ಇಂಗ್ಲೆಂಡ್ ಎದುರು ಭಾರತಕ್ಕೆ ಏಕದಿನ ಸರಣಿ ಕ್ಲೀನ್‌ಸ್ವೀಪ್ ಗುರಿ!
ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಮುನ್ನ ಭಾರತ ಮತ್ತು ಇಂಗ್ಲೆಂಡ್ ತಂಡಗಳು 3ನೇ ಏಕದಿನ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಈಗಾಗಲೇ ಸರಣಿ ಗೆದ್ದಿರುವ ಭಾರತ ತಂಡ ಕ್ಲೀನ್ ಸ್ವೀಪ್ ಮೇಲೆ ಕಣ್ಣಿಟ್ಟಿದ್ದರೆ, ಇಂಗ್ಲೆಂಡ್ ಸರಣಿ ಸೋಲಿನ ಮುಖಭಂಗ ತಪ್ಪಿಸಿಕೊಳ್ಳಲು ಹೋರಾಡಲಿದೆ.

ಅಹಮದಾಬಾದ್: ಬಹುನಿರೀಕ್ಷಿತ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಇನ್ನು ಒಂದು ವಾರ ಮಾತ್ರ ಬಾಕಿಯಿದೆ. ಟೂರ್ನಿಗೆ ಮುನ್ನ ಭಾರತ ತಂಡ ಕೊನೆ ಹಂತದ ಸಿದ್ಧತೆ ಎಂಬಂತೆ ಬುಧವಾರ ಇಂಗ್ಲೆಂಡ್ ವಿರುದ್ಧ 3ನೇ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಈಗಾಗಲೇ 2-0 ಅಂತರದಲ್ಲಿ ಸರಣಿ ಗೆದ್ದಿರುವ ರೋಹಿತ್ ಶರ್ಮಾ ಪಡೆ ಸದ್ಯ ಕ್ಲೀನ್‌ಸ್ವೀಪ್ ಮೇಲೆ ಕಣ್ಣಿಟ್ಟಿದೆ. ಪಂದ್ಯಕ್ಕೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ಆತಿಥ್ಯ ವಹಿಸಲಿದೆ.
ಭಾರತ ಕ್ಲೀನ್ ಸ್ವೀಪ್ ಗಿಂತ ಹೆಚ್ಚಾಗಿ ಪ್ರಮುಖ ಆಟಗಾರರ ಲಯದ ಬಗ್ಗೆ ತಲೆಕೆಡಿಸಿಕೊಂಡಿದೆ. ವಿರಾಟ್ ಕೊಹ್ಲಿ ಬ್ಯಾಟಿಂಗ್ ಮರೆತಂತಿದೆ. ಟೆಸ್ಟ್ ಸರಣಿ ಬಳಿಕ ಏಕದಿನದಲ್ಲೂ ಅವರು ವಿಫಲರಾಗುತಿರುವುದು, ಚಾಂಪಿಯನ್ಸ್ ಟ್ರೋಫಿಗೆ ಮುನ್ನ ಭಾರತಕ್ಕೆ ಹೆಚ್ಚು ತಲೆನೋವು ತಂದಿದೆ. ಇನ್ನು, ರಾಹುಲ್‌ನ್ನು ತಂಡ 6ನೇ ಕ್ರಮಾಂಕದಲ್ಲಿ ಆಡಿಸುತ್ತಿದ್ದು, ಮೊದಲೆರಡೂ ಪಂದ್ಯಗಳಲ್ಲಿ ದೊಡ್ಡ ಸ್ಕೋರ್ ಗಳಿಸಲು ವಿಫಲರಾಗಿದ್ದರು. ರಿಷಭ್ ಪಂತ್ ಕೂಡಾ ವಿಕೆಟ್ ಕೀಪರ್ ಸ್ಥಾನದ ರೇಸ್‌ನಲ್ಲಿರುವುದರಿಂದ ರಾಹುಲ್ ಲಯಕ್ಕೆ ಮರಳಬೇಕಾದ ಒತ್ತಡದಲ್ಲಿದ್ದಾರೆ.
ಚಾಂಪಿಯನ್ಸ್ ಟ್ರೋಫಿಯಿಂದ ಬುಮ್ರಾ ಔಟ್; ಕೊನೆ ಕ್ಷಣದಲ್ಲಿ ಭಾರತ ತಂಡದಲ್ಲಿ ಎರಡು ಬದಲಾವಣೆ!
ವೇಗಿಗಳ ಚಿಂತೆ: ಭಾರತದ ವೇಗದ ಬೌಲರ್‌ಗಳು ಸರಣಿಯಲ್ಲಿ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಹಿರಿಯ ವೇಗಿ ಮೊಹಮ್ಮದ್ ಶಮಿ ದುಬಾರಿಯಾಗುತ್ತಿದ್ದು, ವಿಕೆಟ್ ಕೂಡಾ ಸಿಗುತ್ತಿಲ್ಲ. ಯುವ ವೇಗಿ ಹರ್ಷಿತ್ ರಾಣಾ ಕೂಡಾ ಸುಲಭದಲ್ಲಿ ರನ್ ಬಿಟ್ಟುಕೊಡುತ್ತಿದ್ದಾರೆ. ಹಾರ್ದಿಕ್ ಪಾಂಡ್ಯ ಎಂದಿನ ಲಯದಲ್ಲಿಲ್ಲ. ಇನ್ನು, ಆಲ್ರೌಂಡರ್‌ಗಳಾದ ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಮಿಂಚುತ್ತಿದ್ದು, ಉತ್ತಮ ಪ್ರದರ್ಶನ ಮುಂದುವರಿಸುವ ವಿಶ್ವಾಸದಲ್ಲಿದ್ದಾರೆ.
ಪುಟಿದೇಳುತ್ತಾ ಇಂಗ್ಲೆಂಡ್?: ಟಿ20 ಸರಣಿ ಬಳಿಕ ಏಕದಿನ ಸರಣಿಯನ್ನೂ ಕಳೆದುಕೊಂಡಿರುವ ಇಂಗ್ಲೆಂಡ್ ಸದ್ಯ ಕ್ಲೀನ್ ಸ್ವೀಪ್ ಮುಖಭಂಗ ತಪ್ಪಿಸಿಕೊಳ್ಳಲು ಎದುರು ನೋಡುತ್ತಿದೆ. ತಂಡ ಆರಂಭದಲ್ಲಿ ಆಕ್ರಮಣಕಾರಿ ಆಟವಾಡುತ್ತಿದ್ದರೂ, ಬಳಿಕ ದೊಡ್ಡ ಸ್ಕೋರ್ ಗಳಿಸಲು ವಿಫಲವಾಗುತ್ತಿದೆ. ತಂಡದ ಬೌಲರ್‌ಗಳೂ ಲಯ ತಪ್ಪಿದಂತಿದ್ದು, ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಮುನ್ನ ತಂಡದ ಆತಂಕ ಹೆಚ್ಚಿಸಿದೆ.
ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಆಡೋರ್ಯಾರು? ಅಚ್ಚರಿ ಭವಿಷ್ಯ ನುಡಿದ ರವಿಶಾಸ್ತ್ರಿ, ರಿಕಿ ಪಾಂಟಿಂಗ್!
ಸಂಭಾವ್ಯ ತಂಡಗಳು ಹೀಗಿವೆ ನೋಡಿ
ಭಾರತ
ರೋಹಿತ್ ಶರ್ಮಾ(ನಾಯಕ), ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್, ಅಕ್ಷರ್ ಪಟೇಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ , ಹರ್ಷಿತ್ ರಾಣಾ
ಇಂಗ್ಲೆಂಡ್
ಫಿಲ್ ಸಾಲ್ಟ್, ಬೆನ್ ಡಕೆಟ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಮಾರ್ಕ್ ವುಡ್, ಗುಸ್ ಅಟ್ಕಿನ್‌ಸನ್, ಜೇಮಿ ಓವರ್‌ಟನ್, ಸಾಕಿಬ್ ಮೊಹಮದ್, ಆದಿಲ್ ರಶೀದ್
ಪಂದ್ಯ ಆರಂಭ: ಮಧ್ಯಾಹ್ನ 1.30ಕ್ಕೆ
ನೇರಪ್ರಸಾರ: ಸ್ಟಾರ್‌ಸ್ಟೋರ್ಟ್ಸ್, ಹಾಟ್‌ಸ್ಟಾರ್