72ನೇ ಗಣರಾಜ್ಯೋತ್ಸವಕ್ಕೆ ದೇಶದ ಕ್ರೀಡಾತಾರೆಯರು ಸಾಮಾಜಿಕ ಜಾಲತಾಣಗಳ ಮೂಲಕ ಶುಭಕೋರಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ನವದೆಹಲಿ(ಜ.26): ದೇಶಾದ್ಯಂತ 72ನೇ ಗಣರಾಜ್ಯೋತ್ಸವ ಆಚರಿಸಲಾಗುತ್ತಿದ್ದು, ಈ ಶುಭಸಂದರ್ಭದಲ್ಲಿ ದೇಶದ ಜನತೆಗೆ ಹಾಗೂ ಅಭಿಮಾನಿಗಳಿಗೆ ಕ್ರೀಡಾತಾರೆಯರು ಗಣರಾಜ್ಯೋತ್ಸವಕ್ಕೆ ಶುಭಕೋರಿದ್ದಾರೆ.

ದೇಶದ ಮಾಜಿ, ಹಾಲಿ ಹಾಗೂ ಹಿರಿ-ಕಿರಿಯ ಕ್ರೀಡಾತಾರೆಯರು ಸಾಮಾಜಿಕ ಜಾಲತಾಣದ ಮೂಲಕ ಗಣರಾಜ್ಯೋತ್ಸವದ ಶುಭ ಕೋರಿದ್ದಾರೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಈಗ ನಾವೇನು ಮಾಡುತ್ತೇವೆ ಎನ್ನುವುದರ ಮೇಲೆ ನಮ್ಮ ದೇಶದ ಭವಿಷ್ಯ ನಿರ್ಧಾರವಾಗುತ್ತದೆ. ನಾವೆಲ್ಲ ಸೇರಿ ದೇಶವನ್ನು ಬಲಿಷ್ಠವಾಗಿ ಕಟ್ಟುವುದರ ಮೂಲಕ ಇನ್ನಷ್ಟು ಎತ್ತರಕ್ಕೇರುವಂತೆ ಮಾಡೋಣ. ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.

Scroll to load tweet…

72ನೇ ಗಣರಾಜ್ಯೋತ್ಸವ, ರಾಜಪಥದಲ್ಲಿ ಸರಳ ಆಚರಣೆ!

ವಿರಾಟ್ ಕೊಹ್ಲಿ ಮಾತ್ರವಲ್ಲದೇ ಕ್ರಿಕೆಟ್‌ ದಿಗ್ಗಜ ಸಚಿನ್ ತೆಂಡುಲ್ಕರ್, ವಿರೇಂದ್ರ ಸೆಹ್ವಾಗ್, ಸುರೇಶ್‌ ರೈನಾ, ಕ್ರೀಡಾ ಸಚಿವ ಕಿರಣ್‌ ರಿಜಿಜು, ಖ್ಯಾತ ಕುಸ್ತಿಪಟು ಭಜರಂಗ್ ಫೂನಿಯಾ, ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್‌ ಮುಂತಾದವರು ಶುಭ ಕೋರಿದ್ದಾರೆ.

Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…