Asianet Suvarna News Asianet Suvarna News

ವಿಶ್ವಕಪ್ 2019: ಇಂಡೋ-ಪಾಕ್ ಪಂದ್ಯದ ಬಗ್ಗೆ ನಿರ್ಧಾರ ಪ್ರಕಟಿಸಿದ ಐಸಿಸಿ

ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಜೈಷ್ ಇ ಮೊಹಮ್ಮದ್ ಸಂಘಟನೆ ಪುಲ್ವಾಮಾದಲ್ಲಿ ನಡೆಸಿದ ಆತ್ಮಾಹುತಿ ದಾಳಿಗೆ ಭಾರತದ 44 ಸಿಆರ್’ಪಿಎಫ್ ಯೋಧರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ದೇಶಾದ್ಯಂತ ಭಾರತ ತಂಡವು ಪಾಕ್ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಬೇಕು ಎಂಬ ಕೂಗು ಕೇಳಿಬಂದಿತ್ತು.

Severing cricketing ties with nations not our domain ICC tells BCCI
Author
Dubai - United Arab Emirates, First Published Mar 3, 2019, 1:08 PM IST

ದುಬೈ[ಮಾ.03] ಭಯೋತ್ಫಾದನೆಗೆ ಕುಮ್ಮಕ್ಕು ನೀಡುವ ಪಾಕಿಸ್ತಾನವನ್ನು ಮುಂಬರುವ ಏಕದಿನ ವಿಶ್ವಕಪ್ ಟೂರ್ನಿಯಿಂದ ಹೊರಗಿಡಬೇಕು ಎಂಬ ಬಿಸಿಸಿಐ ಮನವಿಯನ್ನು ಐಸಿಸಿ ತಳ್ಳಿಹಾಕಿದೆ. 

ಉಗ್ರರನ್ನು ಬೆಂಬಲಿಸುವ ಪಾಕ್ ತಂಡವನ್ನು ಬಹಿಷ್ಕರಿಸಿ: ವಿನೋದ್ ರಾಯ್

ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಜೈಷ್ ಇ ಮೊಹಮ್ಮದ್ ಸಂಘಟನೆ ಪುಲ್ವಾಮಾದಲ್ಲಿ ನಡೆಸಿದ ಆತ್ಮಾಹುತಿ ದಾಳಿಗೆ ಭಾರತದ 44 ಸಿಆರ್’ಪಿಎಫ್ ಯೋಧರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ದೇಶಾದ್ಯಂತ ಭಾರತ ತಂಡವು ಪಾಕ್ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಬೇಕು ಎಂಬ ಕೂಗು ಕೇಳಿಬಂದಿತ್ತು. ಈ ಕುರಿತಂತೆ ಐಸಿಸಿಗೆ ಪತ್ರ ಬರೆದಿದ್ದ ಬಿಸಿಸಿಐ, ಭಯೋತ್ಫಾದನೆಗೆ ನೆರವು ನೀಡುವ ದೇಶದೊಂದಿಗೆ ಯಾವುದೇ ಸಂಪರ್ಕ ಹೊಂದಬಾರದು ಎಂದು ಪತ್ರಬರೆದಿತ್ತು. ಇದೀಗ ಬಂದ ಮಾಧ್ಯಮಗಳ ವರದಿ ಪ್ರಕಾರ, ಬಿಸಿಸಿಐನ ಮನವಿಯನ್ನು ಐಸಿಸಿ ತಳ್ಳಿಹಾಕಿದೆ. ಅಲ್ಲದೇ ಐಸಿಸಿ ಟೂರ್ನಿಯು ರಾಜಕೀಯ ಗೊಂದಲಗಳಿಂದ ಸಂಪೂರ್ಣ ಅಂತರವನ್ನು ಕಾಯ್ದುಕೊಂಡಿದೆ ಎಂದು ತಿಳಿಸಿದೆ. ಅಲ್ಲದೆ ಎಲ್ಲಾ ತಂಡಗಳಿಗೂ ಸೂಕ್ತ ಭದ್ರತೆಯನ್ನು ಒದಗಿಸುವುದಾಗಿ ಐಸಿಸಿ ಭರವಸೆ ನೀಡಿದೆ.

ವಿಶ್ವಕಪ್ ಭದ್ರತೆ ಕುರಿತು ಬಿಸಿಸಿಐಗೆ ಐಸಿಸಿ ಭರವಸೆ

2019ರ ಏಕದಿನ ವಿಶ್ವಕಪ್ ಟೂರ್ನಿಯು ಮೇ 30ರಿಂದ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಆತಿಥ್ಯ ವಹಿಸಿರುವ ಇಂಗ್ಲೆಂಡ್ ತಂಡವು ದಕ್ಷಿಣ ಆಫ್ರಿಕಾ ಎದುರು ಸೆಣಸಲಿದೆ. 10 ತಂಡಗಳು ಪ್ರಶಸ್ತಿಗಾಗಿ ಕಾದಾಡಲಿದ್ದು, ಭಾರತ ಜೂನ್ 05ರಂದು ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಪಂದ್ಯವನ್ನಾಡಲಿದೆ. ಇನ್ನು ಪಾಕಿಸ್ತಾನ ವಿರುದ್ಧ ಜೂನ್ 16ರಂದು ಭಾರತ ಕಾದಾಡಲಿದೆ. 

ಆಟಗಾರರ ಸುರಕ್ಷತೆಯೇ ಮೊದಲ ಆದ್ಯತೆ: ಐಸಿಸಿ
 
 

Follow Us:
Download App:
  • android
  • ios