ಇಲ್ಲಿನ ವಾಂಖೇಡೆ ಮೈದಾನದಲ್ಲಿ ನಡೆದ ಸನ್‌ರೈಸರ್ಸ್ ಹೈದರಾಬಾದ್ ಎದುರಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು 7 ವಿಕೆಟ್ ಭರ್ಜರಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಇನ್ನು ಇವೆಲ್ಲದರ ನಡುವೆ ಮುಂಬೈ ಇಂಡಿಯನ್ಸ್ ತಂಡವು ಗೆಲುವು ಸಾಧಿಸುತ್ತಿದ್ದಂತೆಯೇ ಡಗೌಟ್‌ನಲ್ಲಿ ಕೂತಿದ್ದ ರೋಹಿತ್ ಶರ್ಮಾ, ಕಣ್ಣೀರು ಹಾಕುತ್ತಿರುವ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.

ಮುಂಬೈ(ಮೇ.07): 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿದ್ದ ಮುಂಬೈ ಇಂಡಿಯನ್ಸ್ ತಂಡವು ಕೊನೆಗೂ ಗೆಲುವಿನ ಹಳಿಗೆ ಮರಳುವಲ್ಲಿ ಯಶಸ್ವಿಯಾಗಿದೆ. ಇಲ್ಲಿನ ವಾಂಖೇಡೆ ಮೈದಾನದಲ್ಲಿ ನಡೆದ ಸನ್‌ರೈಸರ್ಸ್ ಹೈದರಾಬಾದ್ ಎದುರಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು 7 ವಿಕೆಟ್ ಭರ್ಜರಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಇನ್ನು ಇವೆಲ್ಲದರ ನಡುವೆ ಮುಂಬೈ ಇಂಡಿಯನ್ಸ್ ತಂಡವು ಗೆಲುವು ಸಾಧಿಸುತ್ತಿದ್ದಂತೆಯೇ ಡಗೌಟ್‌ನಲ್ಲಿ ಕೂತಿದ್ದ ರೋಹಿತ್ ಶರ್ಮಾ, ಕಣ್ಣೀರು ಹಾಕುತ್ತಿರುವ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.

ಹೌದು, 17ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಮಾಜಿ ನಾಯಕ ರೋಹಿತ್ ಶರ್ಮಾ ಅವರ ಅಸ್ಥಿರ ಪ್ರದರ್ಶನ ಮತ್ತೆ ಮುಂದುವರೆದಿದೆ. ರೋಹಿತ್ ಶರ್ಮಾ ಚೆನ್ನೈ ಸೂಪರ್ ಕಿಂಗ್ಸ್ ಎದುರು ಶತಕ ಸಿಡಿಸಿದರೂ ತಂಡವನ್ನು ಗೆಲುವಿನ ದಡಕ್ಕೆ ಸೇರಿಸಲು ಸಾಧ್ಯವಾಗಿರಲಿಲ್ಲ. ಇನ್ನು ಕಳೆದ 5 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ಪರ ರೋಹಿತ್ ಶರ್ಮಾ ಕ್ರಮವಾಗಿ 4, 11, 4, 8, 6 ಹೀಗೆ ಒಟ್ಟಾರೆ ಕೇವಲ 33 ರನ್ ಗಳಿಸಲಷ್ಟೇ ಶಕ್ತರಾಗಿದ್ದಾರೆ.

ಡು ಆರ್‌ ಡೈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ಗೆ ರಾಯಲ್ಸ್‌ ಸವಾಲು

ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೂ ಮುನ್ನ ರೋಹಿತ್ ಶರ್ಮಾ ಅವರ ಈ ಕಳಪೆ ಫಾರ್ಮ್ ಟೀಂ ಇಂಡಿಯಾ ಮ್ಯಾನೇಜ್‌ಮೆಂಟ್ ತಲೆನೋವು ಹೆಚ್ಚಿಸುವಂತೆ ಮಾಡಿದೆ. ಇನ್ನು ರೋಹಿತ್ ಫಾರ್ಮ್‌ಗೆ ಖ್ಯಾತ ಕ್ರಿಕೆಟ್ ವಿಶ್ಲೇಷಕ ಹರ್ಷಾ ಭೋಗ್ಲೆ ಕೂಡಾ ಎಕ್ಸ್ ಮೂಲಕ ಎಚ್ಚರಿಕೆ ರವಾನಿಸಿದ್ದಾರೆ.

"ರೋಹಿತ್ ಶರ್ಮಾ ಫಾರ್ಮ್ ಕೊಂಚ ಯೋಚಿಸಬೇಕಾದ ವಿಚಾರವಾಗಿದೆ. ಮೊದಲ 7 ಇನಿಂಗ್ಸ್‌ಗಳಿಂದ 297 ರನ್ ಗಳಿಸಿದ್ದ ಅವರು, ಇದಾದ ಬಳಿಕ 5 ಇನಿಂಗ್ಸ್‌ಗಳಿಂದ ಕೇವಲ 34 ರನ್ ಬಾರಿಸಿದ್ದಾರೆ. ಇನ್ನು ಕೊನೆಯ ಕೆಲ ಪಂದ್ಯಗಳನ್ನು ಅತ್ಯುತ್ತಮವಾಗಿ ಮುಗಿಸಬೇಕಿದೆ" ಎಂದು ಟ್ವೀಟ್ ಮಾಡಿದ್ದಾರೆ.

ಸನ್‌ರೈಸರ್ಸ್ ಹೈದರಾಬಾದ್‌ ಮೇಲೆ ಸೂರ್ಯಕುಮಾರ್ ಯಾದವ್ ಸೆಂಚುರಿ ದಾಳಿ!

ಇನ್ನು ಸನ್‌ರೈಸರ್ಸ್ ಹೈದರಾಬಾದ್ ಎದುರು ಮುಂಬೈ ಇಂಡಿಯನ್ಸ್ ಗೆಲುವು ಸಾಧಿಸುತ್ತಿದ್ದಂತೆಯೇ ರೋಹಿತ್ ಶರ್ಮಾ ಒಂಟಿಯಾಗಿ ಕುಳಿತು ಕಣ್ಣೀರು ಹಾಕುತ್ತಿರುವ ವಿಡಿಯೋಗಳಿಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.

Scroll to load tweet…
Scroll to load tweet…