ಐಪಿಎಲ್ ಟೂರ್ನಿಯಲ್ಲಿ ಮುಂದುವರೆದ ರೋಹಿತ್ ನೀರಸ ಪ್ರದರ್ಶನರೋಹಿತ್ ಬ್ಯಾಟಿಂಗ್ ಬಗ್ಗೆ ಶೇನ್ ವಾಟ್ಸನ್ ಅಚ್ಚರಿಯ ಹೇಳಿಕೆನಾಲ್ಕೈದು ವರ್ಷಗಳಿಂದ ರೋಹಿತ್ ಸ್ಥಿರ ಪ್ರದರ್ಶನ ತೋರುತ್ತಿಲ್ಲ
ನವದೆಹಲಿ(ಏ.28): ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಕಳೆದ ನಾಲ್ಕೈದು ವರ್ಷಗಳಿಂದ ಐಪಿಎಲ್‌ನಲ್ಲಿ ಅಸ್ಥಿರ ಪ್ರದರ್ಶನ ತೋರುತ್ತಾ ಬಂದಿದ್ದಾರೆ ಎಂದು ಆಸ್ಟ್ರೇಲಿಯಾದ ಮಾಜಿ ಆಲ್ರೌಂಡರ್ ಶೇನ್ ವಾಟ್ಸನ್ ಹೇಳಿದ್ದಾರೆ.
ರೋಹಿತ್ ಶರ್ಮಾ 2017ರಿಂದೀಚೆಗೆ ನಿರೀಕ್ಷಿತವಾದ ಸ್ಥಿರ ಪ್ರದರ್ಶನ ತೋರಲು ವಿಫಲವಾಗಿದ್ದಾರೆ. ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್, 2017ರ ಬಳಿಕ 30ಕ್ಕಿಂತ ಕಡಿಮೆ ಸರಾಸರಿಯಲ್ಲಿ ರನ್ ಗಳಿಸಿದ್ದಾರೆ. ಇನ್ನು 2023ನೇ ಸಾಲಿನ ಐಪಿಎಲ್ ಟೂರ್ನಿಯಲ್ಲೂ ರೋಹಿತ್ ಶರ್ಮಾ ಅವರ ಬ್ಯಾಟಿಂಗ್ ವೈಫಲ್ಯ ಮುಂದುವರೆದಿದ್ದು, ಆಡಿದ 7 ಪಂದ್ಯಗಳಲ್ಲಿ 25.86ರ ಬ್ಯಾಟಿಂಗ್ ಸರಾಸರಿಯಲ್ಲಿ 181 ರನ್ ಗಳಿಸಿದ್ದಾರೆ.
ರೋಹಿತ್ ಶರ್ಮಾ ಅವರ ದಯನೀಯ ಬ್ಯಾಟಿಂಗ್ ವೈಫಲ್ಯ ತಂಡದ ಪ್ರದರ್ಶನದ ಮೇಲೂ ಋಣಾತ್ಮಕ ಪರಿಣಾಮ ಬೀರಿದೆ. ಮುಂಬೈ ಇಂಡಿಯನ್ಸ್ ತಂಡವು ಆಡಿದ 7 ಪಂದ್ಯಗಳಲ್ಲಿ ಕೇವಲ 3 ಗೆಲುವುಗಳನ್ನು ದಾಖಲಿಸುವ ಮೂಲಕ 6 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿಯೇ ಉಳಿದಿದೆ. ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ 5 ಬಾರಿಯ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್, ಕೊನೆಯ ಸ್ಥಾನದಲ್ಲಿ ಉಳಿದುಕೊಂಡಿತ್ತು.
ಆರೆಂಜ್ ಆರ್ಮಿಗೆ ಬಿಗ್ ಶಾಕ್; ಸನ್‌ರೈಸರ್ಸ್ ಪಡೆಯಿಂದ ಹೊರಬಿದ್ದ ವಾಷಿಂಗ್ಟನ್ ಸುಂದರ್..!
ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾಗೂ ಆರಂಭಿಕರಾಗಿರುವ ರೋಹಿತ್ ಶರ್ಮಾ, ಬ್ಯಾಟಿಂಗ್ ವೈಫಲ್ಯ ತಂಡದ ತಲೆನೋವು ಹೆಚ್ಚುವಂತೆ ಮಾಡಿದೆ. ಈ ಕುರಿತಂತೆ ಮಾತನಾಡಿರುವ ಶೇನ್ ವಾಟ್ಸನ್, " ಮಾನಸಿಕ ಶಕ್ತಿಯನ್ನು ನಿರ್ವಹಣೆ ಮಾಡುವುದು ನಿಜಕ್ಕೂ ದೊಡ್ಡ ಸವಾಲು. ಅಂತಾರಾಷ್ಟ್ರೀಯ ಕ್ರಿಕೆಟಿಗರು ಜಗತ್ತಿನಾದ್ಯಂತ ಸಾಕಷ್ಟು ಕ್ರಿಕೆಟ್ ಆಡುತ್ತಲೇ ಇರುತ್ತಾರೆ. ಆದರೆ ಭಾರತೀಯ ಕ್ರಿಕೆಟಿಗರು ವರ್ಷಾಪೂರ್ತಿ ಬಿಡುವಿರದಷ್ಟು ಕ್ರಿಕೆಟ್ ಆಡುತ್ತಲೇ ಇರುತ್ತಾರೆ. ಇನ್ನು ಟೀಂ ಇಂಡಿಯಾ ನಾಯಕರಾಗಿರುವ ರೋಹಿತ್ ಶರ್ಮಾ ಕೂಡಾ ಹೆಚ್ಚು ಪಂದ್ಯಗಳನ್ನು ಆಡುತ್ತಿದ್ದಾರೆ. ರೋಹಿತ್ ಶರ್ಮಾ, ಸಾಕಷ್ಟು ಚೆನ್ನಾಗಿಯೇ ಆಡುತ್ತಿದ್ದರು. ಆದರೆ ಕಳೆದ ನಾಲ್ಕೈದು ವರ್ಷಗಳಿಂದ ಅವರಿಂದ ಸ್ಥಿರ ಪ್ರದರ್ಶನ ಮೂಡಿ ಬಂದಿಲ್ಲ. ಜಗತ್ತಿನ ಯಾವುದೇ ಮೂಲೆಯಲ್ಲಿ ಯಾವುದೇ ಬೌಲರ್ ಎದುರು ನಿರ್ಭಯವಾಗಿ ಬ್ಯಾಟ್ ಬೀಸುತ್ತಿದ್ದವರು ರೋಹಿತ್ ಶರ್ಮಾ. ಆದರೆ ಈಗ ಅಂತಹ ಪ್ರದರ್ಶನ ಮೂಡಿ ಬರುತ್ತಿಲ್ಲ" ಎಂದು ವಾಟ್ಸನ್ ಹೇಳಿದ್ದಾರೆ.
ಮುಂಬೈ ಇಂಡಿಯನ್ಸ್ ತಂಡವು ಸತತ ಸೋಲುಗಳಿಂದ ಕಂಗೆಟ್ಟಿದ್ದು, ಏಪ್ರಿಲ್ 30 ರಂದು ಬಲಿಷ್ಠ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ. ಮುಂಬೈ ಇಂಡಿಯನ್ಸ್ ತಂಡವು ಪ್ಲೇ ಆಫ್ ರೇಸ್‌ನಲ್ಲಿ ಉಳಿಯಬೇಕಿದ್ದರೆ, ಇನ್ನುಳಿದ 7 ಪಂದ್ಯಗಳಲ್ಲಿ ಕನಿಷ್ಠ 6 ಪಂದ್ಯಗಳನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.
