ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್‌ಮನ್‌ ರೋಹಿತ್ ಶರ್ಮಾ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಆಕರ್ಷಕ ಶತಕ ಬಾರಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಚೆನ್ನೈ(ಫೆ.13): ಇಂಗ್ಲೆಂಡ್‌ ವಿರುದ್ದದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಹಿಟ್‌ಮ್ಯಾನ್‌ ಖ್ಯಾತಿಯ ರೋಹಿತ್ ಶರ್ಮಾ ಆಕರ್ಷಕ ಶತಕ ಬಾರಿಸಿದ್ದಾರೆ. 130 ಎಸೆತಗಳನ್ನು ಎದುರಿಸಿದ ರೋಹಿತ್ ತಮ್ಮ ವೃತ್ತಿಜೀವನದ 7ನೇ ಟೆಸ್ಟ್ ಶತಕ ಬಾರಿಸಿ ಮಿಂಚಿದ್ದಾರೆ.

ಕೇವಲ ಒಂದು ರನ್‌ ಅಂತರದಲ್ಲಿ ಎರಡು ವಿಕೆಟ್ ಕಳೆದುಕೊಂಡು ಆಘಾತಕ್ಕೊಳಗಾಗಿದ್ದ ಭಾರತ ತಂಡಕ್ಕೆ ಮಹತ್ವದ ಸಂದರ್ಭದಲ್ಲಿ ಸಮಯೋಚಿತ ಬ್ಯಾಟಿಂಗ್‌ ನಡೆಸುವ ಮೂಲಕ ತಂಡಕ್ಕೆ ಆಸರೆಯಾಗಿದ್ದಾರೆ. ಆರಂಭದಲ್ಲಿ ಸೀಮಿತ ಓವರ್‌ಗಳ ಕ್ರಿಕೆಟ್‌ ಮಾದರಿಯಂತೆ ಬ್ಯಾಟ್‌ ಬೀಸಿದ ರೋಹಿತ್ ಶರ್ಮಾ ಕೇವಲ 47 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಆ ಬಳಿಕ ಎಚ್ಚರಿಕೆಯ ಬ್ಯಾಟಿಂಗ್ ನಡೆಸಿದ ಹಿಟ್‌ಮ್ಯಾನ್‌ 130 ಎಸೆತಗಳನ್ನು ಎದುರಿಸಿ 14 ಬೌಂಡರಿ ಹಾಗೂ 2 ಸಿಕ್ಸರ್‌ ನೆರವಿನಿಂದ ಮನಮೋಹಕ ಶತಕ ಬಾರಿಸಿದರು.

Scroll to load tweet…

ಚೆನ್ನೈ ಟೆಸ್ಟ್‌: ಶತಕದತ್ತ ರೋಹಿತ್ ದಾಪುಗಾಲು

Scroll to load tweet…

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿರುವ ಟೀಂ ಇಂಡಿಯಾ 42 ಓವರ್‌ ಮುಕ್ತಾಯದ ವೇಳೆಗೆ 3 ವಿಕೆಟ್‌ ಕಳೆದುಕೊಂಡು ರನ್‌ ಬಾರಿಸಿದ್ದು, ರೋಹಿತ್ ಶರ್ಮಾಗೆ ಉಪನಾಯಕ ಅಜಿಂಕ್ಯ ರಹಾನೆ(25) ಉತ್ತಮ ಸಾಥ್ ನೀಡಿದ್ದಾರೆ.