Asianet Suvarna News Asianet Suvarna News

IPL 2022: ಎಲ್ಲರಿಗಿಂತ ಮೊದಲು ಕ್ವಾರಂಟೈನ್‌ ಪ್ರವೇಶಿಸಿದ ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿಸ್..!

* 15ನೇ ಆವೃತ್ತಿಯ ಐಪಿಎಲ್ ಟೂರ್ನಿ ಮಾರ್ಚ್ 26ರಿಂದ ಆರಂಭ

* 3 ದಿನಗಳ ಕ್ವಾರಂಟೈನ್ ಪ್ರವೇಶಿಸಿದ ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿಸ್

* ಆರ್‌ಸಿಬಿಗೆ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಸವಾಲು

RCB new captain Faf du Plessis enters quarantine in Mumbai ahead of IPL 2022 kvn
Author
Bengaluru, First Published Mar 15, 2022, 4:10 PM IST

ಮುಂಬೈ(ಮಾ.15): ರಾಯಲ್ ಚಾಲೆಂಜರ್ಸ್‌ ಬೆಂಗಳೂರು (Royal Challengers Bangalore) ತಂಡದ ನೂತನ ನಾಯಕರಾಗಿ ಆಯ್ಕೆಯಾಗಿರುವ ದಕ್ಷಿಣ ಆಫ್ರಿಕಾದ ಅನುಭವಿ ಕ್ರಿಕೆಟಿಗ ಫಾಫ್ ಡು ಪ್ಲೆಸಿಸ್ (Faf du Plessis), ಬೆಂಗಳೂರು ತಂಡದ ಮೊದಲ ಆಟಗಾರನಾಗಿ ಕ್ವಾರಂಟೈನ್ ಪ್ರವೇಶಿಸಿದ್ದಾರೆ. ಮುಂಬರುವ 15ನೇ ಆವೃತ್ತಿಯ ಐಪಿಎಲ್‌ಗೆ (IPL 2022) ಸಿದ್ದತೆ ನಡೆಸುವ ಮುನ್ನ ಫಾಫ್ ಡು ಪ್ಲೆಸಿಸ್ ಮೂರು ದಿನಗಳ ಕಡ್ಡಾಯ ಕ್ವಾರಂಟೈನ್‌ಗೆ ಒಳಗಾಗಲಿದ್ದಾರೆ. 

ಮೂರು ಬಾರಿ ಐಪಿಎಲ್ ಫೈನಲ್ ಪ್ರವೇಶಿಸಿದ್ದರೂ ಕಪ್ ಗೆಲ್ಲಲು ವಿಫಲವಾಗಿರುವ ಬೆಂಗಳೂರು ಮೂಲದ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಫ್ರಾಂಚೈಸಿಯು ಕಳೆದ ತಿಂಗಳು ನಡೆದ ಆಟಗಾರರ ಮೆಗಾ ಹರಾಜಿನಲ್ಲಿ (IPL Mega Auction) ಸಾಕಷ್ಟು ಅಳೆದು-ತೂಗಿ ಬರೋಬ್ಬರಿ 7 ಕೋಟಿ ರುಪಾಯಿ ನೀಡಿ ಫಾಫ್ ಡು ಪ್ಲೆಸಿಸ್ ಅವರನ್ನು ತನ್ನ ತೆಕ್ಕೆಗೆ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿತ್ತು. ಇನ್ನು ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯು ಮುಗಿಯುತ್ತಿದ್ದಂತೆಯೇ ವಿರಾಟ್ ಕೊಹ್ಲಿ (Virat Kohli) ಆರ್‌ಸಿಬಿ ನಾಯಕ ಸ್ಥಾನಕ್ಕೆ ಗುಡ್‌ ಬೈ ಹೇಳಿದ್ದರು. ಹೀಗಾಗಿ ಮಾರ್ಚ್‌ 12ರಂದ ಬೆಂಗಳೂರಿನಲ್ಲಿ ನಡೆದ RCB Unbox ಕಾರ್ಯಕ್ರಮದಲ್ಲಿ ಆರ್‌ಸಿಬಿ ಫ್ರಾಂಚೈಸಿಯು ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಫಾಫ್ ಡು ಪ್ಲೆಸಿಸ್‌ಗೆ ನಾಯಕ ಪಟ್ಟವನ್ನು ಕಟ್ಟಿದೆ.

ಫಾಫ್‌ ಡು ಪ್ಲೆಸಿಸ್‌ ಕ್ವಾರಂಟೈನ್‌ಗೆ ತೆರಳುವ ಮುನ್ನ, ಮೊದಲಿಗನಾಗಿ ಕ್ವಾರಂಟೈನ್ (quarantine) ಶುರು ಮಾಡಿದ್ದು, ಕೊನೆಯವನಾಗಿ ಟೂರ್ನಿ ಮುಗಿಸುವ ಭರವಸೆ ಹೊಂದಿದ್ದೇನೆ ಎಂದು ಹೇಳಿದ್ದಾರೆ. ಈ ಕುರಿತಂತೆ ಆರ್‌ಸಿಬಿ (RCB) ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಫಾಫ್‌ ಮಾತನಾಡಿರುವ ವಿಡಿಯೋವನ್ನು ಶೇರ್ ಮಾಡಿದೆ. ನಾವು ಈಗಷ್ಟೇ ಬಂದಿಳಿದಿದ್ದೇವೆ. ಅಧಿಕೃತವಾಗಿ ಆರ್‌ಸಿಬಿ ಪರ ಮೊದಲ ದಿನವನ್ನು ಆರಂಭಿಸಿದ್ದೇನೆ. ಸಾಕಷ್ಟು ಪ್ರಯಾಣದ ಬಳಿಕ ಇದೀಗ ಮೂರು ದಿನಗಳ ಕ್ವಾರಂಟೈನ್‌ಗೆ ಒಳಗಾಗುತ್ತಿದ್ದೇನೆ. ಇದಾದ ಬಳಿಕ ಐಪಿಎಲ್ ಆವೃತ್ತಿಯು ಆರಂಭವಾಗಲಿದೆ. ನಾವಂತೂ ಈ ಬಾರಿಯ ಐಪಿಎಲ್‌ ಟೂರ್ನಿಯಲ್ಲಿ ಪಾಲ್ಗೊಳ್ಳಲು ಉತ್ಸುಕರಾಗಿದ್ದೇವೆ. ಇನ್ನು ಕೆಲವೇ ದಿನಗಳಲ್ಲಿ ಉಳಿದ ಆಟಗಾರರು ನಮ್ಮನ್ನು ಕೂಡಿಕೊಳ್ಳಲಿದ್ದಾರೆ. ಆದಷ್ಟು ಬೇಗ ಉಳಿದ ಆಟಗಾರರನ್ನು ಭೇಟಿಯಾಗಲು ಎದುರು ನೋಡುತ್ತಿದ್ದೇನೆ ಎಂದು ಫಾಫ್ ಡು ಪ್ಲೆಸಿಸ್ ಹೇಳಿದ್ದಾರೆ.

37 ವರ್ಷದ ಫಾಫ್ ಡು ಪ್ಲೆಸಿಸ್ ಇದೇ ಮೊದಲ ಬಾರಿಗೆ ಐಪಿಎಲ್ ಟೂರ್ನಿಯಲ್ಲಿ ನಾಯಕನಾಗಿ ತಂಡವನ್ನು ಮುನ್ನಡೆಸಲು ಸಜ್ಜಾಗಿದ್ದಾರೆ. ಫಾಫ್ ಡು ಪ್ಲೆಸಿಸ್‌ ದಕ್ಷಿಣ ಆಫ್ರಿಕಾ ಪರ 36 ಟೆಸ್ಟ್, 39 ಏಕದಿನ ಹಾಗೂ 40 ಟಿ20 ಪಂದ್ಯಗಳಲ್ಲಿ ನಾಯಕನಾಗಿ ತಂಡವನ್ನು ಮುನ್ನಡೆಸಿದ್ದಾರೆ. 2013ರಲ್ಲಿ ದಕ್ಷಿಣ ಆಫ್ರಿಕಾ ತಂಡದ ಪೂರ್ಣಪ್ರಮಾಣದ ನಾಯಕರಾದ ಬಳಿಕ ಫಾಫ್ ಡು ಪ್ಲೆಸಿಸ್ ನಾಯಕತ್ವದಡಿ ದಕ್ಷಿಣ ಆಫ್ರಿಕಾ ತಂಡವು 25 ಟಿ20 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿತ್ತು. ಆರ್‌ಸಿಬಿ ತಂಡದಲ್ಲಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ದಿನೇಶ್ ಕಾರ್ತಿಕ್ ಅವರಂತಹ ಟಿ20 ಸ್ಪೆಷಲಿಸ್ಟ್ ಆಟಗಾರರಿದ್ದು, ಹೊಸ ಹುರುಪಿನೊಂದಿಗೆ ಟೂರ್ನಿಗೆ ಸಜ್ಜಾಗಿದೆ.

IPL 2022: DRS, ಸೂಪರ್ ಓವರ್‌ ಸೇರಿದಂತೆ ಮುಂಬರುವ ಐಪಿಎಲ್‌ ಟೂರ್ನಿಯಲ್ಲಿ ಮಹತ್ವದ ಬದಲಾವಣೆ..!

15ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ದ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ. ಮಾರ್ಚ್‌ 27ರಂದು ನಡೆಯಲಿರುವ ಈ ಹೈವೋಲ್ಟೇಜ್ ಪಂದ್ಯಕ್ಕೆ ಮುಂಬೈನ ಡಿವೈ ಪಾಟೀಲ್ ಮೈದಾನ ಆತಿಥ್ಯವನ್ನು ವಹಿಸಲಿದೆ. ಕಳೆದ ವರ್ಷಗಳಿಂದ ಕಪ್ ಗೆಲ್ಲಲು ವಿಫಲವಾಗುತ್ತಾ ಬಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅದೃಷ್ಟವನ್ನು ಫಾಫ್ ಡು ಪ್ಲೆಸಿಸ್ ಬದಲಿಸುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ. 

Follow Us:
Download App:
  • android
  • ios