Asianet Suvarna News Asianet Suvarna News

"ಈತ ನಮ್ಮ ತಂಡದ ಬ್ಯಾಟಿಂಗ್ ಬೆನ್ನೆಲುಬು" ಎಂದ ರವಿಚಂದ್ರನ್ ಅಶ್ವಿನ್‌..! ಯಾರದು?

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಫೆಬ್ರವರಿ 09ರಿಂದ ಆರಂಭ
ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ಪ್ರದರ್ಶನ ಕೊಂಡಾಡಿದ ರವಿಚಂದ್ರನ್ ಅಶ್ವಿನ್
ಶ್ರೇಯಸ್ ಅಯ್ಯರ್ ಟೀಂ ಇಂಡಿಯಾ ಬ್ಯಾಟಿಂಗ್ ಬೆನ್ನೆಲುಬು ಎಂದು ಬಣ್ಣಿಸಿದ ಅಶ್ವಿನ್

Shreyas Iyer has been the backbone of India batting order Says Ravichandran Ashwin kvn
Author
First Published Feb 4, 2023, 2:49 PM IST

ನಾಗ್ಪುರ(ಫೆ.04): ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. 4 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯವು ಫೆಬ್ರವರಿ 09ರಿಂದ ಆರಂಭವಾಗಲಿದ್ದು, ನಾಗ್ಪುರ ಮೊದಲ ಟೆಸ್ಟ್ ಪಂದ್ಯಕ್ಕೆ ಆತಿಥ್ಯವನ್ನು ವಹಿಸಿದೆ. ಇದೀಗ ತಂಡದ ಸಹ ಆಟಗಾರ ಶ್ರೇಯಸ್ ಅಯ್ಯರ್ ಅವರ ಬಗ್ಗೆ ಅನುಭವಿ ಆಟಗಾರ ರವಿಚಂದ್ರನ್ ಅಶ್ವಿನ್ ಮೆಚ್ಚುಗೆ ವ್ಯಕ್ತಪಡಿಸಿದ್ದು, ಮುಂಬೈ ಮೂಲದ 28 ವರ್ಷದ ಶ್ರೇಯಸ್ ಅಯ್ಯರ್, ಭಾರತ ಕ್ರಿಕೆಟ್ ತಂಡದ ಬೆನ್ನೆಲುಬು ಎಂದು ಬಣ್ಣಿಸಿದ್ದಾರೆ.

ಬಲಗೈ ಬ್ಯಾಟರ್ ಶ್ರೇಯಸ್ ಅಯ್ಯರ್, ಕಳೆದ ವರ್ಷ ಟೆಸ್ಟ್ ಕ್ರಿಕೆಟ್‌ನಲ್ಲಿ ಅತ್ಯಂತ ಸ್ಥಿರ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದರು. ಕಳೆದ ವರ್ಷ ಶ್ರೇಯಸ್‌ ಅಯ್ಯರ್, ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತ ಪರ ಎರಡನೇ ಗರಿಷ್ಠ ರನ್ ಸರದಾರರಾಗಿ ಹೊರಹೊಮ್ಮಿದ್ದರು. 2022ರಲ್ಲಿ ಶ್ರೇಯಸ್ ಅಯ್ಯರ್ 422 ರನ್ ಬಾರಿಸಿ ಮೊದಲ ಸ್ಥಾನದಲ್ಲಿದ್ದರೇ, ರಿಷಭ್ ಪಂತ್ 680 ಬಾರಿಸಿ ಮೊದಲ ಸ್ಥಾನ ಕಾಯ್ದುಕೊಂಡಿದ್ದರು.

ಇದಷ್ಟೇ ಅಲ್ಲದೇ ಶ್ರೇಯಸ್ ಅಯ್ಯರ್, ಕಳೆದ ವರ್ಷ ಏಕದಿನ ಕ್ರಿಕೆಟ್‌ನಲ್ಲೂ ಅದ್ಭುತ ಬ್ಯಾಟಿಂಗ್ ಪ್ರದರ್ಶನ ತೋರಿ ಮಿಂಚಿದ್ದರು. ಶ್ರೇಯಸ್ ಅಯ್ಯರ್ ಕಳೆದ ವರ್ಷ 724 ರನ್‌ ಬಾರಿಸುವ ಮೂಲಕ, ಏಕದಿನ ಕ್ರಿಕೆಟ್‌ನಲ್ಲಿ ಭಾರತ ಪರ ಗರಿಷ್ಠ ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದರು. ಹೀಗಾಗಿಯೇ ಶ್ರೇಯಸ್ ಅಯ್ಯರ್, 2022ನೇ ಸಾಲಿನ ಐಸಿಸಿ ವರ್ಷದ ಏಕದಿನ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದರು.

ಇದೀಗ ಆಸ್ಟ್ರೇಲಿಯಾ ಎದುರಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೂ ಮುನ್ನ ಟೀಂ ಇಂಡಿಯಾದ ಈ ಇಬ್ಬರು ಪ್ರಮುಖ ಬ್ಯಾಟರ್‌ಗಳ ಅನುಪಸ್ಥಿತಿಯನ್ನು ರೋಹಿತ್ ಪಡೆ ಎದುರಿಸುತ್ತಿದೆ. ರಿಷಭ್ ಪಂತ್, ಕಳೆದ ವರ್ಷದ ಕೊನೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇನ್ನು ಶ್ರೇಯಸ್ ಅಯ್ಯರ್, ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಆಸೀಸ್ ಎದುರಿನ ಮೊದಲ ಟೆಸ್ಟ್‌ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.

ಕಳೆದ ಕೆಲ ವರ್ಷಗಳಿಂದ ರಿಷಭ್ ಪಂತ್ ಹಾಗೂ ಶ್ರೇಯಸ್ ಅಯ್ಯರ್ ತಂಡದ ಪರ ಬ್ಯಾಟಿಂಗ್‌ನಲ್ಲಿ ಆಧಾರಸ್ತಂಭವಾಗಿರುತ್ತಾರೆ. ಶ್ರೇಯಸ್‌ ಅಯ್ಯರ್ ಭಾರತ ಕ್ರಿಕೆಟ್ ತಂಡದ ಬ್ಯಾಟಿಂಗ್ ಬೆನ್ನೆಲುಬು ಎಂದರೆ ಅತಿಶಯೋಕ್ತಿಯಾಗಲಾರದು. ಅವರು ರಿಷಭ್ ಪಂತ್ ಅನುಪಸ್ಥಿತಿಯಲ್ಲಿ ಭಾರತ ತಂಡದ ಪರ ಮಹತ್ತರ ಪಾತ್ರವನ್ನು ನಿಭಾಯಿಸಲಿದ್ದಾರೆ ಎಂದು ರವಿಚಂದ್ರನ್ ಅಶ್ವಿನ್ ಹೇಳಿದ್ದಾರೆ.

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ವೇಳಾಪಟ್ಟಿ ಹೀಗಿದೆ: 

ಫೆಬ್ರವರಿ 9-12: ಮೊದಲ ಟೆಸ್ಟ್- ನಾಗ್ಪುರ
ಫೆಬ್ರವರಿ 17-21: ಎರಡನೇ ಟೆಸ್ಟ್- ಡೆಲ್ಲಿ
ಮಾರ್ಚ್‌ 01-05: ಮೂರನೇ ಟೆಸ್ಟ್ - ಧರ್ಮಶಾಲಾ
ಮಾರ್ಚ್‌ 09-13: ನಾಲ್ಕನೇ ಟೆಸ್ಟ್ - ಅಹಮದಾಬಾದ್

ಆಸೀಸ್‌ ಟೆಸ್ಟ್‌ ಸರಣಿಗೆ ಭಾರತ ತಂಡ ಹೀಗಿದೆ: 

ರೋಹಿತ್‌ ಶರ್ಮಾ, ಕೆ ಎಲ್ ರಾಹುಲ್‌, ಶುಭ್‌ಮನ್ ಗಿಲ್‌, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್‌ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆ ಎಸ್ ಭರತ್‌, ಇಶಾನ್ ಕಿಶನ್‌, ರವಿಚಂದ್ರನ್‌ ಅಶ್ವಿನ್‌, ಅಕ್ಷರ್‌ ಪಟೇಲ್, ಕುಲ್ದೀಪ್‌ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್‌, ಉಮೇಶ್‌ ಯಾದವ್, ಜಯದೇವ್ ಉನಾದ್ಕತ್‌.

ಭಾರತ ಸರಣಿಗೆ ಆಸ್ಟ್ರೇಲಿಯಾ ತಂಡ ಹೀಗಿದೆ ನೋಡಿ:

ಪ್ಯಾಟ್ ಕಮಿನ್ಸ್‌(ನಾಯಕ), ಆಸ್ಟನ್ ಅಗರ್, ಸ್ಕಾಟ್ ಬೋಲೆಂಡ್, ಅಲೆಕ್ಸ್ ಕ್ಯಾರಿ, ಕ್ಯಾಮರೋನ್ ಗ್ರೀನ್, ಜೋಶ್ ಹೇಜಲ್‌ವುಡ್‌, ಪೀಟರ್‌ ಹ್ಯಾಂಡ್ಸ್‌ಕಂಬ್, ಟ್ರಾವಿಸ್ ಹೆಡ್‌, ಉಸ್ಮಾನ್ ಖವಾಜ, ಮಾರ್ನಸ್ ಲಬುಶೇನ್, ನೇಥನ್ ಲಯನ್, ಲಾನ್ಸ್ ಮೋರಿಸ್, ಟೋಡ್ ಮುರ್ಫೆ, ಮ್ಯಾಥ್ಯೂ ರೆನ್‌ಶೋ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್‌, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್.

Follow Us:
Download App:
  • android
  • ios