ಕಾನ್ಪುರ ಟೆಸ್ಟ್‌: ಮೊದಲ 3 ಓವರ್‌ನಲ್ಲೇ ಫಿಫ್ಟಿ ಬಾರಿಸಿದ ಟೀಂ ಇಂಡಿಯಾ; ಟೆಸ್ಟ್‌ ಕ್ರಿಕೆಟ್‌ನಲ್ಲಿ ವಿಶ್ವದಾಖಲೆ

ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಕೇವಲ 3 ಓವರ್‌ನಲ್ಲೇ 50+ ರನ್ ಬಾರಿಸಿ ಹೊಸ ವಿಶ್ವದಾಖಲೆ ನಿರ್ಮಿಸಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ

Rohit Sharma led Team India break England world record to register fastest team fifty in Test cricket history kvn

ಕಾನ್ಪುರ: ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್‌ ಆರಂಭಿಸಿರುವ ಟೀಂ ಇಂಡಿಯಾ ಮೊದಲ 3 ಓವರ್‌ನಲ್ಲೇ 50+ ರನ್ ಬಾರಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದೆ. ಬಾಂಗ್ಲಾದೇಶ ತಂಡವನ್ನು 233 ರನ್‌ಗಳಿಗೆ ಆಲೌಟ್ ಮಾಡಿ, ಇನ್ನಿಂಗ್ಸ್‌ ಆರಂಭಿಸಿರುವ ಭಾರತ ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತಿವೇಗದ ಅರ್ಧಶತಕ ಬಾರಿಸಿ ಇತಿಹಾಸ ನಿರ್ಮಿಸಿದೆ.

ಇಲ್ಲಿನ ದಿ ಗ್ರೀನ್‌ ಪಾರ್ಕ್‌ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಎರಡು ಹಾಗೂ ಮೂರನೇ ದಿನದಾಟವು ಮಳೆಯಿಂದ ಒಂದೂ ಎಸೆತ ಕಾಣದೇ ರದ್ದಾಗಿತ್ತು. ಹೀಗಾಗಿ ನಾಲ್ಕನೇ ದಿನದಾಟದ ಮೇಲೆ ಎಲ್ಲರ ಚಿತ್ತ ನೆಟ್ಟಿತ್ತು. ಮೊದಲು ಬ್ಯಾಟ್ ಮಾಡಿದ್ದ ಬಾಂಗ್ಲಾದೇಶ ತಂಡವು ಮೊದಲ ದಿನದಾಟದಲ್ಲಿ 35 ಓವರ್‌ನಲ್ಲಿ 3 ವಿಕೆಟ್ ಕಳೆದುಕೊಂಡು 107 ರನ್ ಬಾರಿಸಿತ್ತು. ಇನ್ನು 4ನೇ ದಿನದಾಟದಲ್ಲಿ ಜಸ್ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್ ಮಾರಕ ದಾಳಿಗೆ ತತ್ತರಿಸಿ ಕೇವಲ 233 ರನ್‌ಗಳಿಗೆ ಸರ್ವಪತನ ಕಂಡಿತು.

ಕಾನ್ಪುರ ಟೆಸ್ಟ್‌ ಮೊಮಿನುಲ್ ಹಕ್ ಏಕಾಂಗಿ ಹೋರಾಟ, ಸಾಧಾರಣ ಮೊತ್ತಕ್ಕೆ ಬಾಂಗ್ಲಾದೇಶ ಆಲೌಟ್!

ಎರಡನೇ ಟೆಸ್ಟ್‌ ಪಂದ್ಯವನ್ನು ಶತಾಯಗತಾಯ ಗೆದ್ದು 12 ಅಂಕಗಳನ್ನು ತಮ್ಮ ಖಾತೆಗೆ ಸೇರಿಸಿಕೊಳ್ಳುವ ಲೆಕ್ಕಾಚಾರದಲ್ಲಿರುವ ಟೀಂ ಇಂಡಿಯಾ  ಆಕ್ರಮಣಕಾರಿ ಆಟವಾಡುವ ಲೆಕ್ಕಾಚಾರದೊಂದಿಗೆ ಕಣಕ್ಕಿಳಿಯಿತು. ಮೊದಲ ಓವರ್‌ನಲ್ಲೇ ಯಶಸ್ವಿ ಜೈಸ್ವಾಲ್ ಹ್ಯಾಟ್ರಿಕ್ ಬೌಂಡರಿ ಬಾರಿಸಿದರೆ, ಎರಡನೇ ಓವರ್‌ನಲ್ಲಿ ರೋಹಿತ್ ಶರ್ಮಾ ಸತತ ಎರಡು ಸಿಕ್ಸರ್ ಸಿಡಿಸಿದರು. ಎರಡನೇ ಓವರ್‌ನ ಕೊನೆಯ ಎಸೆತದಲ್ಲಿ ಜೈಸ್ವಾಲ್ ಒಂದು ಬೌಂಡರಿ ಬಾರಿಸಿದರು. ಇನ್ನು ಮೂರನೇ ಓವರ್‌ನಲ್ಲಿ ರೋಹಿತ್ ಶರ್ಮಾ ಒಂದು ಸಿಕ್ಸರ್ ಬಾರಿಸಿದರೆ, ಯಶಸ್ವಿ ಜೈಸ್ವಾಲ್ ಒಂದು ಸಿಕ್ಸ್ ಹಾಗೂ ಎರಡು ಬೌಂಡರಿ ಚಚ್ಚುವ ಮೂಲಕ ತಂಡದ ಮೊತ್ತ 50ರ ಗಡಿ ದಾಟಿಸುವಂತೆ ಮಾಡಿದರು. ಈ ಮೂಲಕ ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತಿವೇಗದ 50+ ರನ್ ಓಪನ್ನಿಂಗ್ ರೆಕಾರ್ಡ್ ಎನ್ನುವ ವಿಶ್ವದಾಖಲೆ ನಿರ್ಮಿಸಿದರು. ಇದಕ್ಕೂ ಮೊದಲು ಇಂಗ್ಲೆಂಡ್ ತಂಡವು 2024ರಲ್ಲೇ ನಾಟಿಂಗ್‌ಹ್ಯಾಮ್‌ನಲ್ಲಿ ವೆಸ್ಟ್‌ ಇಂಡೀಸ್ ಎದುರು 26 ಎಸೆತಗಳನ್ನು ಎದುರಿಸಿ 50+ ರನ್ ಬಾರಿಸಿತ್ತು. ಇದೀಗ ಆ ದಾಖಲೆ ನುಚ್ಚುನೂರಾಗಿದೆ. 
 

Latest Videos
Follow Us:
Download App:
  • android
  • ios