Asianet Suvarna News Asianet Suvarna News

ಆ ಕರ್ಣನಂತೆ....! ತಂಡದಿಂದ ಹೊರಬಿದ್ದರೂ ಭಾರತ ವಿಶ್ವಕಪ್ ಗೆಲ್ಲಲಿ ಎಂದು ಪ್ರಾರ್ಥಿಸಿದ ಶಿಖರ್ ಧವನ್..!

ಕಳೆದೊಂದು ದಶಕದಲ್ಲಿ ಇದೇ ಮೊದಲ ಬಾರಿಗೆ ಏಕದಿನ ಕ್ರಿಕೆಟ್‌ ಮಾದರಿಯ ಐಸಿಸಿ ಟೂರ್ನಿಯಲ್ಲಿ ಶಿಖರ್ ಧವನ್ ಹೊರಗುಳಿದಿದ್ದಾರೆ. ಶಿಖರ್ ಧವನ್, ವಿಶ್ವಕಪ್‌ಗೆ ಭಾರತ ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದರೂ, ಡೆಲ್ಲಿ ಮೂಲದ ಕ್ರಿಕೆಟಿಗ ಇದೀಗ ಮಹಾಕಾಳೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಟೀಂ ಇಂಡಿಯಾಗೆ ಯಶಸ್ಸು ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.  

Shikhar Dhawan Prays For India Success in ODI World Cup 2023 video viral kvn
Author
First Published Sep 9, 2023, 5:46 PM IST

ಮುಂಬೈ(ಸೆ.09): ಮುಂಬರುವ ಅಕ್ಟೋಬರ್ 05ರಿಂದ ಭಾರತದಲ್ಲೇ ಆರಂಭವಾಗಲಿರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ 15 ಆಟಗಾರರನ್ನೊಳಗೊಂಡ ಭಾರತ ಕ್ರಿಕೆಟ್ ತಂಡ ಪ್ರಕಟವಾಗಿದೆ. ಕಳೆದ ಮಂಗಳವಾರವಷ್ಟೇ ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್, ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಸಮ್ಮುಖದಲ್ಲಿ ವಿಶ್ವಕಪ್ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಿದ್ದರು.  

ಟೀಂ ಇಂಡಿಯಾ ಪ್ರಕಟಿಸಿದ ವಿಶ್ವಕಪ್ ತಂಡದಲ್ಲಿ ಕನ್ನಡಿಗ ಕೆ ಎಲ್ ರಾಹುಲ್, ಶ್ರೇಯಸ್ ಅಯ್ಯರ್ ಹಾಗೂ ಜಸ್ಪ್ರೀತ್ ಬುಮ್ರಾ ಅವರಂತಹ ಆಟಗಾರರು ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಆದರೆ ರವಿಚಂದ್ರನ್ ಅಶ್ವಿನ್, ಯುಜುವೇಂದ್ರ ಚಹಲ್, ಪ್ರಸಿದ್ದ್ ಕೃಷ್ಣ, ಸಂಜು ಸ್ಯಾಮ್ಸನ್ ಹಾಗೂ ಶಿಖರ್ ಧವನ್ ಅವರಂತಹ ಆಟಗಾರರು ಭಾರತ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ. ಅದರಲ್ಲೂ ಏಕದಿನ ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿದ್ದ ಅನುಭವಿ ಆರಂಭಿಕ ಬ್ಯಾಟರ್ ಶಿಖರ್ ಧವನ್ ಅವರನ್ನು ವಿಶ್ವಕಪ್ ತಂಡದಿಂದ ಕೈಬಿಟ್ಟಿದ್ದು ಸಾಕಷ್ಟು ಅಚ್ಚರಿಗೆ ಕಾರಣವಾಗಿತ್ತು. ಕಳೆದೊಂದು ದಶಕದಲ್ಲಿ ಇದೇ ಮೊದಲ ಬಾರಿಗೆ ಏಕದಿನ ಕ್ರಿಕೆಟ್‌ ಮಾದರಿಯ ಐಸಿಸಿ ಟೂರ್ನಿಯಲ್ಲಿ ಶಿಖರ್ ಧವನ್ ಹೊರಗುಳಿದಿದ್ದಾರೆ. ಶಿಖರ್ ಧವನ್, ವಿಶ್ವಕಪ್‌ಗೆ ಭಾರತ ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದರೂ, ಡೆಲ್ಲಿ ಮೂಲದ ಕ್ರಿಕೆಟಿಗ ಇದೀಗ ಮಹಾಕಾಳೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಟೀಂ ಇಂಡಿಯಾಗೆ ಯಶಸ್ಸು ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.  

Asia Cup 2023 ಪಾಕ್‌ ಎದುರಿನ ಹೈವೋಲ್ಟೇಜ್‌ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಮತ್ತಷ್ಟು ಬಲ..!

ಹೌದು, ಗಬ್ಬರ್ ಸಿಂಗ್ ಖ್ಯಾತಿಯ ಶಿಖರ್ ಧವನ್, ಉಜ್ಜೇಯನಿಯಲ್ಲಿರುವ ಬಾಬಾ ಮಹಾಕಾಳೇಶ್ವರದ ದೇವಾಲಯಕ್ಕೆ ಭೇಟಿ ನೀಡಿ ಜ್ಯೋತಿರ್ಲಿಂಗ ಬಳಿ ಟೀಂ ಇಂಡಿಯಾ ಯಶಸ್ಸಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಖ್ಯಾತ ಬಾಲಿವುಡ್ ನಟ ಅಕ್ಷಯ್ ಕುಮಾರ್ ಕೂಡಾ ಹಾಜರಿದ್ದರು. ಈ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.

ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರ ಜತೆ ಮಾತನಾಡಿದ ಶಿಖರ್ ಧವನ್, "ಭಾರತ ಏಕದಿನ ವಿಶ್ವಕಪ್ ಗೆಲ್ಲಬೇಕು ಎನ್ನುವುದು ಪ್ರತಿಯೊಬ್ಬರ ಹಾರೈಕೆಯಾಗಿದೆ. ನಾನು ಕೂಡಾ ದೇವರಲ್ಲಿ ಅದೇ ಪ್ರಾರ್ಥನೆ ಮಾಡಿದ್ದೇನೆ" ಎಂದು ಎಡಗೈ ಬ್ಯಾಟರ್ ಹೇಳಿದ್ದಾರೆ.

ಏಷ್ಯಾಕಪ್ ಬಳಿಕ ಎರಡನೇ ಸಲ ಮದುವೆಗೆ ಮುಂದಾದ ಶಾಹೀನ್ ಅಫ್ರಿದಿ..! ಯಾಕೆ ಹೀಗೆ?

ಬಹುನಿರೀಕ್ಷಿತ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯು ಅಕ್ಟೋಬರ್ 05ರಿಂದ ನವೆಂಬರ್ 19ರ ವರೆಗೆ ಭಾರತದ ವಿವಿಧ 10 ಸ್ಟೇಡಿಯಂನಲ್ಲಿ ವಿಶ್ವಕಪ್ ಪಂದ್ಯಾವಳಿಗಳು ನಡೆಯಲಿವೆ. ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಅಕ್ಟೋಬರ್ 08ರಂದು ಚೆನ್ನೈನಲ್ಲಿ ಆಸ್ಟ್ರೇಲಿಯಾ ವಿರುದ್ದ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ. 

ವಿಶ್ವಕಪ್ ಟೂರ್ನಿಗೆ ಭಾರತ ತಂಡ ಹೀಗಿದೆ ನೋಡಿ:

ರೋಹಿತ್‌ ಶರ್ಮಾ(ನಾಯಕ), ಹಾರ್ದಿಕ್‌ ಪಾಂಡ್ಯ(ಉಪನಾಯಕ), ಶುಭ್‌ಮನ್ ಗಿಲ್‌, ವಿರಾಟ್ ಕೊಹ್ಲಿ, ಶ್ರೇಯಸ್‌ ಅಯ್ಯರ್, ಕೆ ಎಲ್ ರಾಹುಲ್‌(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್‌ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್‌, ಕುಲ್ದೀಪ್‌ ಯಾದವ್, ಮೊಹಮ್ಮದ್ ಶಮಿ, ಅಕ್ಷರ್‌ ಪಟೇಲ್, ಇಶಾನ್ ಕಿಶನ್‌, ಸೂರ್ಯಕುಮಾರ್ ಯಾದವ್.

Follow Us:
Download App:
  • android
  • ios