ಪಾಕ್ ನೆಲದಲ್ಲಿ ಲಂಕಾ ಕ್ರಿಕೆಟಿಗರ ಮೇಲೆ ಉಗ್ರರ ದಾಳಿ ನಡೆದ 10 ವರ್ಷಗಳ ಬಳಿಕ ಟೆಸ್ಟ್ ಪಂದ್ಯವನ್ನಾಡಲು ಶ್ರೀಲಂಕಾ ತಂಡವು ಪಾಕಿಸ್ತಾನಕ್ಕೆ ಬಂದಿಳಿದಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...

ಇಸ್ಲಾಮಾಬಾದ್: 2009ರ ಉಗ್ರರ ದಾಳಿ ಬಳಿಕ ಇದೇ ಮೊದಲ ಬಾರಿಗೆ ಶ್ರೀಲಂಕಾ ಕ್ರಿಕೆಟ್ ತಂಡ ಪಾಕಿಸ್ತಾನ ಪ್ರವಾಸದಲ್ಲಿ ಟೆಸ್ಟ್ ಸರಣಿಯನ್ನಾಡಲು ಸೋಮವಾರ ಇಲ್ಲಿನ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಈ ಮೂಲಕ ದಶಕಕ್ಕೂ ಹೆಚ್ಚು ಸಮಯದ ಬಳಿಕ ಪಾಕಿಸ್ತಾನಕ್ಕೆ ಟೆಸ್ಟ್ ಕ್ರಿಕೆಟ್ ಮರಳಿದಂತಾಗಿದೆ.

ಪಾಕ್‌ಗೆ ಮುಖಭಂಗ; ಟಿ20 ಸರಣಿ ಲಂಕಾ ಕೈವಶ

2 ಪಂದ್ಯಗಳ ಟೆಸ್ಟ್ ಸರಣಿ ಬುಧವಾರದಿಂದ ಆರಂಭವಾಗಲಿದೆ. ಮೊದಲ ಟೆಸ್ಟ್ ರಾವಲ್ಪಿಂಡಿಯಲ್ಲಿ ಹಾಗೂ 2ನೇ ಟೆಸ್ಟ್ ಪಂದ್ಯ ಕರಾಚಿಯಲ್ಲಿ ನಡೆಯಲಿದೆ. ಸದ್ಯ ಚಾಲ್ತಿಯಲ್ಲಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ವ್ಯಾಪ್ತಿಗೆ ಸರಣಿ ಸೇರ್ಪಡೆಯಾಗಿದೆ. ಎರಡು ಟೆಸ್ಟ್ ಪಂದ್ಯಗಳಿಗೆ ಬಿಗಿ ಭದ್ರತೆ ಒದಗಿಸಲಾಗಿದೆ.

Scroll to load tweet…

ಲಂಕಾ ವಿರುದ್ಧ ಪಾಕ್ ಸರಣಿ ಜಯ

ಇದಕ್ಕೂ ಮೊದಲು ಶ್ರೀಲಂಕಾ ತಂಡವು ಸೀಮಿತ ಓವರ್’ಗಳ ಸರಣಿಯಾಡಲು ಅಕ್ಟೋಬರ್’ನಲ್ಲಿ ಪಾಕಿಸ್ತಾನ ಪ್ರವಾಸ ಕೈಗೊಂಡಿತ್ತು. ಏಕದಿನ ಸರಣಿಯನ್ನು ಪಾಕ್ ಜಯಿಸಿದರೆ, ಟಿ20 ಸರಣಿಯನ್ನು ಶ್ರೀಲಂಕಾ ತಂಡವು ಕ್ಲೀನ್ ಸ್ವೀಪ್ ಮಾಡಿತ್ತು.