ಸಿಡ್ನಿ[ಜ.06]: ಇತ್ತೀಚೆಗಷ್ಟೇ ನಡೆದ ಐಪಿಎಲ್ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರಿಕೊಂಡಿರುವ ಜೋಶ್ ಫಿಲಿಫ್ ಬಿಗ್ ಬ್ಯಾಶ್ ಲೀಗ್ ಟೂರ್ನಿಯಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ್ದಾರೆ.

IPL 2020: ಹರಾಜಿನ ಬಳಿಕ RCB ತಂಡದ ಫುಲ್ ಲಿಸ್ಟ್!

ಹೌದು, ಬಿಗ್ ಬ್ಯಾಶ್ ಲೀಗ್ ಟೂರ್ನಿಯಲ್ಲಿ ಸಿಡ್ನಿ ಸಿಕ್ಸರ್ ಪರ ಆಡುವ ಫಿಲಿಫ್, ಅಡಿಲೇಡ್ ಸ್ಟ್ರೈಕರ್ಸ್ ವಿರುದ್ಧ ಅಜೇಯ 85 ರನ್ ಚಚ್ಚಿದ್ದಾರೆ. ಈ ಮೂಲಕ ತಮ್ಮ ತಂಡ 7 ವಿಕೆಟ್’ಗಳ ಭರ್ಜರಿ ಜಯ ದಾಖಲಿಸಲು ನೆರವಾಗಿದ್ದಾರೆ.
ಬಿಗ್ ಬ್ಯಾಶ್ ಲೀಗ್ ಟೂರ್ನಿಯಲ್ಲಿ ಜೋಶ್ ಫಿಲಿಫ್ ಮೂರನೇ ಬಾರಿಗೆ 80+ ರನ್ ಬಾರಿಸಿದ ಸಾಧನೆ ಮಾಡಿದ್ದಾರೆ. ಸಿಡ್ನಿ ಸ್ಟ್ರೈಕರ್ಸ್ ಪರ ಈ ಸಾಧನೆ ಮಾಡಿದ ಮೊದಲ ಕ್ರಿಕೆಟಿಗ ಎನ್ನುವ ದಾಖಲೆಯೂ ಫಿಲಿಫ್ ಪಾಲಾಗಿದೆ. 

ಪಂದ್ಯ ಹೇಗಿತ್ತು?

ಮೊದಲು ಬ್ಯಾಟಿಂಗ್ ಮಾಡಿದ್ದ ಅಡಿಲೇಡ್ ಸ್ಟ್ರೈಕರ್ಸ್ ತಂಡ ನಿಗದಿತ 20 ಓವರ್’ಗಳಲ್ಲಿ 6 ವಿಕೆಟ್ ಕಳೆದುಕೊಂಡು 176 ರನ್ ಗಳಿಸಿತ್ತು. ಈ ಮೂಲಕ ಸಿಡ್ನಿ ಸಿಕ್ಸರ್ ತಂಡಕ್ಕೆ ಸ್ಫರ್ಧಾತ್ಮಕ ಗುರಿ ನೀಡಿತ್ತು. ವಿಕೆಟ್ ಕೀಪರ್ ಬ್ಯಾಟ್ಸ್’ಮನ್ ಆಗಿರುವ ಜೋಶ್ ಫಿಲಿಫ್ ಹಾಗೂ ಜಸ್ಟಿನ್ ಅವೆಂಡನೊ ಸ್ಫೋಟಕ ಆರಂಭ ಒದಗಿಸಿದರು. ಈ ಜೋಡಿ ಮೊದಲ ವಿಕೆಟ್’ಗೆ 72 ರನ್’ಗಳ ಜತೆಯಾಟವಾಡಿದರು. ಫಿಲಿಫ್ 52 ಎಸೆತಗಳಲ್ಲಿ 5 ಬೌಂಡರಿ ಹಾಗೂ 4 ಮುಗಿಲೆತ್ತರದ ಸಿಕ್ಸರ್ ನೆರವಿನಿಂದ ಅಜೇಯ 83 ರನ್ ಸಿಡಿಸಿದರು.  

ವಿಕೆಟ್‌ ಪಡೆದ ಖುಷಿಯಲ್ಲಿ ಪಲ್ಟಿ ಹೊಡೆದ ಬೌಲರ್‌!

ಡಿಸೆಂಬರ್ 19ರಂದು ಕೋಲ್ಕತಾದಲ್ಲಿ ನಡೆದ ಆಟಗಾರರ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಲಕ್ಷ ರುಪಾಯಿ ನೀಡಿ ಜೋಶ್ ಫಿಲಿಫ್ ಅವರನ್ನು ಖರೀದಿಸಿತ್ತು. ಐಪಿಎಲ್ ಟೂರ್ನಿಗೂ ಮುನ್ನ ಅಬ್ಬರಿಸಿರುವುದರಿಂದ RCB ತಂಡದ ಬೆಂಚ್ ಸ್ಟ್ರೆಂಥ್ ಇನ್ನಷ್ಟು ಬಲಗೊಂಡಂತೆ ಆಗಿದೆ.