ಭಾರತ ವಿರುದ್ದದ ಪಿಂಕ್ ಬಾಲ್ ಟೆಸ್ಟ್‌ಗೆ ಆಸೀಸ್ ತಂಡ ಪ್ರಕಟಿಸಿದ ಶೇನ್ ವಾರ್ನ್..!
ಭಾರತ ವಿರುದ್ದ ಡಿಸೆಂಬರ್ 17ರಂದು ಆರಂಭವಾಗಲಿರುವ ಪಿಂಕ್ ಬಾಲ್ ಟೆಸ್ಟ್ ಪಂದ್ಯಕ್ಕೆ ಸ್ಪಿನ್ ದಿಗ್ಗಜ ಶೇನ್ ವಾರ್ನ್ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
ಅಡಿಲೇಡ್(ಡಿ.14): ಸೀಮಿತ ಓವರ್‌ಗಳ ಸರಣಿ ಮುಕ್ತಾಯವಾಗಿದ್ದು, ಇದೀಗ ಭಾರತ-ಆಸ್ಟ್ರೇಲಿಯಾ ನಡುವಿನ ಬಹುನಿರೀಕ್ಷಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಅದರಲ್ಲೂ ಡಿಸೆಂಬರ್ 17ರಂದು ಅಡಿಲೇಡ್ ಮೈದಾನದಲ್ಲಿ ನಡೆಯಲಿರುವ ಪಿಂಕ್ ಬಾಲ್ ಟೆಸ್ಟ್ ಪಂದ್ಯಕ್ಕೆ ಸ್ಪಿನ್ ದಿಗ್ಗಜ ಶೇನ್ ವಾರ್ನರ್ ಅಸ್ಟ್ರೇಲಿಯಾ ತಂಡವನ್ನು ಪ್ರಕಟಿಸಿದ್ದು, ಡೇವಿಡ್ ವಾರ್ನರ್ ಅನುಪಸ್ಥಿತಿಯಲ್ಲಿ ಆರಂಭಿಕರಾಗಿ ಹೊಸ ಆಟಗಾರರನ್ನು ಹೆಸರಿಸಿದ್ದಾರೆ.
ವಿಲ್ ಪುಕೊವಿಸ್ಕಿ ಭಾರತ ವಿರುದ್ದದ ಅಭ್ಯಾಸ ಪಂದ್ಯದಲ್ಲಿ ಗಾಯಕ್ಕೆ ತುತ್ತಾಗಿ ಮೊದಲ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದರು. ಅವರ ಬದಲಿಗೆ ಮಾರ್ಕಸ್ ಹ್ಯಾರಿಸ್‌ಗೆ ತಂಡಕ್ಕೆ ಬುಲಾವ್ ಬಂದಿತ್ತು. ಹೀಗಾಗಿ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಮಾರ್ಕಸ್ ಹ್ಯಾರಿಸ್ ಹಾಗೂ ಮ್ಯಾಥ್ಯೂ ವೇಡ್ ಇನಿಂಗ್ಸ್ ಆರಂಭಿಸಲಿ ಎನ್ನುವ ಸಲಹೆಯನ್ನು ಶೇನ್ ವಾರ್ನ್ ನೀಡಿದ್ದಾರೆ.
ಪಿಂಕ್ ಬಾಲ್ ಟೆಸ್ಟ್‌ಗೆ ಆಸೀಸ್ ತಂಡ ಕೂಡಿಕೊಂಡ ಮಾರಕ ವೇಗಿ..!
ರೋರಿ ಬರ್ನ್ಸ್ ಕಳಪೆ ಫಾರ್ಮ್‌ನಿಂದ ಬಳಲುತ್ತಿದ್ದು, ಅವರ ಬದಲು ಆರಂಭಿಕನಾಗಿ ಮ್ಯಾಥ್ಯೂ ವೇಡ್ ಅವರನ್ನು ವಾರ್ನ್ ಆಯ್ಕೆ ಮಾಡಿದ್ದಾರೆ. ಮಧ್ಯಮ ಕ್ರಮಾಂಕ ಹಾಗೂ ಬೌಲಿಂಗ್‌ದಲ್ಲೂ ಬಲಿಷ್ಠ ಆಟಗಾರರಿಂದ ಕೂಡಿದ ತಂಡವನ್ನೇ ಶೇನ್ ವಾರ್ನ್ ಆಯ್ಕೆ ಮಾಡಿದ್ದಾರೆ. ಒಂದು ವೇಳೆ ಕ್ಯಾಮರೋನ್ ಗ್ರೀನ್ ಹೊರಗುಳಿದರೆ ಸಬ್‌ಸ್ಟಿಟ್ಯೂಟ್ ಆಟಗಾರನಾಗಿ ಶಾನ್ ಮಾರ್ಷ್ ಅವರಿಗೆ ಶೇನ್ ವಾರ್ನ್ ಮಣೆ ಹಾಕಿದ್ದಾರೆ.
ಪಿಂಕ್ ಬಾಲ್ ಟೆಸ್ಟ್ ಪಂದ್ಯಕ್ಕೆ ವಾರ್ನ್ ಆಯ್ಕೆ ಮಾಡಿದ ಆಸ್ಟ್ರೇಲಿಯಾ ತಂಡ ಹೀಗಿದೆ ನೋಡಿ:
ಮ್ಯಾಥ್ಯೂ ವೇಡ್, ಮಾರ್ಕಸ್ ಹ್ಯಾರಿಸ್, ಮಾರ್ನಸ್ ಲಬುಸೇನ್, ಸ್ಟೀವ್ ಸ್ಮಿತ್, ತ್ರಾವಿಸ್ ಹೆಡ್, ಕ್ಯಾಮರೋನ್ ಗ್ರೀನ್, ಟಿಮ್ ಪೈನೆ(ವಿಕೆಟ್ ಕೀಪರ್+ನಾಯಕ) ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ಜೋಸ್ ಹ್ಯಾಜಲ್‌ವುಡ್.