ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಆರ್‌ಸಿಬಿಗೆ ಡೆಲ್ಲಿ ಸವಾಲುಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ ಆರ್‌ಸಿಬಿ ತಂಡಬಹುತೇಕ ಪ್ಲೇ ಆಫ್ ರೇಸ್‌ನಿಂದ ಹೊರಬಿದ್ದಿರುವ ಆರ್‌ಸಿಬಿ
ಮುಂಬೈ(ಮಾ.13): ಚೊಚ್ಚಲ ಆವೃತ್ತಿಯ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಇನ್ನಷ್ಟೇ ಗೆಲುವಿನ ಖಾತೆ ತೆರೆಯಬೇಕಿರುವ ಆರ್‌ಸಿಬಿ ಸೋಮವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೆಣಸಲಿದ್ದು, ಮೊದಲ ಜಯಕ್ಕಾಗಿ ತುಡಿಯುತ್ತಿದೆ. ಆಡಿದ 4 ಪಂದ್ಯಗಳಲ್ಲೂ ಸ್ಮೃತಿ ಪಡೆ ಸೋತಿದ್ದು, ಅಂಕಪಟ್ಟಿಯಲ್ಲಿ ಕೊನೆ ಸ್ಥಾನದಲ್ಲೇ ಉಳಿದುಕೊಂಡಿದ್ದು ಪ್ಲೇ-ಆಫ್ ರೇಸ್‌ನಿಂದ ಬಹುತೇಕ ಹೊರಬಿದ್ದಿದೆ.
ಲೀಗ್ ಹಂತದಲ್ಲಿ ಉಳಿದಿರುವ ನಾಲ್ಕೂ ಪಂದ್ಯಗಳನ್ನು ಗೆದ್ದರೂ ನೆಟ್ ರನ್ರೇಟ್ ಅತ್ಯಂತ ಕಳಪೆಯಾಗಿರುವ ಕಾರಣ ಪ್ಲೇ-ಆಫ್ಗೇರುವುದು ಅನುಮಾನ ಎನಿಸಿಕೊಂಡಿದೆ. ಆರ್‌ಸಿಬಿ ತಂಡವು ಕಳೆದ ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗದಲ್ಲೂ ವೈಫಲ್ಯ ಅನುಭವಿಸಿತ್ತು. ಇದೀಗ ಡೆಲ್ಲಿ ಎದುರು ಮೊದಲ ಸುತ್ತಿನಲ್ಲಿ ಸೋಲು ಅನುಭವಿಸಿದ್ದ ಆರ್‌ಸಿಬಿ, ಎರಡನೇ ಸುತ್ತಿನಲ್ಲಿ ತಿರುಗೇಟು ನೀಡುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.
ಪಂದ್ಯ: ಸಂಜೆ 7.30ಕ್ಕೆ
ನೇರಪ್ರಸಾರ: ಸ್ಪೋಟ್ಸ್‌ರ್ 18, ಜಿಯೋ ಸಿನೆಮಾ
ಮುಂಬೈಗೆ ಸತತ 4ನೇ ಜಯ
ಮುಂಬೈ: ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ಸತತ 4 ಗೆಲುವು ದಾಖಲಿಸುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಳ್ಳುವುದರ ಜತೆಗೆ ಬಹುತೇಕ ಪ್ಲೇ ಆಫ್ ಸ್ಥಾನವನ್ನು ಪಕ್ಕಾ ಮಾಡಿಕೊಂಡಿದೆ.
IPL 2023: ವಯಸ್ಸು 36 ದಾಟಿದರೂ ಐಪಿಎಲ್‌ನಲ್ಲಿ ಅಬ್ಬರಿಸಲು ರೆಡಿಯಾದ 8 ಸ್ಟಾರ್ ಕ್ರಿಕೆಟಿಗರಿವರು..!
ಭಾನುವಾರ ನಡೆದ ಯುಪಿ ವಾರಿಯರ್ಸ್ ವಿರುದ್ದದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು 8 ವಿಕೆಟ್ ಜಯ ಸಾಧಿಸಿತು. ಮೊದಲು ಬ್ಯಾಟ್ ಮಾಡಿದ ಯುಪಿ ವಾರಿಯರ್ಸ್ ತಂಡವು ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 159 ರನ್ ಕಲೆಹಾಕಿತು. ಇನ್ನು ಈ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು ಇನ್ನೂ 15 ಎಸೆತಗಳನ್ನು ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರಿತು.
ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಗೆದ್ದ ಬಾಂಗ್ಲಾದೇಶ!
ಢಾಕಾ: ಹಾಲಿ ವಿಶ್ವ ಚಾಂಪಿಯನ್ ಇಂಗ್ಲೆಂಡ್ ವಿರುದ್ಧ ಬಾಂಗ್ಲಾದೇಶ ಐತಿಹಾಸಿಕ ಟಿ20 ಸರಣಿ ಗೆಲುವು ಸಾಧಿಸಿದೆ. ಭಾನುವಾರ 2ನೇ ಟಿ20 ಪಂದ್ಯದಲ್ಲಿ ಆತಿಥೇಯ ಬಾಂಗ್ಲಾ 4 ವಿಕೆಟ್ ಜಯಗಳಿಸಿತು. ಇದು ಇಂಗ್ಲೆಂಡ್ ವಿರುದ್ಧ ಬಾಂಗ್ಲಾಕ್ಕೆ ಯಾವುದೇ ಮಾದರಿಯಲ್ಲಿ ಚೊಚ್ಚಲ ಸರಣಿ ಜಯ. ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 20 ಓವರ್‌ಗಳಲ್ಲಿ 117ಕ್ಕೆ ಆಲೌಟ್ ಆಯಿತು. ಬೆನ್ ಡಕೆಟ್(28), ಸಾಲ್ಟ್(25) ಹೋರಾಟ ತಂಡವನ್ನು 100ರ ಗಡಿ ದಾಟಿಸಿತು. ಮೆಹಿದಿ ಹಸನ್ 4 ವಿಕೆಟ್ ಕಿತ್ತರು. ಕಡಿಮೆ ಮೊತ್ತವಾದರೂ ಬಾಂಗ್ಲಾಕ್ಕೆ ಸುಲಭದಲ್ಲಿ ಗೆಲುವು ದಕ್ಕಲಿಲ್ಲ. ನಜ್ಮುಲ್ ಹೊಸೈನ್(47 ಎಸೆತಗಳಲ್ಲಿ ಔಟಾಗದೆ 46) ಹೋರಾಡಿ ತಂಡಕ್ಕೆ ಜಯ ತಂದುಕೊಟ್ಟರು.
