ಭಾರತ ಎದುರಿನ ಏಕದಿನ ಸರಣಿಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟ
ಭಾರತ ಪ್ರವಾಸಕ್ಕೆ 15 ಆಟಗಾರರನ್ನೊಳಗೊಂಡ ದಕ್ಷಿಣ ಆಫ್ರಿಕಾ ತಂಡ ಪ್ರಕಟವಾಗಿದೆ. ತಂಡದಲ್ಲಿ ಯಾರೆಲ್ಲಾ ಸ್ಥಾನ ಪಡೆದಿದ್ದಾರೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.
ಜೊಹಾನ್ಸ್‌ಬರ್ಗ್(ಮಾ.02): ಭಾರತ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ 15 ಆಟಗಾರರನ್ನೊಳಗೊಂಡ ದಕ್ಷಿಣ ಆಫ್ರಿಕಾ ತಂಡ ಪ್ರಕಟಗೊಂಡಿದ್ದು, ಫಾಫ್ ಡುಪ್ಲೆಸಿಸ್ ಹಾಗೂ ರಾಸ್ಸಿ ವ್ಯಾನ್ ಡರ್ ಡ್ಯುಸೇನ್ ತಂಡ ಕೂಡಿಕೊಂಡಿದ್ದಾರೆ.
ಟೀಂ ಇಂಡಿಯಾದ ತ್ರಿಮೂರ್ತಿಗಳು ಕಮ್‌ಬ್ಯಾಕ್ ಮಾಡೋದು ಯಾವಾಗ..?
ಮಾರ್ಚ್ 12ರಿಂದ ಆರಂಭವಾಗಲಿರುವ ಏಕದಿನ ಸರಣಿಯಲ್ಲಿ ಕ್ವಿಂಟನ್ ಡಿಕಾಕ್ ದಕ್ಷಿಣ ಆಫ್ರಿಕಾ ತಂಡವನ್ನು ಮುನ್ನಡೆಸಲಿದ್ದಾರೆ. ಇನ್ನು ಎಡಗೈ ಸ್ಪಿನ್ನರ್ ಜಾರ್ಜ್ ಲಿಂಡೆ ಇದೇ ಮೊದಲ ಬಾರಿಗೆ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನು 2019ರ ಏಕದಿನ ವಿಶ್ವಕಪ್ ಬಳಿಕ ಫಾಫ್ ಡು ಪ್ಲೆಸಿಸ್ ಒನ್ ಡೇ ತಂಡದಿಂದ ವಿಶ್ರಾಂತಿ ನೀಡಲಾಗಿತ್ತು. ಹೀಗಾಗಿ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಸರಣಿಯಿಂದ ಪ್ಲೆಸಿಸ್ ತಂಡದಿಂದ ಹೊರಗುಳಿದಿದ್ದರು. ಇನ್ನುಳಿದಂತೆ ತೆಂಬಾ ಬವುಮಾ, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಲುಂಗಿ ಎಂಗಿಡಿ ತಂಡದಲ್ಲಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಕೈಲ್ ವೆರ್ರಿಯಿನ್ನೆ ಭಾರತ ಪ್ರವಾಸಕ್ಕೆ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ.
ಭಾರತ ಪ್ರವಾಸದಿಂದ ಹೊರಬಿದ್ದ ದಕ್ಷಿಣ ಆಫ್ರಿಕಾದ ಮಾರಕ ವೇಗಿ..!
ಮಾರ್ಚ್ 12ರಂದು ನಡೆಯಲಿರುವ ಪಂದ್ಯಕ್ಕೆ ಧರ್ಮಶಾಲಾ ಆತಿಥ್ಯ ವಹಿಸಿದರೆ, ಮಾರ್ಚ್ 15ರಂದು ಲಖನೌದ ಭಾರತ್ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನ ಮೈದಾನದಲ್ಲಿ ಎರಡನೇ ಪಂದ್ಯ ನಡೆಯಲಿದೆ. ಇನ್ನು ಸರಣಿಯ ಮೂರನೇ ಹಾಗೂ ಕೊನೆಯ ಪಂದ್ಯ ಮಾರ್ಚ್ 18ರಂದು ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯಲಿದೆ.
ದಕ್ಷಿಣ ಆಫ್ರಿಕಾ ತಂಡ ಹೀಗಿದೆ:
ಕ್ವಿಂಟನ್ ಡಿಕಾಕ್(ನಾಯಕ), ತೆಂಬಾ ಬವುಮಾ, ರಾಸ್ಸಿ ವ್ಯಾನ್ ಡರ್ ಡ್ಯುಸೇನ್, ಫಾಫ್ ಡುಪ್ಲೆಸಿಸ್, ಕೈಲ್ ವೆರ್ರಿಯಿನ್ನೆ, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಜಾನ್-ಜಾನ್ ಸ್ಮುಟ್ಸ್, ಆಂಡಿಲೆ ಫೆಲುಕ್ವಾಯೊ, ಲುಂಗಿ ಎಂಗಿಡಿ. ಲೋಥೊ ಸಿಪಾಮ್ಲಾ, ಬ್ಯುರನ್ ಹೆಂಡ್ರಿಕ್ಸ್, ಆನ್ರಿಚ್ ನೊರ್ಜೆ, ಜಾರ್ಜ್ ಲಿಂಡೆ, ಕೇಶವ್ ಮಹರಾಜ್
#NewsIn100Seconds: ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್
"
ಮಾರ್ಚ್ 02ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ