ನವದೆಹಲಿ(ಜ.25): ಭಾರತ-ಇಂಗ್ಲೆಂಡ್‌ ಟಿ20 ಸರಣಿಗೆ ಕ್ರೀಡಾಂಗಣಕ್ಕೆ ಪ್ರೇಕ್ಷಕರಿಗೆ ಪ್ರವೇಶ ಕಲ್ಪಿಸಲು ಬಿಸಿಸಿಐ ಚಿಂತನೆ ನಡೆಸಿದೆ. 

4 ಪಂದ್ಯಗಳ ಟೆಸ್ಟ್‌ ಸರಣಿ ಬಳಿಕ 5 ಪಂದ್ಯಗಳ ಟಿ20 ಸರಣಿ ಅಹಮದಾಬಾದ್‌ನ ಮೊಟೇರಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಶೇ.50ರಷ್ಟು ಪ್ರೇಕ್ಷಕರ ಪ್ರವೇಶಕ್ಕೆ ಅನುಮತಿ ನೀಡುವಂತೆ ಬಿಸಿಸಿಐ ಸದ್ಯದಲ್ಲೇ ಗುಜರಾತ್‌ ಸರ್ಕಾರಕ್ಕೆ ಮನವಿ ಮಾಡಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿದೆ. 

ಫೆ.5 ರಿಂದ ಭಾರತ-ಇಂಗ್ಲೆಂಡ್ ತವರಿನ ಸರಣಿ; ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ!

ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ಕ್ರೀಡಾಂಗಣಗಳಿಗೆ ಶೇ.50ರಷ್ಟು ಪ್ರೇಕ್ಷಕರನ್ನು ಬಿಡಬಹದಾಗಿದೆ. ವಿಶ್ವದ ಅತಿದೊಡ್ಡ ಕ್ರಿಕೆಟ್‌ ಕ್ರೀಡಾಂಗಣ ಎನಿಸಿಕೊಂಡಿರುವ ಮೊಟೇರಾದಲ್ಲಿ 1.1 ಲಕ್ಷ ಆಸನಗಳಿವೆ. ಮಾ.12ರಿಂದ ಟಿ20 ಸರಣಿ ಆರಂಭಗೊಳ್ಳಲಿದೆ.

ಇಂಡೋ-ಇಂಗ್ಲೆಂಡ್‌ ಟೆಸ್ಟ್ ಸರಣಿ: ಪ್ರೇಕ್ಷಕರಿಗಿಲ್ಲ ಪ್ರವೇಶ..!

ಈಗಾಗಲೇ ಭಾರತ-ಇಂಗ್ಲೆಂಡ್‌ ನಡುವಿನ ಮೊದಲೆರಡು ಟೆಸ್ಟ್ ಪಂದ್ಯಗಳು ಖಾಲಿ ಮೈದಾನದಲ್ಲಿ ನಡೆಯಲಿದೆ ಎಂದು ಬಿಸಿಸಿಐ ಖಚಿತಪಡಿಸಿದೆ. ಫೆಬ್ರವರಿ 05ರಿಂದ ಚೆನ್ನೈನಲ್ಲಿ ಮೊದಲ ಟೆಸ್ಟ್‌ ಪಂದ್ಯ ಆರಂಭವಾಗಲಿದೆ. ಮೇಲ್ನೋಟಕ್ಕೆ ಎರಡು ತಂಡಗಳು ಸಾಕಷ್ಟು ಬಲಿಷ್ಠವಾಗಿದ್ದು, ಜಿದ್ದಾಜಿದ್ದಿನ ಪೈಪೋಟಿ ನಿರೀಕ್ಷಿಸಲಾಗಿದೆ.