ಟೀಂ ಇಂಡಿಯಾಗೆ ಗುಡ್ ನ್ಯೂಸ್: ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದ ರಿಷಭ್ ಪಂತ್..! ವಿಡಿಯೋ ವೈರಲ್
ಆಗಸ್ಟ್ 15ರಂದು ನಡೆದ ಪಂದ್ಯದಲ್ಲಿ ರಿಷಭ್ ಪಂತ್ ಇದೇ ಮೊದಲ ಬಾರಿಗೆ ಮೈದಾನಕ್ಕಿಳಿದು ತಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ಮತ್ತೊಮ್ಮೆ ಅನಾವರಣ ಮಾಡಿದರು. ರಿಷಭ್ ಪಂತ್ ಅವರು ಬ್ಯಾಟಿಂಗ್ ಮಾಡುವುದನ್ನು ನೋಡಲು ಅಭಿಮಾನಿಗಳು ಕಿಕ್ಕಿರಿದು ತುಂಬಿದ್ದರು.
ಬೆಂಗಳೂರು(ಆ.17): ಕಳೆದ ಡಿಸೆಂಬರ್‌ನಲ್ಲಿ ಭೀಕರ ಕಾರು ಅಪಘಾತಕ್ಕೆ ತುತ್ತಾಗಿದ್ದ ಭಾರತಾ ತಾರಾ ಬ್ಯಾಟರ್ ರಿಷಭ್ ಪಂತ್, ಇದೇ ಮೊದಲ ಬಾರಿ ಕ್ರಿಕೆಟ್ ಮೈದಾನದಲ್ಲಿ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆ. ರಿಷಭ್ ಪಂತ್, ಮಂಗಳವಾರ ವಿಜಯನಗರದಲ್ಲಿ ಆಯೋಜಿಸಲಾಗಿದ್ದ ಕ್ಲಬ್ ಕ್ರಿಕೆಟ್‌ನಲ್ಲಿ ಬ್ಯಾಟ್ ಮಾಡುತ್ತಿರುವ ವಿಡಿಯೋವೊಂದನ್ನು ಐಪಿಎಲ್ ಫ್ರಾಂಚೈಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಟ್ವಿಟರ್‌ನಲ್ಲಿ ವಿಡಿಯೋ ಹಂಚಿಕೊಂಡಿದೆ. ಇದು ಸಾಮಾಜಿಕ ತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ಆಗಸ್ಟ್ 15ರಂದು ನಡೆದ ಪಂದ್ಯದಲ್ಲಿ ರಿಷಭ್ ಪಂತ್ ಇದೇ ಮೊದಲ ಬಾರಿಗೆ ಮೈದಾನಕ್ಕಿಳಿದು ತಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ಮತ್ತೊಮ್ಮೆ ಅನಾವರಣ ಮಾಡಿದರು. ರಿಷಭ್ ಪಂತ್ ಅವರು ಬ್ಯಾಟಿಂಗ್ ಮಾಡುವುದನ್ನು ನೋಡಲು ಅಭಿಮಾನಿಗಳು ಕಿಕ್ಕಿರಿದು ತುಂಬಿದ್ದರು. ಕಳೆದ ಜುಲೈ 21ರಂದು ಬಿಸಿಸಿಐ ರಿಷಭ್ ಪಂತ್ ಚೇತರಿಕೆ ಕುರಿತಂತೆ ಮಹತ್ವದ ಸುದ್ದಿಯೊಂದನ್ನು ಹೊರಹಾಕಿತ್ತು. ರಿಷಭ್ ಪಂತ್ ಬ್ಯಾಟಿಂಗ್ ಹಾಗೂ ವಿಕೆಟ್ ಕೀಪಿಂಗ್ ಪ್ರಾಕ್ಟೀಸ್ ಆರಂಭಿಸಿದ್ದಾರೆ ಎನ್ನುವ ಮಹತ್ವದ ಮಾಹಿತಿಯನ್ನು ತಿಳಿಸಿತ್ತು.
ವಿಶ್ವಕಪ್‌ಗೆ ಪಂತ್ ಅನುಮಾನ: ಗಾಯದಿಂದ ಈಗಷ್ಟೇ ಚೇತರಿಸಿಕೊಂಡಿರುವ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, ಮುಂಬರುವ ಅಕ್ಟೋಬರ್ 05ರಿಂದ ಭಾರತದಲ್ಲೇ ಜರುಗಲಿರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ವೇಳೆಗೆ ಭಾರತ ತಂಡದಲ್ಲಿ ಸ್ಥಾನ ಪಡೆಯುವುದು ಬಹುತೇಕ ಅನುಮಾನ ಎನಿಸಿದೆ. ರಿಷಭ್ ಪಂತ್ ಅನುಪಸ್ಥಿತಿಯಲ್ಲಿ ಕನ್ನಡಿಗ ಕೆ ಎಲ್ ರಾಹುಲ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಬ್ಯಾಟರ್ ಆಗಿ ಭಾರತ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ದಟ್ಟವಾಗಿದೆ. ಇನ್ನು ಎರಡನೇ ಆಯ್ಕೆಯ ವಿಕೆಟ್ ಕೀಪರ್ ಬ್ಯಾಟರ್ ರೂಪದಲ್ಲಿ ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ನಡುವೆ ಪೈಪೋಟಿಯಿದೆ. ಒಂದು ವೇಳೆ ಕೆ ಎಲ್ ರಾಹುಲ್ ಕೂಡಾ ಫಿಟ್ ಆಗದೇ ಹೋದಲ್ಲಿ ಸಂಜು ಹಾಗೂ ಇಶಾನ್ ಕಿಶನ್, ಭಾರತ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಹೆಚ್ಚಿದೆ.
ಟೀಂ ಇಂಡಿಯಾ ಅಭ್ಯಾಸ ಶುರು
ಡಬ್ಲಿನ್: ಐರ್ಲೆಂಡ್ ವಿರುದ್ಧ ಟಿ20 ಸರಣಿಗಾಗಿ ಡಬ್ಲಿನ್‌ಗೆ ತೆರಳಿರುವ ಟೀಂ ಇಂಡಿಯಾ ಆಟಗಾರರು ಬುಧವಾರ ಅಭ್ಯಾಸ ಆರಂಭಿಸಿದ್ದಾರೆ. ನಾಯಕ ಜಸ್‌ಪ್ರೀತ್ ಬೂಮ್ರಾ, ಕರ್ನಾಟಕದ ವೇಗಿ ಪ್ರಸಿದ್ಧ್ ಕೃಷ್ಣ ಸೇರಿದಂತೆ ಎಲ್ಲಾ ಆಟಗಾರರು ನೆಟ್ಸ್‌ನಲ್ಲಿ ಕೆಲ ಕಾಲ ಬೆವರಿಳಿಸಿದರು. ಇದರ ಫೋಟೋಗಳನ್ನು ಬಿಸಿಸಿಐ ಟ್ವೀಟರ್‌ನಲ್ಲಿ ಪ್ರಕಟಿಸಿದೆ. ಸರಣಿಯ ಮೊದಲ ಪಂದ್ಯ ಆ.18ಕ್ಕೆ ನಡೆಯಲಿದ್ದು, ಮತ್ತೆರಡು ಪಂದ್ಯಗಳು ಆ.20 ಮತ್ತು 23ಕ್ಕೆ ನಿಗದಿಯಾಗಿದೆ. ಎಲ್ಲಾ ಪಂದ್ಯಗಳು ಡಬ್ಲಿನ್‌ನಲ್ಲೇ ನಡೆಯಲಿವೆ.
ನಿವೃತ್ತಿ ವಾಪಾಸ್ ಪಡೆದ ವಿಶ್ವಕಪ್ ರಣಬೇಟೆಗಾರ..! ಮತ್ತೆ ವಿಶ್ವಕಪ್ ಗೆಲ್ಲಿಸಲು ಪಣತೊಟ್ಟ ಸ್ಟಾರ್ ಕ್ರಿಕೆಟಿಗ
ಗಾಯ: ಇಂಗ್ಲೆಂಡ್ ಏಕದಿನ ಟೂರ್ನಿಯಿಂದ ಪೃಥ್ವಿ ಔಟ್
ನಾರ್ಥಾಂಪ್ಟನ್: ಭಾರತದ ಯುವ ಬ್ಯಾಟರ್ ಪೃಥ್ವಿ ಶಾ ಇಂಗ್ಲೆಂಡ್ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ಮಂಡಿ ಗಾಯಕ್ಕೆ ತುತ್ತಾಗಿದ್ದು, ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಟೂರ್ನಿಯಲ್ಲಿ ನಾರ್ಥಂಪ್ಟನ್‌ಶೈರ್ ಪರ ಆಡುತ್ತಿದ್ದ 23 ವರ್ಷದ ಪೃಥ್ವಿ ಭಾನುವಾರ ಡರ್ಹಾಮ್ ವಿರುದ್ಧದ ಪಂದ್ಯದ ವೇಳೆ ಗಾಯಗೊಂಡಿದ್ದಾರೆ.
ವಿರಾಟ್ ಕೊಹ್ಲಿಗಿಂತ ಹೆಚ್ಚು ಸಂಪಾದನೆ ಮಾಡಿದ 8 ಸ್ಟಾರ್ ಕ್ರಿಕೆಟಿಗರಿವರು..!
ಅವರು ಈಗಾಗಲೇ ಸ್ಕ್ಯಾನಿಂಗ್‌ಗೆ ಒಳಗಾಗಿದ್ದು, ಗಾಯದ ಪ್ರಮಾಣ ಹೆಚ್ಚಿರುವ ಕಾರಣ ಶುಕ್ರವಾರ ಲಂಡನ್‌ನಲ್ಲಿ ತಜ್ಞ ವೈದ್ಯರನ್ನು ಭೇಟಿಯಾಗಲಿದ್ದಾರೆ. ಅವರ ಮೇಲೆ ಸದ್ಯ ಬಿಸಿಸಿಐ ವೈದ್ಯಕೀಯ ತಂಡ ನಿಗಾ ಇರಿಸಿದೆ. ಪೃಥ್ವಿ ಟೂರ್ನಿಯಲ್ಲಿ 4 ಪಂದ್ಯಗಳನ್ನಾಡಿದ್ದು, ತಲಾ ಒಂದು ದ್ವಿಶತಕ, ಶತಕ ಸಿಡಿಸಿದ್ದಾರೆ.