾಬಾದ್‌ ಎದುರು ಎರಡನೇ ಪಂದ್ಯಕ್ಕೆ ಸಜ್ಜಾಗಿದೆ. ಎರಡನೇ ಪಂದ್ಯಕ್ಕೂ ಮುನ್ನ ಆರ್‌ಸಿಬಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಏನದು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

ಚೆನ್ನೈ(ಏ.13): 14ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ವಿರುದ್ದ ಕೊನೆಯ ಎಸೆತದಲ್ಲಿ ರೋಚಕ ಜಯ ಸಾಧಿಸಿದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ಇದೀಗ ಮತ್ತೊಂದು ಗುಡ್‌ ನ್ಯೂಸ್‌ ಸಿಕ್ಕಿದೆ

ಕೋವಿಡ್‌ನಿಂದ ಗುಣಮುಖರಾಗಿ ಟೂರ್ನಿ ಆರಂಭಕ್ಕೆ ಮೊದಲೇ ತಂಡ ಕೂಡಿಕೊಂಡಿದ್ದ ಆರ್‌ಸಿಬಿಯ ಆರಂಭಿಕ ಬ್ಯಾಟ್ಸ್‌ಮನ್‌ ದೇವದತ್‌ ಪಡಿಕ್ಕಲ್‌, ಮೊದಲ ಪಂದ್ಯಕ್ಕೆ ಗೈರಾಗಿದ್ದರು. ಇನ್ನಷ್ಟು ಚೇತರಿಸಿಕೊಳ್ಳಲಿ ಎನ್ನುವ ಕಾರಣಕ್ಕೆ ಎಡಗೈ ಬ್ಯಾಟ್ಸ್‌ಮನ್‌ ಪಡಿಕ್ಕಲ್‌ ಅವರನ್ನು ಮೊದಲ ಪಂದ್ಯದಿಂದ ಹೊರಗಿಡಲಾಗಿತ್ತು. 

Scroll to load tweet…

ಇದೀಗ ದೇವದತ್ ಪಡಿಕ್ಕಲ್‌ ಸಂಪೂರ್ಣ ಗುಣಮುಖರಾಗಿದ್ದು, ಬುಧವಾರ(ಏ.14) ನಡೆಯಲಿರುವ ಸನ್‌ರೈಸ​ರ್ಸ್‌ ಹೈದರಾಬಾದ್‌ ವಿರುದ್ಧದ ಪಂದ್ಯದಲ್ಲಿ ಆಡಲು ಸಿದ್ಧರಿರುವುದಾಗಿ ತಿಳಿಸಿದ್ದಾರೆ. ಆರ್‌ಸಿಬಿಯ ಟ್ವೀಟರ್‌ ಖಾತೆಯಲ್ಲಿ ಹಾಕಿರುವ ವಿಡಿಯೋದಲ್ಲಿ ಮಾತನಾಡಿರುವ ಅವರು, ‘ಕೋವಿಡ್‌ನಿಂದ ಹಿನ್ನಡೆಯಾಗಿದ್ದು ನಿಜ. ಈಗ ಸಂಪೂರ್ಣವಾಗಿ ಗುಣಮುಖನಾಗಿದ್ದೇನೆ. ಆಡಲು ಸಿದ್ಧನಿದ್ದೇನೆ’ ಎಂದಿದ್ದಾರೆ.

IPL 2021 ಆರ್‌ಸಿಬಿ ಮ್ಯೂಸಿಕ್‌ ಬ್ಯಾಂಡ್‌ ಫೋಟೋ ವೈರಲ್‌

13ನೇ ಆವೃತ್ತಿಯ ಐಪಿಎಲ್‌ ಟೂರ್ನಿಯ ಎಲಿಮಿನೇಟರ್‌ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ವಿರುದ್ದ ಮುಗ್ಗರಿಸಿ ಆರ್‌ಸಿಬಿ ಟೂರ್ನಿಯಿಂದ ಹೊರಬಿದ್ದಿತ್ತು. ಇದೀಗ ಉಭಯ ತಂಡಗಳು ಮತ್ತೊಮ್ಮೆ ಮುಖಾಮುಖಿಯಾಗುತ್ತಿದ್ದು, ಎಲಿಮಿನೇಟರ್‌ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಳ್ಳಲು ವಿರಾಟ್ ಕೊಹ್ಲಿ ಪಡೆ ತುದಿಗಾಲಿನಲ್ಲಿ ನಿಂತಿದೆ.