* 42ನೇ ವಸಂತಕ್ಕೆ ಕಾಲಿರಿಸಿದ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್* ಭಜ್ಜಿ ಹುಟ್ಟುಹಬ್ಬಕ್ಕೆ ಹರಿದುಬಂತು ಶುಭಾಶಯಗಳ ಮಹಾಪೂರ* ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 700ಕ್ಕೂ ಅಧಿಕ ವಿಕೆಟ್ ಕಬಳಿಸಿರುವ ಭಜ್ಜಿ

ಬೆಂಗಳೂರು(ಜು.03): ಭಾರತ ಕ್ರಿಕೆಟ್ ಕಂಡಂತಹ ದಿಗ್ಗಜ ಆಫ್‌ ಸ್ಪಿನ್ನರ್‌ ಹರ್ಭಜನ್ ಸಿಂಗ್ ಇಂದು(ಜು.03) ತಮ್ಮ 42ನೇ ವಸಂತಕ್ಕೆ ಕಾಲಿರಿಸಿದ್ದಾರೆ. ಟರ್ಬನೇಟರ್‌ ಖ್ಯಾತಿಯ ಹರ್ಭಜನ್ ಸಿಂಗ್, ತಮ್ಮ ದಶಕಗಳ ಕಾಲದ ಕ್ರಿಕೆಟ್ ವೃತ್ತಿಜೀವನಕ್ಕೆ ಕಳೆದ ವರ್ಷ ಅಂದರೆ 2021ರಲ್ಲಿ ನಿವೃತ್ತಿ ಘೋಷಿಸಿದ್ದರು. ಹರ್ಭಜನ್ ಸಿಂಗ್ ಅವರ ಈ ಹುಟ್ಟುಹಬ್ಬದ ಸಂಭ್ರಮದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿವೆ

1998ರಲ್ಲಿ ಭಾರತ ಕ್ರಿಕೆಟ್ ತಂಡಕ್ಕೆ ಪಾದಾರ್ಪಣೆ ಮಾಡಿದ್ದ ಹರ್ಭಜನ್ ಸಿಂಗ್ (Harbhajan Singh), 2016ರಲ್ಲಿ ಕೊನೆಯ ಬಾರಿಗೆ ಟೀಂ ಇಂಡಿಯಾವನ್ನು (Team India) ಪ್ರತಿನಿಧಿಸಿದ್ದರು. ಇನ್ನು ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್‌ ಹಾಗೂ ಕೋಲ್ಕತಾ ನೈಟ್ ರೈಡರ್ಸ್ ಪರ ಕಣಕ್ಕಿಳಿದು ಎದುರಾಳಿ ತಂಡವನ್ನು ಕಾಡಿದ್ದರು. ಇನ್ನು ಟೀಂ ಇಂಡಿಯಾ ಹಿರಿಯ ಆಟಗಾರರಾದ ಶಿಖರ್ ಧವನ್, ಯುವರಾಜ್ ಸಿಂಗ್ ಸೇರಿದಂತೆ ಹಲವು ಹಿರಿ-ಕಿರಿಯ ಆಟಗಾರರು ಭಜ್ಜಿ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ.

ಮೈದಾನದೊಳಗೆ ಹಾಗೂ ಮೈದಾನದಾಚೆಗೆ ವಿನೂತನ ಮ್ಯಾನರೀಸಂ ಮೂಲಕ ಸುದ್ದಿಯಾಗುವ ಗಬ್ಬರ್ ಸಿಂಗ್ ಖ್ಯಾತಿಯ ಶಿಖರ್ ಧವನ್ (Shikhar Dhawan), ಹರ್ಭಜನ್ ಸಿಂಗ್ ಹುಟ್ಟುಹಬ್ಬಕ್ಕೆ ವಿನೂತನವಾಗಿ ಶುಭ ಕೋರುವ ಮೂಲಕ ಬರ್ತ್‌ಡೇ ಪಾರ್ಟಿ ಕೇಳಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ.

View post on Instagram

ಇನ್ನು ಭಜ್ಜಿ ಜತೆಗೆ ಸಾಕಷ್ಟು ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ಯುವರಾಜ್ ಸಿಂಗ್ (Yuvraj Singh) ಕೂಡಾ, ಹರ್ಭಜನ್ ಸಿಂಗ್ ಜತೆಗಿನ ಹಳೆಯ ಒಡನಾಟದ ವಿಡಿಯೋಗಳನ್ನು ಹಂಚಿಕೊಳ್ಳುವ ಮೂಲಕ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

View post on Instagram

ಜಸ್ಪ್ರೀತ್ ಬುಮ್ರಾ ಯಾರೆಂದ Barmy Army, ಮುಟ್ಟಿ ನೋಡಿಕೊಳ್ಳುವಂತ ಉತ್ತರ ನೀಡಿದ Bharat Army.!

ಇನ್ನು ಬಿಸಿಸಿಐ (BCCI) ಕೂಡಾ ಭಾರತದ ಯಶಸ್ವಿ ಸ್ಪಿನ್ನರ್ ಎನಿಸಿಕೊಂಡಿರುವ ಹರ್ಭಜನ್ ಸಿಂಗ್ ಹುಟ್ಟುಹಬ್ಬಕ್ಕೆ ಶುಭ ಕೋರಿದೆ. 367 ಅಂತಾರಾಷ್ಟ್ರೀಯ ಪಂದ್ಯಗಳು, 711 ಅಂತಾರಾಷ್ಟ್ರೀಯ ವಿಕೆಟ್‌ಗಳು ಹಾಗೂ 3,569 ರನ್‌ಗಳು. ಟೆಸ್ಟ್ ಕ್ರಿಕೆಟ್‌ನಲ್ಲಿ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ ಮೊದಲ ಭಾರತೀಯ ಬೌಲರ್. 2007ರ ಟಿ20 ವಿಶ್ವಕಪ್ ಹಾಗೂ 2011ರ ಏಕದಿನ ವಿಶ್ವಕಪ್ ವಿಜೇತ ತಂಡದ ಸದಸ್ಯ ಹರ್ಭಜನ್ ಸಿಂಗ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಟ್ವೀಟ್ ಮಾಡಿದೆ.

Scroll to load tweet…
Scroll to load tweet…

ಭಾರತ ಕ್ರಿಕೆಟ್ ತಂಡವು (Indian Cricket Team) ಕಂಡಂತಹ ದಿಗ್ಗಜ ಆಫ್‌ಸ್ಪಿನ್ನರ್ ಎನಿಸಿಕೊಂಡಿರುವ ಹರ್ಭಜನ್ ಸಿಂಗ್, ಟೀಂ ಇಂಡಿಯಾ ಪರ 103 ಟೆಸ್ಟ್, 236 ಏಕದಿನ ಹಾಗೂ 28 ಟಿ20 ಪಂದ್ಯಗಳನ್ನಾಡಿದ್ದು, ಕ್ರಮವಾಗಿ 417, 269 ಹಾಗೂ 25 ವಿಕೆಟ್ ಕಬಳಿಸಿದ್ದಾರೆ. 2001ರಲ್ಲಿ ತವರಿನಲ್ಲಿ ಆಸ್ಟ್ರೇಲಿಯಾ ಎದುರಿನ ಟೆಸ್ಟ್ ಪಂದ್ಯದಲ್ಲಿ ಸತತ 3 ಎಸೆತಗಳಲ್ಲಿ ಮೂರು ವಿಕೆಟ್ ಕಬಳಿಸುವ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ ಭಾರತದ ಮೊದಲ ಬೌಲರ್ ಎನ್ನುವ ಕೀರ್ತಿಗೆ ಪಾತ್ರರಾಗಿದ್ದರು. ಇದಷ್ಟೇ ಅಲ್ಲದೇ ಟೆಸ್ಟ್‌ ಕ್ರಿಕೆಟ್‌ನಲ್ಲಿ ಭಾರತ ಪರ 400+ ವಿಕೆಟ್ ಕಬಳಿಸಿದ ಮೊದಲ ಆಫ್‌ಸ್ಪಿನ್ನರ್ ಎನ್ನುವ ಹಿರಿಮೆಯೂ ಭಜ್ಜಿ ಹೆಸರಿನಲ್ಲಿದೆ. ಹರ್ಭಜನ್ ಸಿಂಗ್ 1998ರಲ್ಲಿ ಆಸ್ಟ್ರೇಲಿಯಾ ವಿರುದ್ದ ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಟೆಸ್ಟ್‌ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು.