ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಇಂದು ಮುಂಜಾನೆ 6 ಗಂಟೆಗೆ ನವದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ರಾಷ್ಟ್ರರಾಜಧಾನಿಯಲ್ಲಿ ವಿಶ್ವ ಚಾಂಪಿಯನ್ನರಿಗೆ ಭರ್ಜರಿ ಸ್ವಾಗತ ಸಿಕ್ಕಿದೆ

ನವದೆಹಲಿ: ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ವೆಸ್ಟ್ ಇಂಡೀಸ್‌ನಲ್ಲಿ ನಡೆದ ಚುಟುಕು ವಿಶ್ವಕಪ್ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ರೋಚಕವಾಗಿ ಮಣಿಸಿ ದಶಕದ ಬಳಿಕ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇದೀಗ ಟೀಂ ಇಂಡಿಯಾ, ಇಂದು ಮುಂಜಾನೆ ಟ್ರೋಫಿ ಜತೆಗೆ ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. 

ಇನ್ನು ಭಾರತೀಯ ಕ್ರಿಕೆಟ್ ತಂಡವು ನವದೆಹಲಿಯಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಮುಂಜಾನೆ ಬಂದಿಳಿಯುವ ವಿಚಾರ ಬುಧವಾರವೇ ಖಚಿತವಾದ ಹಿನ್ನೆಲೆಯಲ್ಲಿ ತಂಡವನ್ನು ಸ್ವಾಗತಿಸಲು ಅಪಾರ ಸಂಖ್ಯೆಯ ಅಭಿಮಾನಿಗಳು ಇಂದಿರಾಗಾಂಧಿ ವಿಮಾನ ನಿಲ್ದಾಣದ ಬಳಿ ಜಮಾಯಿಸಿದ್ದರು. ಭಾರತ ತಂಡವು 2007ರಲ್ಲಿ ನಡೆದ ಚೊಚ್ಚಲ ಆವೃತ್ತಿಯ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಇದಾಗಿ ಬರೋಬ್ಬರಿ 17 ವರ್ಷಗಳ ಬಳಿಕ ಚುಟುಕು ವಿಶ್ವಕಪ್ ಗೆಲ್ಲುವಲ್ಲಿ ಭಾರತ ಯಶಸ್ವಿಯಾಗಿದೆ. 

ಐಸಿಸಿ ಚಾಂಪಿಯನ್ಸ್‌ ಟ್ರೋಫಿ ತಾತ್ಕಾಲಿಕ ವೇಳಾಪಟ್ಟಿ ಫೈನಲ್: ಭಾರತ vs ಪಾಕ್‌ ಪಂದ್ಯದ ಡೇಟ್ ಫಿಕ್ಸ್!

ಇನ್ನು ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ತವರಿಗೆ ಬಂದಿಳಿಯುತ್ತಿದ್ದಂತೆಯೇ ಇಡೀ ಭಾರತ ತಂಡಕ್ಕೆ ನವದೆಹಲಿಯ ಏರ್‌ಪೋರ್ಟ್ ಆವರಣದಲ್ಲಿಯೇ ಭವ್ಯ ಸ್ವಾಗತ ನೀಡಲಾಯಿತು. ಇನ್ನು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ ಸೇರಿದಂತೆ ಕೆಲವು ಕ್ರಿಕೆಟಿಗರು ಬಿಂದಾಸ್ ಸ್ಟೆಪ್‌ ಹಾಕಿ ಗಮನ ಸೆಳೆದರು.

ಹೀಗಿತ್ತು ನೋಡಿ ಆ ವಿಡಿಯೋ:

Scroll to load tweet…
Scroll to load tweet…
Scroll to load tweet…

11 ಗಂಟೆಗೆ ಪ್ರಧಾನಿ ಮೋದಿ ನಿವಾಸದಲ್ಲಿ ಭೋಜನ ಕೂಟ;

ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ತಮ್ಮ ನಿವಾಸದಲ್ಲಿ ಟಿ20 ವಿಶ್ವಕಪ್ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಹಾಗೂ ಸಹಾಯಕ ಸಿಬ್ಬಂದಿಗಳಿಗೆ ಭೋಜನ ಕೂಟ ಏರ್ಪಟ್ಟಿದ್ದು, ಎಲ್ಲಾ ಆಟಗಾರರು ನೇರವಾಗಿ ಪ್ರಧಾನಿ ನಿವಾಸಕ್ಕೆ ಭೇಟಿ ಕೊಡಲಿದ್ದಾರೆ.

ಟಿ20 ಚಾಂಪಿಯನ್ ಭಾರತಕ್ಕೆ ಮುಂಬೈನಲ್ಲಿಂದು ಅದ್ಧೂರಿ ಸ್ವಾಗತ..!

ಸಂಜೆ 5 ಗಂಟೆಯಿಂದ ನಾರಿಮನ್ ಪಾಯಿಂಟ್‌ನಿಂದ ಸುಮಾರು 2 ಕಿ. ಮೀ. ದೂರ ಇರುವ ವಾಂಖೇಡೆ ಕ್ರೀಡಾಂಗಣದವರೆಗೆ ಆಟಗಾರರು ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಲಿದ್ದಾರೆ. 2 ಗಂಟೆ ಗಳ ಕಾಲ ಮೆರವಣಿಗೆ ನಡೆಯುವ ನಿರೀಕ್ಷೆಯಿದ್ದು, ಬಳಿಕ 7 ಗಂಟೆಗೆ ಕ್ರೀಡಾಂಗಣದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಬಿಸಿಸಿಐ ಘೋಷಿಸಿರುವ 125 ಕೋಟಿ ರು. ನಗದು ಬಹುಮಾನವನ್ನೂ ಇದೇ ವೇಳೆ ಹಸ್ತಾಂತರಿಸಲಾಗುತ್ತದೆ.