ಎರಡನೇ ಟೆಸ್ಟ್‌ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ದ ಭರ್ಜರಿ ಗೆಲುವು ಸಾಧಿಸಿದ ಶ್ರೀಲಂಕಾ 2 ಪಂದ್ಯಗಳ ಟೆಸ್ಟ್ ಸರಣಿಯನ್ನು 1-0 ಅಂತರದಲ್ಲಿ ಕೈವಶ ಮಾಡಿಕೊಂಡಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

ಕ್ಯಾಂಡಿ(ಮೇ.03): ಯುವ ಎಡಗೈ ಲೆಗ್‌ ಸ್ಪಿನ್ನರ್ ಪ್ರವೀಣ್‌ ಜಯವಿಕ್ರಮ ಮಾರಕ ದಾಳಿಗೆ ತತ್ತರಿಸಿದ ಬಾಂಗ್ಲಾದೇಶ ಎರಡನೇ ಟೆಸ್ಟ್‌ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ 227 ರನ್‌ಗಳಿಗೆ ಸರ್ವಪತನ ಕಂಡಿದೆ. ಇದರೊಂದಿಗೆ ಶ್ರೀಲಂಕಾ 209 ರನ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ 2 ಪಂದ್ಯಗಳ ಟೆಸ್ಟ್‌ ಸರಣಿಯನ್ನು 1-0 ಅಂತರದಲ್ಲಿ ಕೈವಶ ಮಾಡಿಕೊಂಡಿದೆ. ಮೊದಲ ಟೆಸ್ಟ್‌ ಪಂದ್ಯ ಡ್ರಾನಲ್ಲಿ ಅಂತ್ಯವಾಗಿತ್ತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತಮ್ಮ ಚೊಚ್ಚಲ ಪಂದ್ಯದಲ್ಲೇ ಅಮೋಘ ಪ್ರದರ್ಶನ ತೋರಿದ ಪ್ರವೀಣ್ ಜಯವಿಕ್ರಮ 178 ರನ್ ನೀಡಿ 11 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಾಂಗ್ಲಾದೇಶ ಗೆಲ್ಲಲು ಸರಿಸುಮಾರು 150 ಓವರ್‌ಗಳಲ್ಲಿ 437 ರನ್‌ಗಳ ಗುರಿ ನೀಡಲಾಗಿತ್ತು. ಈ ಕಠಿಣ ಗುರಿ ಬೆನ್ನತ್ತಿದ ಬಾಂಗ್ಲಾದೇಶ ಸಂಘಟಿತ ಪ್ರದರ್ಶನ ತೋರಲು ಪ್ರಯತ್ನಿಸಿತಾದರೂ, ಯಾವೊಬ್ಬ ಬ್ಯಾಟ್ಸ್‌ಮನ್ ನೆಲಕಚ್ಚಿ ಆಡುವ ಪ್ರಯತ್ನ ಮಾಡಲಿಲ್ಲ.

2ನೇ ಟೆಸ್ಟ್‌: ಬಾಂಗ್ಲಾದೇಶ ವಿರುದ್ಧ ಶ್ರೀಲಂಕಾ ಮೇಲುಗೈ

ಬಾಂಗ್ಲಾಪರ ಮುಷ್ಫಿಕುರ್ ರಹೀಮ್‌ 40 ರನ್‌ ಬಾರಿಸಿದ್ದೇ ಎರಡನೇ ಇನಿಂಗ್ಸ್‌ನಲ್ಲಿ ಬಾಂಗ್ಲಾ ಪರ ದಾಖಲಾದ ವೈಯಕ್ತಿಕ ಗರಿಷ್ಠ ಸ್ಕೋರ್ ಎನಿಸಿತು. 

Scroll to load tweet…