Asianet Suvarna News Asianet Suvarna News

ವೈಟ್‌ವಾಶ್‌ ಮುಖಭಂಗ ತಪ್ಪಿಸಿಕೊಂಡ ಭಾರತ

ದಕ್ಷಿಣ ಆಫ್ರಿಕಾ ವಿರುದ್ದದ ಕೊನೆಯ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ಕ್ರಿಕೆಟ್‌ ತಂಡ ಭರ್ಜರಿ ಗೆಲುವು ಸಾಧಿಸುವ ಮೂಲಕ ಸರಣಿ ವೈಟ್‌ವಾಶ್‌ ಮುಖಭಂಗದಿಂದ ಪಾರಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

Shafali Verma blasting Fifty helps Indian women Cricket Team register consolation win against South Africa in Lucknow kvn
Author
Lucknow, First Published Mar 24, 2021, 8:50 AM IST

ಲಖನೌ(ಮಾ.24): ದಕ್ಷಿಣ ಆಫ್ರಿಕಾ ವಿರುದ್ಧ 3ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ 9 ವಿಕೆಟ್‌ ಗೆಲುವು ಸಾಧಿಸಿದ ಭಾರತ ಮಹಿಳಾ ತಂಡ, ವೈಟ್‌ವಾಶ್‌ ಮುಖಭಂಗದಿಂದ ಪಾರಾಗಿದೆ. 

5 ಪಂದ್ಯಗಳ ಏಕದಿನ ಸರಣಿಯನ್ನು 4-1 ಅಂತರದಲ್ಲಿ ಜಯಿಸಿದ್ದ ದಕ್ಷಿಣ ಆಫ್ರಿಕಾ ಇದೀಗ 3 ಪಂದ್ಯಗಳ ಟಿ20 ಸರಣಿಯಲ್ಲಿ 2-1ರ ಅಂತರದಲ್ಲಿ ಗೆಲುವು ದಾಖಲಿಸುವ ಮೂಲಕ ಟಿ20 ಸರಣಿಯನ್ನೂ ಗೆದ್ದುಕೊಂಡಿದೆ. ಮೊದಲೆರಡು ಟಿ20 ಪಂದ್ಯಗಳಲ್ಲಿ ಆಘಾತಕಾರಿ ಸೋಲು ಕಂಡಿದ್ದ ಭಾರತ ಮೂರನೇ ಟಿ20 ಪಂದ್ಯದಲ್ಲಿ ಶತಾಯಗತಾಯ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿತ್ತು.

ಇಲ್ಲಿನ ಏಕಾನ ಕ್ರಿಕೆಟ್‌ ಮೈದಾನದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್‌ ಮಾಡುವ ಅವಕಾಶ ಪಡೆದ ಹರಿಣಗಳ ಪಡೆ ಕನ್ನಡತಿ ರಾಜೇಶ್ವರಿ ಗಾಯಕ್ವಾಡ್ ಮಿಂಚಿನ ಸ್ಪಿನ್‌ ದಾಳಿಗೆ ತತ್ತರಿಸಿ 7 ವಿಕೆಟ್ ಕಳೆದುಕೊಂಡು ಕೇವಲ 112 ರನ್‌ ಮಾತ್ರ ಕಲೆಹಾಕಿತ್ತು. ಗಾಯಕ್ವಾಡ್ 4 ಓವರ್‌ ಬೌಲಿಂಗ್‌ ಮಾಡಿ ಒಂದು ಮೇಡನ್ ಸಹಿತ ಕೇವಲ 9 ರನ್‌ ನೀಡಿ ಪ್ರಮುಖ 3 ವಿಕೆಟ್‌ ಕಬಳಿಸಿ ಮಿಂಚಿದರು.

ಇನ್ನು ಸಾಧಾರಣ ಗುರಿ ಬೆನ್ನತ್ತಿದ ಭಾರತ ಕೇವಲ 11 ಓವರಲ್ಲಿ ಒಂದು ವಿಕೆಟ್‌ ಕಳೆದುಕೊಂಡು ಗೆಲುವಿನ ನಗೆ ಬೀರಿತು. ಸ್ಪೋಟಕ ಬ್ಯಾಟಿಂಗ್ ನಡೆಸಿದ ಯುವ ಆಟಗಾರ್ತಿ ಶಫಾಲಿ ವರ್ಮಾ ಕೇವಲ 30 ಎಸೆತಗಳಲ್ಲಿ 7 ಬೌಂಡರಿ ಹಾಗೂ 5 ಸಿಕ್ಸರ್‌ ನೆರವಿನಿಂದ 60 ರನ್ ಚಚ್ಚಿದರೆ, ಸ್ಮೃತಿ ಮಂಧನಾ ಅಜೇಯ 48 ರನ್‌ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಸ್ಕೋರ್‌: 
ದ.ಆಫ್ರಿಕಾ 112/7
ಭಾರತ 114/1
 

Follow Us:
Download App:
  • android
  • ios