ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಈ ಹಿಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ರ್ಯಾಂಡ್‌ ಅಂಬಾಸಿಡರ್ ಆಗಿದ್ದರು. ಇದೀಗ ಈ ಟ್ರೇಲರ್‌ನಲ್ಲಿ ಡಾ. ರಾಜ್‌ಕುಮಾರ್ ಹಾಗೂ ಪುನೀತ್ ರಾಜ್‌ಕುಮಾರ್ ಅವರ ಫೋಟೋಗಳನ್ನು ಸ್ಮರಿಸಿಕೊಳ್ಳಲಾಗಿದೆ.

ಬೆಂಗಳೂರು(ಮಾ.14): 2024ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಮಾರ್ಚ್ 22ರಂದು ಟೂರ್ನಿಗೆ ಅಧಿಕೃತ ಚಾಲನೆ ಸಿಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಶುಭಾರಂಭ ಮಾಡಲು ಕಾದಾಡಲಿವೆ. ಇನ್ನು ಉದ್ಘಾಟನಾ ಪಂದ್ಯಕ್ಕೂ ಮುನ್ನ ಮಾರ್ಚ್ 19ರಂದು ಬೆಂಗಳೂರಿನಲ್ಲಿ ಆರ್‌ಸಿಬಿ ಅನ್‌ಬಾಕ್ಸ್ ಕಾರ್ಯಕ್ರಮ ನಡೆಯಲಿದ್ದು, ಫ್ರಾಂಚೈಸಿ ಎರಡನೇ ಟ್ರೇಲರ್ ಬಿಡುಗಡೆ ಮಾಡಿದ್ದಾರೆ. ಎರಡನೇ ಟ್ರೇಲರ್‌ನಲ್ಲಿ ಅಶ್ವಿನಿ ಪುನೀತ್‌ರಾಜ್‌ಕುಮಾರ್ ಕಾಣಿಸಿಕೊಂಡಿದ್ದಾರೆ. 

ಹೌದು, ನಿನ್ನೆಯಷ್ಟೇ ಆರ್‌ಸಿಬಿ ಫ್ರಾಂಚೈಸಿಯು ತನ್ನ ಆರ್‌ಸಿಬಿ ಅನ್‌ಬಾಕ್ಸ್ ಕಾರ್ಯಕ್ರಮದ ಮೊದಲ ಟ್ರೇಲರ್ ಬಿಡುಗಡೆ ಮಾಡಿತ್ತು. ಮೊದಲ ಟ್ರೇಲರ್‌ನಲ್ಲಿ ರಿಷಭ್ ಶೆಟ್ಟಿ ಕಾಣಿಸಿಕೊಂಡಿದ್ದರು. ಇದೀಗ ಎರಡನೇ ಟ್ರೇಲರ್‌ನಲ್ಲಿ ಅಶ್ವಿನಿ ಪುನೀತ್‌ರಾಜ್‌ಕುಮಾರ್ ಕಾಣಿಸಿಕೊಂಡಿದ್ದು, ಮತ್ತೊಮ್ಮೆ ಆರ್‌ಸಿಬಿ ಕನ್ನಡಕ್ಕೆ ಒತ್ತು ನೀಡಿರುವುದನ್ನು ಪರೋಕ್ಷವಾಗಿ ತೋರಿಸಿಕೊಟ್ಟಿದೆ. ರಾಯಲ್ ಚಾಲೆಂಜರ್ಸ್ ಬ್ಯಾಂಗಳೂರು ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಗಿ ಬದಲಾಗುವ ಸಾಧ್ಯತೆಯನ್ನು ಮತ್ತೊಮ್ಮೆ ಈ ಟ್ರೇಲರ್ ಸಾರಿ ಹೇಳಿದಂತಿದೆ.

IPL ಟೂರ್ನಿಗೆ ಕಿಚ್ಚು ಹಚ್ಚಿದ ರಿಷಭ್‌ ಶೆಟ್ಟಿ..! ಕಾಂತಾರ ಹೀರೋ RCB ಬಗ್ಗೆ ಏನ್‌ ಹೇಳ್ತಿದ್ದಾರೆ ಅರ್ಥ ಆಯ್ತಾ..?

ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಈ ಹಿಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ರ್ಯಾಂಡ್‌ ಅಂಬಾಸಿಡರ್ ಆಗಿದ್ದರು. ಇದೀಗ ಈ ಟ್ರೇಲರ್‌ನಲ್ಲಿ ಡಾ. ರಾಜ್‌ಕುಮಾರ್ ಹಾಗೂ ಪುನೀತ್ ರಾಜ್‌ಕುಮಾರ್ ಅವರ ಫೋಟೋಗಳನ್ನು ಸ್ಮರಿಸಿಕೊಳ್ಳಲಾಗಿದೆ.

ಹೀಗಿದೆ ನೋಡಿ ಆ ಟ್ರೇಲರ್:

Scroll to load tweet…

ಇನ್ನು ರಾಯಲ್ ಚಾಲೆಂಜರ್ಸ್ ಬ್ಯಾಂಗಳೂರು(Royal Challengers Bangalore) ತಂಡದ ಹೆಸರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು(Royal Challengers Bengaluru) ಎಂದು ಬದಲಿಸಬೇಕು ಎಂದು ಕಳೆದ 16 ವರ್ಷಗಳಿಂದಲೂ ಕನ್ನಡದ ಆರ್‌ಸಿಬಿ ಅಭಿಮಾನಿಗಳು ಆಗ್ರಹಿಸುತ್ತಲೇ ಬಂದಿದ್ದರು. ಆದರೆ ಸಾಕಷ್ಟು ವರ್ಷಗಳ ಬಳಿಕ ಕೊನೆಗೂ ಆ ನಿರ್ಧಾರ ಕೈಗೊಳ್ಳುವ ಸುಳಿವನ್ನು ಫ್ರಾಂಚೈಸಿ ಬಿಟ್ಟುಕೊಟ್ಟಿದೆ.

ರಾಜಕೀಯಕ್ಕೆ ಎಂಟ್ರಿಕೊಟ್ಟ ಯೂಸುಫ್ ಪಠಾಣ್ ಒಟ್ಟು ಆಸ್ತಿ 248 ಕೋಟಿ..! 6 ಕೋಟಿ ಮನೆಯಲ್ಲಿ ವಾಸ

ಕಳೆದ 16 ವರ್ಷಗಳಿಂದಲೂ ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಾ ಬಂದಿದ್ದರೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇದುವರೆಗೂ ಕಪ್‌ ಗೆಲ್ಲಲು ಸಾಧ್ಯವಾಗಿಲ್ಲ. ಮೂರು ಬಾರಿ ಫೈನಲ್‌ ಪ್ರವೇಶಿಸಿದ್ದೇ ಆರ್‌ಸಿಬಿಯ ಶ್ರೇಷ್ಠ ಪ್ರದರ್ಶನ ಎನಿಸಿದೆ. 2016ರಲ್ಲಿ ಆರ್‌ಸಿಬಿ ತಂಡವು ಕೊನೆಯ ಬಾರಿಗೆ ಫೈನಲ್ ಪ್ರವೇಶಿಸಿತ್ತು. ಇದಾದ ಬಳಿಕ ಬೆಂಗಳೂರು ತಂಡವು ಕಪ್ ಸಮೀಪವೂ ಬಂದಿಲ್ಲ. ಈ ಬಾರಿ ಮೇಲ್ನೋಟಕ್ಕೆ ಸಾಕಷ್ಟು ಬಲಿಷ್ಠವಾಗಿ ಗುರುತಿಸಿಕೊಂಡಿರುವ ಆರ್‌ಸಿಬಿ ತಂಡವು ಕಪ್ ಗೆಲ್ಲುವ ಮೂಲಕ ಬಹುಕಾಲದ ಕನಸು ನನಸು ಮಾಡಿಕೊಳ್ಳಲಿ ಎನ್ನುವುದು ಕೋಟ್ಯಾಂತರ ಅಭಿಮಾನಿಗಳ ಹಾರೈಕೆಯಾಗಿದೆ.