ಕಳೆದ ವರ್ಷದ ಕಾಲ್ತುಳಿತ ದುರಂತದ ಹಿನ್ನೆಲೆಯಲ್ಲಿ ಮತ್ತು ಡಿ.ಕೆ. ಶಿವಕುಮಾರ್ ಅವರ ಪ್ರಮಾಣವಚನ ಸಮಾರಂಭದ ಕಾರಣ, ಈ ಬಾರಿ ಬೆಂಗಳೂರಿನಲ್ಲಿ ವಿಕ್ಟರಿ ಪರೇಡ್ ನಡೆಸದಿರಲು ಆರ್‌ಸಿಬಿ ಫ್ರಾಂಚೈಸಿ ನಿರ್ಧರಿಸಿದೆ. ಸಂಚಾರ ದಟ್ಟಣೆ ಹಾಗೂ ಜನರನ್ನು ನಿಭಾಯಿಸುವ ಸವಾಲುಗಳನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ.

ಅಹಮದಾಬಾದ್‌: ಕಳೆದ ವರ್ಷ ಸಂಭ್ರಮಾಚರಣೆ ವೇಳೆ ನಡೆದಿದ್ದ ಕಾಲ್ತುಳಿತಕ್ಕೆ 11 ಮಂದಿ ಬಲಿಯಾದ ಹಿನ್ನೆಲೆಯಲ್ಲಿ ಈ ಬಾರಿ ಬೆಂಗಳೂರಿನಲ್ಲಿ ವಿಕ್ಟರಿ ಪರೇಡ್‌ ನಡೆಸದಿರಲು ಫ್ರಾಂಚೈಸಿ ನಿರ್ಧರಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಳೆದ ವರ್ಷ ವಿಧಾನಸೌಧದ ಮೆಟ್ಟಿಲುಗಳು ಹಾಗೂ ಚಿನ್ನಸ್ವಾಮಿ ಸ್ಟೇಡಿಯಂ(Chinnaswamy Stadiu)ನಲ್ಲಿ ತರಾತುರಿಯಲ್ಲಿ ಆಯೋಜಿಸಿದ್ದ ವಿಜಯೋತ್ಸವದಿಂದಾಗಿ ಕಾಲ್ತುಳಿತ(stampade) ಸಂಭವಿಸಿತ್ತು. ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿ ಫ್ರಾಂಚೈಸಿ ಕಾನೂನಿನ ಬಿಸಿ ಎದುರಿಸಬೇಕಾಯಿತು. ಹೀಗಾಗಿ ತಪ್ಪು ಪುನರಾವರ್ತನೆ ಆಗಬಾರದೆಂದು ಆರ್‌ಸಿಬಿ ಈ ನಡೆ ಅನಸರಿಸಿದೆ. ‘ಬೆಂಗಳೂರಿನಲ್ಲಿ ಸಂಭ್ರಮಾಚರಣೆ ನಡೆಯುವ ಸಾಧ್ಯತೆ ಕಡಿಮೆ. ಕೆಲವು ಮಾರ್ಗಸೂಚಿಗಳು ಜಾರಿಯಲ್ಲಿವೆ. ನಾವು ಅವುಗಳಿಗೆ ಬದ್ಧವಾಗಿರಬೇಕು’ ಎಂದು ಆರ್‌ಸಿಬಿ ಮೂಲಗಳು ತಿಳಿಸಿವೆ.

ಡಿಕೆಶಿ ಪ್ರಮಾಣಚನವೂ ಕಾರಣ:

ಬೆಂಗಳೂರಿನಲ್ಲಿ ಬುಧವಾರ ಡಿ.ಕೆ.ಶಿವಕುಮಾರ್(DK Shivakumar) ಸಿಎಂ(CM) ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾರ್ಯಕ್ರಮ ನಡೆಯಲಿರುವ ಲೋಕಭವನವು ಚಿನ್ನಸ್ವಾಮಿ ಕ್ರೀಡಾಂಗಣದ ಸಮೀಪದಲ್ಲೇ ಇದೆ. ಈ ಸಂದರ್ಭದಲ್ಲಿ ಆರ್‌ಸಿಬಿ ವಿಕ್ಟರಿ ಪರೇಡ್‌(RCB Victory Parade) ನಡೆಸಿದರೆ ಸಂಚಾರ ದಟ್ಟಣೆ, ಜನರನ್ನು ನಿಭಾಯಿಸುವುದು ಪೊಲೀಸರಿಗೆ ಸವಾಲಾಗಲಿದೆ. ಎರಡೆರಡು ಕಾರ್ಯಕ್ರಮ ನಡೆಸುವುದು ಕಷ್ಟ ಎನ್ನುವ ಕಾರಣಕ್ಕೂ ಆರ್‌ಸಿಬಿ ಈ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.