ರುತುರಾಜ್‌ ಗಾಯಕ್ವಾಡ್‌ ಬಾರಿಸಿದ ಆಕರ್ಷಕ ಅರ್ಧಶತಕದ ನಡುವೆಯೂ ಚೆನ್ನೈ ಸೂಪರ್ ಕಿಂಗ್ಸ್‌ ತಂಡ ಪಂಜಾಬ್‌ ಕಿಂಗ್ಸ್‌ಗೆ ಸವಾಲಿನ ಮೊತ್ತದ ಗುರಿ ನೀಡಿದೆ. 

ಚೆನ್ನೈ (ಮೇ.1): ನಾಯಕ ರುತುರಾಜ್‌ ಗಾಯಕ್ವಾಡ್‌ ಅವರಿಂದ ಮತ್ತೊಂದು ಆಕರ್ಷಕ ಇನ್ನಿಂಗ್ಸ್‌ ದಾಖಲಾಗಿದ್ದರಿಂದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ಬುಧವಾರ ನಡೆದ ಪಂದ್ಯದಲ್ಲಿ ಸವಾಲಿನ ಮೊತ್ತ ಪೇರಿಸುವಲ್ಲಿ ಯಶಸ್ವಿಯಾಗಿದೆ. 48 ಎಸೆತಗಳಲ್ಲಿ 5 ಬೌಂಡರಿ, 2 ಸಿಕ್ಸರ್‌ ನೆರವಿನಿಂದ ರುತುರಾಜ್‌ ಗಾಯಕ್ವಾಡ್‌ 62 ರನ್‌ ಬಾರಿಸಿದರೆ, ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ 7 ವಿಕೆಟ್‌ಗೆ 162 ರನ್‌ ಪೇರಿಸಿತು.ಎಂಎ ಚಿದಂಬರಂ ಮೈದಾನದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದ ಪಂಜಾಬ್‌ ಕಿಂಗ್ಸ್‌ ತಂಡ ಬೌಲಿಂಗ್‌ ಆಯ್ಕೆ ಮಾಡಿಕೊಂಡಿತು. ಚೆನ್ನೈ ಸೂಪರ್‌ ಕಿಂಗ್ಸ್‌ ಪರವಾಗಿ ಮೊದಲ ವಿಕೆಟ್‌ಗೆ ಅಜಿಂಕ್ಯ ರಹಾನೆ ಹಾಗೂ ರುತುರಾಜ್‌ ಗಾಯಕ್ವಾಡ್‌ 64 ರನ್‌ ಜೊತೆಯಾಟವಾಡಿದರು. 24 ಎಸೆತಗಳಲ್ಲಿ 29 ರನ್‌ಗಳೊಂದಿಗೆ ಏಕದಿನ ಶೈಲಿಯಲ್ಲಿ ಬ್ಯಾಟಿಂಗ್‌ ಮಾಡುತ್ತಿದ್ದ ಅಜಿಂಕ್ಯ ರಹಾನೆ, 9ನೇ ಓವರ್‌ನಲ್ಲಿ ಹರ್‌ಪ್ರೀತ್‌ ಬ್ರಾರ್‌ಗೆ ವಿಕೆಟ್‌ ಒಪ್ಪಿಸಿದರು. ನಂತರ ಬ್ಯಾಟಿಂಗ್‌ನಲ್ಲಿ ಜೊತೆಯಾದ ಶಿವಂ ದುಬೆ ಎದುರಿಸಿದ ಮೊದಲ ಎಸೆತದಲ್ಲೇ ವಿಕೆಟ್‌ ನೀಡಿದ್ದು ಚೆನ್ನೈ ತಂಡದ ಹಿನ್ನಡೆಗೆ ಕಾರಣವಾಯಿತು. 

ಟಿ20 ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯದ ನತದೃಷ್ಟ ಕ್ರಿಕೆಟಿಗರಿವರು..!

ಕಳಪೆ ಫಾರ್ಮ್‌ನಲ್ಲಿರುವ ಹಾರ್ದಿಕ್ ಪಾಂಡ್ಯಗೆ ವಿಶ್ವಕಪ್‌ ಟೂರ್ನಿಗೆ ಸೆಲೆಕ್ಟ್ ಮಾಡಿದ್ದೇಕೆ?