ವಿಶ್ವಕಪ್ನಲ್ಲಿ ಫಿಕ್ಸಿಂಗ್: 6 ಗಂಟೆಗಳ ಕಾಲ ಡಿ ಸಿಲ್ವಾ, ತರಂಗಾ ವಿಚಾರಣೆ
ವಿಶ್ವಕಪ್ ತಂಡವನ್ನು ಆಯ್ಕೆ ಮಾಡಿದ್ದ ಪ್ರಧಾನ ಆಯ್ಕೆಗಾರ ಅರವಿಂದ ಡಿ ಸಿಲ್ವಾ ಅವರನ್ನು ಸುದೀರ್ಘ 6 ಗಂಟೆಗಳ ಕಾಲ ವಿಚಾರಣೆ ನಡೆಸಿದೆ. ಇದರ ಬೆನ್ನಲ್ಲೇ ಲಂಕಾ ಆರಂಭಿಕ ಬ್ಯಾಟ್ಸ್‌ಮನ್ ಉಪುಲ್ ತರಂಗಾ ಅವರನ್ನು ವಿಚಾರಣೆ ನಡೆಸಲಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
ಕೊಲಂಬೊ(ಜು.02): ಶ್ರೀಲಂಕಾದ ಮಾಜಿ ಕ್ರೀಡಾ ಸಚಿವ ಮಹಿಂದಾನಂದ ಅಲುತ್ಗಾಮಗೆ, 2011ರ ಐಸಿಸಿ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಫಿಕ್ಸಿಂಗ್ ನಡೆದಿದೆ ಎಂದು ಆರೋಪಿಸಿರುವ ಹಿನ್ನೆಲೆಯಲ್ಲಿ ಲಂಕಾ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಮಂಗಳವಾರ ಮಾಜಿ ನಾಯಕ, ವಿಶ್ವಕಪ್ ತಂಡವನ್ನು ಆಯ್ಕೆ ಮಾಡಿದ್ದ ಪ್ರಧಾನ ಆಯ್ಕೆಗಾರ ಅರವಿಂದ ಡಿ ಸಿಲ್ವಾ ಅವರನ್ನು ಸುದೀರ್ಘ 6 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದ ಪೊಲೀಸರು, ಅವರು ನೀಡಿದ ಮಾಹಿತಿಯ ಆಧಾರದ ಮೇಲೆ ಬುಧವಾರ, ವಿಶ್ವಕಪ್ ತಂಡದಲ್ಲಿದ್ದ ಆರಂಭಿಕ ಬ್ಯಾಟ್ಸ್‌ಮನ್ ಉಪುಲ್ ತರಂಗ ಅವರನ್ನು ವಿವಾರಣೆಗೆ ಕರೆದಿದ್ದರು.
ವಿಶ್ವಕಪ್ ಫೈನಲ್‌ನಲ್ಲಿ 20 ಎಸೆತಗಳಲ್ಲಿ 2 ರನ್ ಗಳಿಸಿದ್ದ ತರಂಗರನ್ನು 2 ಗಂಟೆಗೂ ಹೆಚ್ಚು ಕಾಲ ಪೊಲೀಸರು ವಿಚಾರಣೆ ಮಾಡಿದರು. ಇದೇ ವೇಳೆ ವಿಶ್ವಕಪ್ ತಂಡದ ನಾಯಕರಾಗಿದ್ದ ಕುಮಾರ ಸಂಗಕ್ಕಾರ ಅವರನ್ನು ಹೇಳಿಕೆ ನೀಡಲು ಬರುವಂತೆ ಪೊಲೀಸರು ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
2011ರ ವಿಶ್ವಕಪ್ ಫೈನಲ್‌ನಲ್ಲಿ ಫಿಕ್ಸಿಂಗ್; ತನಿಖೆ ಆರಂಭ
2011ರ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವು ಭಾರತ ವಿರುದ್ಧ 6 ವಿಕೆಟ್‌ಗಳಿಂದ ಶರಣಾಗಿತ್ತು. ಇದರೊಂದಿಗೆ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಟೀಂ ಇಂಡಿಯಾ 28 ವರ್ಷಗಳ ಬಳಿಕ ವಿಶ್ವಕಪ್ ಎತ್ತಿಹಿಡಿದು ಸಂಭ್ರಮಿಸಿತ್ತು.
#NewsIn100Seconds | ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್
"