ಚೊಚ್ಚಲ ಆವೃತ್ತಿಯ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎದುರು ಆಡಿದ ಎರಡೂ ಪಂದ್ಯಗಳಲ್ಲೂ ಮುಂಬೈ ಇಂಡಿಯನ್ಸ್ ತಂಡವು ಗೆಲುವಿನ ನಗೆ ಬೀರಿತ್ತು. ಆಗ ಆರ್‌ಸಿಬಿ ಆಟಗಾರ್ತಿಯರು ಕಣ್ಣೀರು ಹಾಕಿಕೊಂಡು ಲೀಗ್ ಹಂತದಲ್ಲೇ ಹೊರಬಿದ್ದರೆ, ಮತ್ತೊಂದು ಕಡೆ ಮುಂಬೈ ಇಂಡಿಯನ್ಸ್ ಆಟಗಾರ್ತಿಯರು ಹಾಗೂ ಮಾಲೀಕರಾದ ನೀತಾ ಅಂಬಾನಿ ಗೆಲುವಿನ ಕೇಕೆ ಹಾಕಿದ್ದರು
ನವದೆಹಲಿ(ಮಾ.16): 2024ನೇ ಸಾಲಿನ ವುಮೆನ್ಸ್ ಪ್ರೀಮಿಯರ್ ಲೀಗ್ ಟೂರ್ನಿಯ ಎಲಿಮಿನೇಟರ್ ಪಂದ್ಯದಲ್ಲಿ ಸ್ಮೃತಿ ಮಂಧನಾ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂಬೈ ಇಂಡಿಯನ್ಸ್ ತಂಡವನ್ನು ಬಗ್ಗುಬಡಿದ ಫೈನಲ್‌ಗೆ ಲಗ್ಗೆಯಿಡುವಲ್ಲಿ ಯಶಸ್ವಿಯಾಗಿದೆ. ಆರ್‌ಸಿಬಿ ಫೈನಲ್ ಪ್ರವೇಶಿಸುತ್ತಿದ್ದಂತೆಯೇ ಸಂಭ್ರಮದಲ್ಲಿ ಕುಣಿದು ಕುಪ್ಪಳಿಸಿದರೆ, ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವು ಮೈದಾನದಲ್ಲೇ ಕಣ್ಣೀರಿಟ್ಟಿತು. ಇದೆಲ್ಲದರ ನಡುವೆ ಪಂದ್ಯ ವೀಕ್ಷಿಸಲು ಬಂದಿದ್ದ ಮುಂಬೈ ಇಂಡಿಯನ್ಸ್ ತಂಡದ ತಂಡದ ಮಾಲೀಕರಾದ ನೀತಾ ಅಂಬಾನಿಯವರು ಕಣ್ಣೀರು ಹಾಕಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.
ಹೌದು, ಚೊಚ್ಚಲ ಆವೃತ್ತಿಯ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎದುರು ಆಡಿದ ಎರಡೂ ಪಂದ್ಯಗಳಲ್ಲೂ ಮುಂಬೈ ಇಂಡಿಯನ್ಸ್ ತಂಡವು ಗೆಲುವಿನ ನಗೆ ಬೀರಿತ್ತು. ಆಗ ಆರ್‌ಸಿಬಿ ಆಟಗಾರ್ತಿಯರು ಕಣ್ಣೀರು ಹಾಕಿಕೊಂಡು ಲೀಗ್ ಹಂತದಲ್ಲೇ ಹೊರಬಿದ್ದರೆ, ಮತ್ತೊಂದು ಕಡೆ ಮುಂಬೈ ಇಂಡಿಯನ್ಸ್ ಆಟಗಾರ್ತಿಯರು ಹಾಗೂ ಮಾಲೀಕರಾದ ನೀತಾ ಅಂಬಾನಿ ಗೆಲುವಿನ ಕೇಕೆ ಹಾಕಿದ್ದರು. ಇದೀಗ ಕರ್ಮ್ ರಿಟರ್ನ್ಸ್ ಎನ್ನುವಂತೆ ಎರಡನೇ ಆವೃತ್ತಿಯ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಮುಂಬೈ ಇಂಡಿಯನ್ಸ್ ಎದುರು ಆರ್‌ಸಿಬಿ ತಂಡವು ಸತತ ಎರಡು ಗೆಲುವು ದಾಖಲಿಸುವ ಮೂಲಕ ಹಳೆ ಸೋಲಿನ ಲೆಕ್ಕ ಚುಕ್ತಾ ಮಾಡಿದೆ. ಈಗ ಕೇಕೆ ಹಾಕುವ ಸರದಿ ಆರ್‌ಸಿಬಿ ಆಟಗಾರ್ತಿಯದ್ದಾದರೇ, ಕಣ್ಣೀರು ಹಾಕುವ ಸರದಿ ನೀತಾ ಅಂಬಾನಿಯದ್ದು ಆಗಿದೆ.
ಮುಂಬೈ ಮಣಿಸಿ RCB ಪಡೆಯನ್ನು ಫೈನಲ್‌ಗೇರಿಸಿದ ಪೆರ್ರಿ..! ಈಕೆ ನಮ್ ಬಂಗಾರ ಎಂದ್ರು ಫ್ಯಾನ್ಸ್..!
ಇನ್ನು ಮುಂಬೈ ಇಂಡಿಯನ್ಸ್ ತಂಡವು ಐಪಿಎಲ್ ಟೂರ್ನಿಯಲ್ಲಿ ಬರೋಬ್ಬರಿ 5 ಬಾರಿ ಟ್ರೋಫಿ ಜಯಿಸುವ ಮೂಲಕ ಅತಿಹೆಚ್ಚು ಬಾರಿ ಚಾಂಪಿಯನ್ ಆದ ತಂಡಗಳ ಪೈಕಿ ಚೆನ್ನೈ ಸೂಪರ್ ಕಿಂಗ್ಸ್ ಜತೆ ಜಂಟಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಈ ಮೂಲಕ ಐಪಿಎಲ್‌ನ ಯಶಸ್ವಿ ತಂಡಗಳಲ್ಲಿ ಒಂದು ಎನಿಸಿಕೊಂಡಿದೆ. ಇನ್ನು ವುಮೆನ್ಸ್ ಪ್ರೀಮಿಯರ್ ಲೀಗ್‌ನ ಚೊಚ್ಚಲ ಆವೃತ್ತಿಯಲ್ಲೂ ಮುಂಬೈ ಇಂಡಿಯನ್ಸ್ ತಂಡವೇ ಚಾಂಪಿಯನ್ ಆಗಿದೆ. ಹೀಗಿದ್ದೂ ಎರಡನೇ ಸೀಸನ್ WPL ಸೋಲುತ್ತಿದ್ದಂತೆಯೇ ಮುಖ ಸಪ್ಪಗೆ ಮಾಡಿಕೊಂಡಿದ್ದನ್ನು ಕಂಡ ನೆಟ್ಟಿಗರು, ಆಸೆ ಇರಬೇಕು, ಆದರೆ ದುರಾಸೆ ಇರಬಾರದು ಎಂದು ಕಿವಿ ಮಾತು ಹೇಳಿದ್ದಾರೆ.
ಇನ್ನು WPL ಎಲಿಮಿನೇಟರ್ ಪಂದ್ಯದ ಬಗ್ಗೆ ಹೇಳುವುದಾದರೇ, ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ ತಂಡವು ಆರಂಭಿಕ ಆಘಾತದ ಹೊರತಾಗಿಯೂ ಎಲೈಸಿ ಪೆರ್ರಿ ಬಾರಿಸಿದ ಸಮಯೋಚಿತ ಅರ್ಧಶತಕ(66)ದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ ಆರ್‌ಸಿಬಿ ತಂಡವು 6 ವಿಕೆಟ್ ಕಳೆದುಕೊಂಡು 135 ರನ್ ಕಲೆಹಾಕಿತ್ತು. ಇನ್ನು ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು ಆರ್‌ಸಿಬಿ ಸಂಘಟಿತ ಪ್ರದರ್ಶನದ ಎದುರು ಮಂಡಿಯೂರಿತು. ಹರ್ಮನ್‌ಪ್ರೀತ್ ಕೌರ್ ಪಡೆ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 130 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರೊಂದಿಗೆ ಮುಂಬೈ ಇಂಡಿಯನ್ಸ್ ತಮ್ಮ ಅಭಿಯಾನ ಮುಗಿಸಿತು.
WPL 2024 ಕಪ್ ಕನಸಿನಲ್ಲಿರುವ ಆರ್‌ಸಿಬಿ ಫೈನಲ್‌ಗೆ ಲಗ್ಗೆ!
ಇನ್ನು ಇದೀಗ ಸ್ಮೃತಿ ಮಂಧನಾ ನೇತೃತ್ವದ ಆರ್‌ಸಿಬಿ ತಂಡವು ಮಾರ್ಚ್ 17ರಂದು ನಡೆಯಲಿರುವ ವುಮೆನ್ಸ್ ಪ್ರೀಮಿಯರ್ ಲೀಗ್ ಫೈನಲ್‌ನಲ್ಲಿ ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಈ ಬಾರಿ ಯಾವುದೇ ತಂಡವು ಗೆಲುವು ಸಾಧಿಸಿದರೂ, ಹೊಸ ತಂಡ ಚಾಂಪಿಯನ್ ಆಗಿ ಹೊರಹೊಮ್ಮಲಿದೆ.
