‘ಕೈತೊಳೆಯಿರಿ’ ಅಭಿಯಾನಕ್ಕೆ ಸಚಿನ್, ಸಿಂಧು ಬೆಂಬಲ
ಕೊರೋನಾ ವೈರಸ್ ಹರಡುತ್ತಿರುವ ಹಿನ್ನಲೆಯಲ್ಲಿ ಶಿಚಿತ್ವ ಕಾಪಾಡಲು ಮನವಿ ಮಾಡಲಾಗುತ್ತಿದೆ. ಇದೀಗ ಸಚಿನ್ ತೆಂಡುಲ್ಕರ್ ಹಾಗೂ ಪಿವಿ ಸಿಂಧು ವಿಶೇಷ ಅಭಿಯಾನದ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.
ಮುಂಬೈ(ಮಾ.19): ವಿಶ್ವ ಸಂಸ್ಥೆಯ ಅಂಗ ಸಂಸ್ಥೆಯಾಗಿರುವ ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಎಚ್‌ಒ)ಯ ಶುಚಿತ್ವ ಅಭಿಯಾನಕ್ಕೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್, ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಸೇರಿದಂತೆ ಇನ್ನೂ ಅನೇಕ ಭಾರತೀಯ ಕ್ರೀಡಾಪಟುಗಳು ಕೈಜೋಡಿಸಿದ್ದಾರೆ.
"
ಇದನ್ನೂ ಓದಿ: IPL 2020 ಟೂರ್ನಿ ಆಯೋಜಿಸಲು ಬಿಸಿಸಿಐನಿಂದ ಪ್ಲಾನ್ B, ಜುಲೈನಲ್ಲಿ ಟೂರ್ನಿ?
ಕೊರೋನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ‘ಕೈಗಳನ್ನು ಶುಚಿಯಾಗಿರಿಸಿಕೊಳ್ಳಿ’ ಎನ್ನುವ ಸಂದೇಶದೊಂದಿಗೆ ಡಬ್ಲ್ಯುಎಚ್‌ಒ ಆರಂಭಿಸಿರುವ ಅಭಿಯಾನ ಬೆಂಬಲಿಸಿರುವ ಸಚಿನ್ ಹಾಗೂ ಸಿಂಧು ತಮ್ಮ ಟ್ವೀಟರ್ ಖಾತೆಯಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ. ಕೈಗಳನ್ನು ಶುಚಿಯಾಗಿರಿಸಿಕೊಳ್ಳುವಂತೆ ತಮ್ಮ ಹಿಂಬಾಲಕರಿಗೆ ಕರೆ ನೀಡಿದ್ದಾರೆ.
ಇದನ್ನೂ ಓದಿ: ಕೊರೋನಾ ಆತಂಕ: 2020ರಲ್ಲೇ ಟೋಕಿಯೋ ಒಲಿಂಪಿಕ್ಸ್ ನಡೆಸಲು ಸಾಧ್ಯವೇ?
ಕೊರೋನಾ ವೈರಸ್ ಇದೀಗ ಭಾರತದಲ್ಲಿ ಹರಡುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದರ ಜೊತೆಗೆ ಸಾರ್ವಜನಿಕರು ಎಚ್ಚರ ವಹಿಸಬೇಕಿದೆ. ಶುಚಿತ್ವ ಕಾಪಾಡಲು ಮನವಿ ಮಾಡಲಾಗುತ್ತಿದೆ. ಕರ್ನಾಟಕದಲ್ಲೇ ಕೊರೋನಾ ಸೋಂಕಿತರ ಸಂಖ್ಯೆ 15ಕ್ಕೇರಿದೆ. ಹೀಗಾಗಿ ಎಚ್ಚರ ಅಗತ್ಯ.