Asianet Suvarna News Asianet Suvarna News

ಐಪಿಎಲ್ 2021 ಭಾಗ-2 ದಿನಾಂಕ ಖಚಿತಪಡಿಸಿದ ರಾಜೀವ್ ಶುಕ್ಲಾ

* ಐಪಿಎಲ್ ಭಾಗ-2 ವೇಳಾಪಟ್ಟಿ ಖಚಿತ ಪಡಿಸಿದ ರಾಜೀವ್ ಶುಕ್ಲಾ

* ರಾಜೀವ್ ಶುಕ್ಲಾ ಬಿಸಿಸಿಐ ಉಪಾಧ್ಯಕ್ಷ

* ಐಪಿಎಲ್ ಟೂರ್ನಿಯು ಸೆಪ್ಟೆಂಬರ್ 19ರಿಂದ ಅಕ್ಟೋಬರ್ 15ರವರೆಗೆ ನಡೆಯಲಿದೆ

Remainder of IPL 2021 to be played between September 19 to October 15 Says Rajeev Shukla kvn
Author
New Delhi, First Published Jun 10, 2021, 1:48 PM IST

ನವದೆಹಲಿ(ಜೂ.10): ಬಹುನಿರೀಕ್ಷಿತ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಇನ್ನುಳಿದ ಪಂದ್ಯಗಳು ಮುಂಬರುವ ಸೆಪ್ಟೆಂಬರ್ 19ರಿಂದ ಅಕ್ಟೋಬರ್ 15ರವರೆಗೆ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ನಡೆಯಲಿದೆ ಎಂದು ಬಿಸಿಸಿಐ ಖಚಿತಪಡಿಸಿದೆ.

ಐಪಿಎಲ್ ಟೂರ್ನಿಯು ಸೆಪ್ಟೆಂಬರ್ 19ರಿಂದ ಅಕ್ಟೋಬರ್ 15ರವರೆಗೆ ನಡೆಯಲಿದೆ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಐಎಎನ್‌ಎಸ್‌ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಐಪಿಎಲ್ ಭಾಗ-2 ಟೂರ್ನಿಗೆ ಯುಎಇ ಆತಿಥ್ಯ ವಹಿಸಲಿದೆ.

ಭಾರತದಲ್ಲಿ ಆಯೋಜನೆಗೊಂಡಿದ್ದ 14ನೇ ಆವೃತ್ತಿಯ ಐಪಿಎಲ್‌ ಟೂರ್ನಿಯ ಮೇಲೆ ಕೋವಿಡ್ ತನ್ನ ವಕ್ರದೃಷ್ಟಿ ಬೀರಿತ್ತು. ಬಯೋ ಬಬಲ್‌ನೊಳಗಿದ್ದ ಆಟಗಾರರು ಹಾಗೂ ಸಹಾಯಕ ಸಿಬ್ಬಂದಿಗಳಿಗೆ ಕೋವಿಡ್ ದೃಢಪಟ್ಟ ಬೆನ್ನಲ್ಲೇ ಮೇ 04ರಂದು ಬಿಸಿಸಿಐ ಅನಿರ್ದಿಷ್ಟಾವಧಿಗೆ ಮುಂದೂಡಿತ್ತು. 14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಇದುವರೆಗೂ 29 ಪಂದ್ಯಗಳು ನಡೆದಿದ್ದು, ಇನ್ನೂ 31 ಪಂದ್ಯಗಳು ನಡೆಯಬೇಕಿವೆ.

ಐಪಿಎಲ್ ಕ್ರಿಕೆಟ್ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌: ಯುಎಇ ಚರಣದ ವೇಳಾಪಟ್ಟಿ ಫೈನಲ್‌..!

ಇನ್ನು ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಆಯೋಜನೆಯ ಆತಿಥ್ಯದ ಹಕ್ಕನ್ನು ಬಿಸಿಸಿಐ ಪಡೆದಿದೆ. ಐಸಿಸಿ ಟಿ20 ವಿಶ್ವಕಪ್ ವೇಳಾಪಟ್ಟಿ ಅಂತಿಮ ದಿನಾಂಕ ಇನ್ನೂ ಪ್ರಕಟಗೊಂಡಿಲ್ಲ. ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ ಅಕ್ಟೋಬರ್ 18ರಿಂದ ಐಸಿಸಿ ಟಿ20 ವಿಶ್ವಕಪ್‌ ಆರಂಭವಾಗಬೇಕಿದೆ. ಐಸಿಸಿ ಟಿ20 ವಿಶ್ವಕಪ್ ಆಯೋಜನೆಯ ಕುರಿತಂತೆ ಬಿಸಿಸಿಐ ಅಂತಿಮವಾಗಿ ಜೂನ್‌ 28ಕ್ಕೆ ಐಸಿಸಿಗೆ ತನ್ನ ತೀರ್ಮಾನವನ್ನು ತಿಳಿಸಬೇಕಾಗಿದೆ.

Follow Us:
Download App:
  • android
  • ios