ಆಸ್ಟ್ರೇಲಿಯಾ ಎದುರು ನವೆಂಬರ್ 22ರಿಂದ ಆರಂಭವಾಗಲಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯನ್ನಾಡಲು ರಿಷಭ್ ಪಂತ್ ಬುಧವಾರ ವಿಮಾನವೇರಿದ್ದಾರೆ

ನವದೆಹಲಿ: ಭಾರತದ ತಾರಾ ಕ್ರಿಕೆಟಿಗ ರಿಷಭ್‌ ಪಂತ್‌ 5 ಪಂದ್ಯಗಳ ಟೆಸ್ಟ್‌ ಸರಣಿಗಾಗಿ ಬುಧವಾರ ಆಸ್ಟ್ರೇಲಿಯಾಕ್ಕೆ ಪ್ರಯಾಣ ಬೆಳೆಸಿದರು. ವಿಮಾನ ನಿಲ್ದಾಣಕ್ಕೆ ಕಾರಿನಲ್ಲಿ ಆಗಮಿಸಿದ ಪಂತ್‌, ಬಳಿಕ ತಾಯಿಯ ಕಾಲಿಗೆ ನಮಸ್ಕರಿಸಿ, ಆಶೀರ್ವಾದ ಪಡೆದರು. ಸರಣಿ ನ.22ಕ್ಕೆ ಆರಂಭಗೊಳ್ಳಲಿದ್ದು, ಭಾರತ ತಂಡದ ಇತರ ಆಟಗಾರರು ಶೀಘ್ರದಲ್ಲೇ ಆಸ್ಟ್ರೇಲಿಯಾಕ್ಕೆ ಪ್ರಯಾಣಿಸಲಿದ್ದಾರೆ.

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯವು ನವೆಂಬರ್ 22ರಿಂದ ಪರ್ತ್‌ನಲ್ಲಿ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಪರ್ತ್ ಟೆಸ್ಟ್‌ ಬಳಿಕ ಡಿಸೆಂಬರ್ 06ರಿಂದ ಅಡಿಲೇಡ್ ಓವಲ್ ಮೈದಾನದಲ್ಲಿ ಪಿಂಕ್ ಬಾಲ್ ಟೆಸ್ಟ್ ಪಂದ್ಯವು ನಡೆಯಲಿದೆ. ಇನ್ನು ಡಿಸೆಂಬರ್ 14ರಿಂದ ಗಾಬಾದಲ್ಲಿ ಮೂರನೇ ಟೆಸ್ಟ್ ಪಂದ್ಯವು ನಡೆದರೆ, ಡಿಸೆಂಬರ್ 26ರಿಂದ ಐತಿಹಾಸಿಕ ಮೆಲ್ಬೊರ್ನ್ ಸ್ಟೇಡಿಯಂನಲ್ಲಿ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವು ನಡೆಯಲಿದೆ. ಇನ್ನು ಜನವರಿ 03ರಿಂದ ಸಿಡ್ನಿ ಕ್ರಿಕೆಟ್ ಸ್ಟೇಡಿಯಂನಲ್ಲಿ 5ನೇ ಹಾಗೂ ಕೊನೆಯ ಟೆಸ್ಟ್ ಪಂದ್ಯವು ನಡೆಯಲಿದೆ.

Scroll to load tweet…

ರಣಜಿಯಲ್ಲಿ ಕರ್ನಾಟಕ vs ಬಂಗಾಳ ಸಮಬಲದ ಹೋರಾಟ

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್‌ ಸರಣಿಗೆ ತಂಡ:

ರೋಹಿತ್‌ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್‌, ಅಭಿಮನ್ಯು ಈಶ್ವರನ್‌, ಶುಭ್‌ಮನ್‌ ಗಿಲ್‌, ವಿರಾಟ್‌ ಕೊಹ್ಲಿ, ಕೆ.ಎಲ್‌.ರಾಹುಲ್‌, ರಿಷಭ್‌ ಪಂತ್‌, ಸರ್ಫರಾಜ್‌ ಖಾನ್‌, ಧೃವ್‌ ಜುರೆಲ್‌, ಆರ್.ಅಶ್ವಿನ್‌, ರವೀಂದ್ರ ಜಡೇಜಾ, ಮೊಹಮದ್‌ ಸಿರಾಜ್‌, ಆಕಾಶ್‌ದೀಪ್‌, ಪ್ರಸಿದ್ಧ್‌ ಕೃಷ್ಣ, ಹರ್ಷಿತ್‌ ರಾಣಾ, ನಿತೀಶ್‌ ರೆಡ್ಡಿ, ವಾಷಿಂಗ್ಟನ್‌ ಸುಂದರ್‌.

ಟೆಸ್ಟ್ ರ್‍ಯಾಂಕಿಂಗ್‌: 10 ವರ್ಷ ಬಳಿಕ ವಿರಾಟ್ ಅಗ-20ರಿಂದ ಔಟ್!

ದುಬೈ: ಕಳಪೆ ಪ್ರದರ್ಶನ ನೀಡುತ್ತಿರುವ ಭಾರತದ ತಾರಾ ಆಟಗಾರ ವಿರಾಟ್ ಕೊಹ್ಲಿ ದಶಕದ ಬಳಿಕ ಐಸಿಸಿ ಟೆಸ್ಟ್ ಬ್ಯಾಟರ್‌ಗಳ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಅಗ್ರ -20ರಿಂದ ಹೊರಬಿದ್ದಿದ್ದಾರೆ. ಬುಧವಾರ ಪ್ರಕಟಗೊ೦ಡ ಪಟ್ಟಿಯಲ್ಲಿ ಕೊಹ್ಲಿ 8 ಸ್ಥಾನ ಕುಸಿತ ಕಂಡು 22ನೇ
ತಲುಪಿ ಸ್ಥಾನದಲ್ಲಿದ್ದಾರೆ. 

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಸೋತರೇ ರೋಹಿತ್ ಶರ್ಮಾ ಟೆಸ್ಟ್‌ ಕ್ರಿಕೆಟ್ ವೃತ್ತಿಬದುಕು ಅಂತ್ಯ!

2014ರಲ್ಲಿ ಕೊನೆ ಬಾರಿ ಅಗ್ರ - 20ರಿಂದ ಹೊರಗಿದ್ದ ವಿರಾಟ್ ಕೊಹ್ಲಿ ಬಳಿಕ 2018ರಲ್ಲಿ ನಂ.1 ಸ್ಥಾನಕ್ಕೇರಿದ್ದರು. ಅಲ್ಲದೆ, ಎಲ್ಲಾ 3 ಮಾದರಿಯಲ್ಲಿ ಅಗ್ರಸ್ಥಾನಕ್ಕೇರಿದ ಮೊದಲ ಭಾರತೀಯ ಆಟಗಾರ ಎನಿಸಿಕೊಂಡಿದ್ದರು. ಇನ್ನು ರಿಷಭ್ ಪಂತ್ 5 ಸ್ಥಾನ ಮೇಲೇರಿ 6ನೇ ಸ್ಥಾನ ಪಡೆದಿದ್ದಾರೆ. ಜೈಸ್ವಾಲ್ 1 ಸ್ಥಾನ ಕುಸಿದು 4ನೇ ಸ್ಥಾನದಲ್ಲಿದ್ದಾರೆ. ಶುಭ್ಮನ್ ಗಿಲ್ 16ನೇ ಸ್ಥಾನಕ್ಕೇರಿದರೆ, ರೋಹಿತ್ ಶರ್ಮಾ 26ನೇ ಸ್ಥಾನಕ್ಕೆ ಕುಸಿದಿದ್ದಾರೆ.