Asianet Suvarna News Asianet Suvarna News

India Tour Of South Africa: ವೇಗಿ ಇಶಾಂತ್ ಶರ್ಮಾ ಪಾಲಿಗೆ ಕೊನೆಯ ಸರಣಿ..?

* ಬೌಲಿಂಗ್‌ನಲ್ಲಿ ಮೊನಚು ಕಳೆದುಕೊಂಡಿದ್ದಾರೆ ವೇಗಿ ಇಶಾಂತ್ ಶರ್ಮಾ

* ದಕ್ಷಿಣ ಆಫ್ರಿಕಾ ಪ್ರವಾಸ ಇಶಾಂತ್ ಪಾಲಿಗೆ ಕಡೆಯ ಸರಣಿಯಾಗುವ ಸಾಧ್ಯತೆ

* ಅಜಿಂಕ್ಯ ರಹಾನೆ, ಪೂಜಾರ ಮೇಲೂ ಅಭದ್ರತೆಯ ತೂಗುಗತ್ತಿ

South Africa tour likely to be Ishant Sharma last assignment in Team India Says Report kvn
Author
Bengaluru, First Published Dec 11, 2021, 4:14 PM IST

ಬೆಂಗಳೂರು(ಡಿ.11): ಟೀಂ ಇಂಡಿಯಾ (Team India) ಅನುಭವಿ ವೇಗಿ ಇಶಾಂತ್ ಶರ್ಮಾ (Ishant Sharma) ಭಾರತ ಪರ ನೂರಕ್ಕೂ ಹೆಚ್ಚು ಟೆಸ್ಟ್ ಪಂದ್ಯವನ್ನಾಡಿದ ಕೆಲವೇ ಕೆಲವು ಕ್ರಿಕೆಟಿಗರಲ್ಲಿ ಒಬ್ಬರೆನಿಸಿದ್ದಾರೆ. ಕೆಲವು ವರದಿಗಳ ಪ್ರಕಾರ ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ದದ ಟೆಸ್ಟ್‌ ಸರಣಿಯೇ ಇಶಾಂತ್ ಶರ್ಮಾ ಟೀಂ ಇಂಡಿಯಾ ಪರ ಆಡಲಿರುವ ಕಟ್ಟ  ಕಡೆಯ ಸರಣಿಯಾಗಲಿದೆ ಎಂದು ವರದಿಯಾಗಿದೆ. ವಿರಾಟ್ ಕೊಹ್ಲಿ (Virat Kohli) ನೇತೃತ್ವದ ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ (India Tour of South Africa) ಮೂರು ಪಂದ್ಯಗಳ ಟೆಸ್ಟ್‌ ಸರಣಿಯನ್ನು ಆಡಲಿದೆ. ಇದಾದ ಬಳಿಕ ರೋಹಿತ್ ಶರ್ಮಾ(Rohit Sharma) ನೇತೃತ್ವದ ಟೀಂ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ

ಇತ್ತೀಚೆಗಿನ ಕೆಲವು ದಿನಗಳಲ್ಲಿ ಬೌಲಿಂಗ್‌ ಮೊನಚು ಕಳೆದುಕೊಂಡಿರುವ ಇಶಾಂತ್ ಶರ್ಮಾ, ಸದ್ಯ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಆಯ್ಕೆಯಾಗಿದ್ದಾರೆ. ಆದರೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುತ್ತಾರಾ ಎನ್ನುವ ಪ್ರಶ್ನೆಗೆ ಸದ್ಯ ಉತ್ತರ ಸಿಕ್ಕಿಲ್ಲ. ಡೆಲ್ಲಿ ಮೂಲದ ಬಲಗೈ ವೇಗಿ ಇಶಾಂತ್ ಶರ್ಮಾ ಭಾರತ ಪರ 105 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈಗಾಗಲೇ ಯುವ ವೇಗಿಗಳಾದ ಮೊಹಮ್ಮದ್ ಸಿರಾಜ್(Mohammed Siraj) ಹಾಗೂ ಶಾರ್ದೂಲ್ ಠಾಕೂರ್ ಟೆಸ್ಟ್‌ ಕ್ರಿಕೆಟ್‌ನಲ್ಲಿ ಸಿಕ್ಕ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳುವ ಮೂಲಕ ಆಯ್ಕೆಗಾರರ ಮನ ಗೆದ್ದಿದ್ದಾರೆ. ಇದಾದ ಜತೆಗೆ ಮೊಹಮ್ಮದ್ ಶಮಿ ಹಾಗೂ ಜಸ್ಪ್ರೀತ್ ಬುಮ್ರಾ (Jasprit Bumrah) ಕೂಡಾ ಹರಿಣಗಳ ನಾಡಿನ ಪ್ರವಾಸಕ್ಕೆ ತಂಡ ಕೂಡಿಕೊಂಡಿದ್ದಾರೆ. ಹೀಗಾಗಿ ದೇಶದ ಪರ ನೂರಕ್ಕೂ ಅಧಿಕ ಟೆಸ್ಟ್ ಪಂದ್ಯವನ್ನಾಡಿರುವ ಇಶಾಂತ್ ಶರ್ಮಾ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಲು ಸಾಕಷ್ಟು ಪೈಪೋಟಿ ನಡೆಸಬೇಕಿದೆ. 

ಡಿಸೆಂಬರ್ 26ರಿಂದ ಸೆಂಚುರಿಯನ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ಮೊದಲ ಟೆಸ್ಟ್‌ ಪಂದ್ಯ ಆರಂಭವಾಗಲಿದ್ದು, ಟೆಸ್ಟ್‌ ಸ್ಪೆಷಲಿಸ್ಟ್‌ಗಳಾಗಿರುವ ಚೇತೇಶ್ವರ್ ಪೂಜಾರ (Cheteshwar Pujara) ಹಾಗೂ ಅಜಿಂಕ್ಯ ರಹಾನೆ ಅವರ ಬ್ಯಾಟಿಂಗ್‌ ಪ್ರದರ್ಶನದ ಮೇಲೂ ಸಾಕಷ್ಟು ಒತ್ತಡವಿದೆ. ಈಗಾಗಲೇ ಅಜಿಂಕ್ಯ ರಹಾನೆ (Ajinkya Rahane) ಅವರನ್ನು ಉಪನಾಯಕತ್ವದಿಂದ ಕೆಳಗಿಳಿಸಿರುವುದು ಮುಂಬೈ ಮೂಲದ ಆಟಗಾರನಿಗೆ ಆಯ್ಕೆ ಸಮಿತಿ ಸ್ಪಷ್ಟ ಎಚ್ಚರಿಕೆ ನೀಡಿದೆ. ಹಿರಿಯ ಅನುಭವಿ ಆಟಗಾರರು ಉತ್ತಮ ಪ್ರದರ್ಶನ ತೋರುವ ಮೂಲಕ ತಂಡಕ್ಕೆ ಉತ್ತಮ ಕೊಡುಗೆ ನೀಡಬೇಕು. ಪೂಜಾರ ಅವರಿಂದ ಕೂಡಾ ತಂಡ ದೊಡ್ಡ ಮೊತ್ತವನ್ನು ನಿರೀಕ್ಷಿಸುತ್ತಿದೆ ಎಂದು ಬಿಸಿಸಿಐ ಉನ್ನತಾಧಿಕಾರಿಗಳು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆಂದು ವರದಿಯಾಗಿದೆ. 

India Tour of South Africa: 44 ದಿನಗಳ ಬಯೋ ಬಬಲ್‌ಗೆ ಸಜ್ಜಾದ ಟೀಂ ಇಂಡಿಯಾ..!

ಒಂದು ವೇಳೆ ಅಜಿಂಕ್ಯ ರಹಾನೆ ಹಾಗೂ ಚೇತೇಶ್ವರ್ ಪೂಜಾರ, ಮುಂಬರುವ ಟೆಸ್ಟ್‌ ಪಂದ್ಯಗಳಲ್ಲಿ ಉತ್ತಮವಾಗಿ ರನ್ ಗಳಿಸಿದರೆ, ಅವರ ಟೆಸ್ಟ್‌ ವೃತ್ತಿಜೀವನ ಇನ್ನಷ್ಟು ದಿನಗಳ ಕಾಲ ಮುಂದುವರೆಯಲಿದೆ. ಆದರೆ ಡೆಲ್ಲಿ ಮೂಲದ ವೇಗಿ ಇಶಾಂತ್ ಶರ್ಮಾ ಪಾಲಿಗೆ ಇದು ಕೊನೆಯ ಸರಣಿಯಾದರೂ ಅಚ್ಚರಿಯಿಲ್ಲ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ.

ಕಳೆದ 12 ತಿಂಗಳಿನಲ್ಲಿ ಇಶಾಂತ್ ಶರ್ಮಾ ಭಾರತ ಪರ ಕೇವಲ 8 ಪಂದ್ಯಗಳನ್ನಾಡಿ 14 ವಿಕೆಟ್‌ ಗಳನ್ನಷ್ಟೇ ಪಡೆದಿದ್ದಾರೆ. ಇತ್ತೀಚೆಗಷ್ಟೇ ಮುಕ್ತಾಯವಾದ ನ್ಯೂಜಿಲೆಂಡ್ ವಿರುದ್ದದ ಮೊದಲ ಟೆಸ್ಟ್‌ನಲ್ಲಿ ಇಶಾಂತ್ ಶರ್ಮಾ ನಿರಾಸೆ ಮೂಡಿಸಿದ್ದರು. ಈಗಾಗಲೇ ಟೀಂ ಇಂಡಿಯಾ ತಜ್ಞ ವೇಗಿಗಳಾದ ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಉಮೇಶ್ ಯಾದವ್ ಮಾತ್ರವಲ್ಲದೇ ಯುವ ವೇಗಿಗಳಾದ ಪ್ರಸಿದ್ಧ್ ಕೃಷ್ಣ, ಆವೇಶ್ ಖಾನ್, ಉಮ್ರಾನ್ ಮಲಿಕ್, ನವದೀಪ್ ಸೈನಿ ಅವರಂತಹ ವೇಗಿಗಳು ಅವಕಾಶಕ್ಕಾಗಿ ಚಾತಕ ಪಕ್ಷಿಗಳಂತೆ ಕಾದು ಕುಳಿತಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ಇಶಾಂತ್ ಶರ್ಮಾ ಅವರ ಕುರಿತಂತೆ ಬಿಸಿಸಿಐ ದಿಟ್ಟ ನಿಲುವು ತೆಗೆದುಕೊಂಡರೂ ಅಚ್ಚರಿಪಡುವಂತಿಲ್ಲ.

Follow Us:
Download App:
  • android
  • ios