ಐಪಿಎಲ್ ಮೆಗಾ ಹರಾಜಿಗೆ ಬರಲು ರಿಷಭ್ ಪಂತ್ ಒಲವು; ಆರ್ಸಿಬಿಗೆ ಕರೆತರಲು ಬೆಂಗಳೂರು ಫ್ರಾಂಚೈಸಿ ರಣತಂತ್ರ?
ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್ ಪಂತ್, ಮುಂಬರುವ ಐಪಿಎಲ್ ಮೆಗಾ ಹರಾಜಿನಲ್ಲಿ ಪಾಲ್ಗೊಳ್ಳಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ.
ನವದೆಹಲಿ: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಮುಂಬರುವ ಐಪಿಎಲ್ ಮೆಗಾ ಹರಾಜಿನಲ್ಲಿ ಪಾಲ್ಗೊಳ್ಳಲು ಒಲವು ತೋರಿದ್ದಾರೆ ಎಂದು ವರದಿಯಾಗಿದೆ. ಇಲ್ಲಿಯವರೆಗೂ ರಿಷಭ್ ಪಂತ್, ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅವಿಭಾಜ್ಯ ಅಂಗವಾಗಿ ಗುರುತಿಸಿಕೊಂಡಿದ್ದಾರೆ. ಆದರೆ ಮುಂಬರುವ ಐಪಿಎಲ್ ಟೂರ್ನಿಯಲ್ಲಿ ರಿಷಭ್ ಪಂತ್ ಅವರನ್ನು ಡೆಲ್ಲಿ ಫ್ರಾಂಚೈಸಿಯು ನಾಯಕತ್ವದಿಂದ ಕೆಳಗಿಳಿಸಲು ಮುಂದಾಗಿದೆ ಎಂದು ವರದಿಯಾಗುತ್ತಿರುವ ಬೆನ್ನಲ್ಲೆ ಪಂತ್, ರೀಟೈನ್ ಆಗದೇ ಮೆಗಾ ಹರಾಜಿನಲ್ಲಿ ಪಾಲ್ಗೊಳ್ಳಲು ಒಲವು ತೋರಿದ್ದಾರೆ ಎನ್ನಲಾಗುತ್ತಿದೆ. ಹೀಗಾದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ರಿಷಭ್ ಪಂತ್ ಅವರನ್ನು ತನ್ನ ತೆಕ್ಕೆಗೆ ಸೆಳೆದುಕೊಳ್ಳಲು ರಣತಂತ್ರ ಹೆಣೆಯುತ್ತಿದೆ ಎನ್ನಲಾಗುತ್ತಿದೆ.
ರಿಷಭ್ ಪಂತ್ ಮೆಗಾ ಹರಾಜಿನಲ್ಲಿ ಪಾಲ್ಗೊಳ್ಳಲು ಮನಸ್ಸು ಮಾಡಿರುವುದಕ್ಕೆ ಇನ್ನೊಂದು ಕಾರಣವೂ ಇದೆ ಎನ್ನಲಾಗುತ್ತಿದೆ. ಐಪಿಎಲ್ ಮೆಗಾ ಹರಾಜಿಗೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ತಂಡದ ಹೆಡ್ ಕೋಚ್ ಆಗಿದ್ದ ರಿಕಿ ಪಾಂಟಿಂಗ್ ಹಾಗೂ ಕ್ರಿಕೆಟ್ ಡೈರೆಕ್ಟರ್ ಅಗಿದ್ದ ಸೌರವ್ ಗಂಗೂಲಿ ಅವರನ್ನು ಬದಲಿಸಿತ್ತು. ಈ ಎಲ್ಲಾ ಬೆಳವಣಿಗೆಗಳ ಬಳಿಕ ರಿಷಭ್ ಪಂತ್, ಐಪಿಎಲ್ ಮೆಗಾ ಹರಾಜಿನಲ್ಲಿ ಪಾಲ್ಗೊಳ್ಳಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ.
ಭಾರತ vs ಕಿವೀಸ್ ಮಹಿಳಾ ಏಕದಿನ ಸರಣಿ ಇಂದು ಶುರು; ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ
ರಿಷಭ್ ಪಂತ್ ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಹೆಚ್ಚಿದೆ. ಐಪಿಎಲ್ ಫ್ರಾಂಚೈಸಿಗಳ ಪೈಕಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಪಂತ್ ಅವರನ್ನು ತನ್ನ ತೆಕ್ಕೆಗೆ ಸೆಳೆದುಕೊಳ್ಳಲು ಶತಾಯಗತಾಯ ಪ್ರಯತ್ನ ನಡೆಸಲು ಮುಂದಾಗಿದೆ. ಇನ್ನುಳಿದಂತೆ ಲಖನೌ ಸೂಪರ್ ಜೈಂಟ್ಸ್ ಹಾಗೂ ಪಂಜಾಬ್ ಕಿಂಗ್ಸ್ ಫ್ರಾಂಚೈಸಿಗಳು ಕೂಡಾ ರಿಷಭ್ ಪಂತ್ ಅವರನ್ನು ಖರೀದಿಸಿ ನಾಯಕ ಪಟ್ಟ ಕಟ್ಟಲು ಆಸಕ್ತಿ ಹೊಂದಿವೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ರೋಹಿತ್ ಶರ್ಮಾ ಭೇಟಿ ಮಾಡಿ ಕೊಹ್ಲಿಗೆ ಸ್ಪೆಷಲ್ ಮೆಸೇಜ್ ಕಳಿಸಿದ ಕ್ಯೂಟ್ ಗರ್ಲ್; ವಿಡಿಯೋ ವೈರಲ್
ಈ ಮೊದಲು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಹ ಮಾಲೀಕರಾದ ಪಾರ್ತ್ ಜಿಂದಾಲ್, "ನಾವು ಖಂಡಿತವಾಗಿಯೂ ರಿಷಭ್ ಪಂತ್ ಅವರನ್ನು ಮೊದಲ ಅಯ್ಕೆಯ ಆಟಗಾರನಾಗಿ ರೀಟೈನ್ ಮಾಡಿಕೊಳ್ಳಲಿದ್ದೇವೆ. ನಮ್ಮ ತಂಡದಲ್ಲಿ ಸಾಕಷ್ಟು ಒಳ್ಳೆಯ ಆಟಗಾರರಿದ್ದಾರೆ. ಈಗಷ್ಟೆ ಐಪಿಎಲ್‌ನ ರೂಲ್ಸ್‌ಗಳು ತಿಳಿದಿದೆ. ನಾವು ನಮ್ಮ ತಂಡದ ಡೈರೆಕ್ಟರ್ ಆಫ್ ಕ್ರಿಕೆಟ್‌ನ ಸೌರವ್ ಗಂಗೂಲಿ ಜತೆ ಚರ್ಚಿಸಿ ಅಂತಿಮ ತೀರ್ಮಾನವನ್ನು ಪ್ರಕಟಿಸಲಿದ್ದೇವೆ" ಎಂದು ಹೇಳಿದ್ದರು.