Asianet Suvarna News Asianet Suvarna News

ICC ಟೆಸ್ಟ್ ರ‍್ಯಾಂಕಿಂಗ್ ಪ್ರಕಟ: ನಂ.1 ಸ್ಥಾನ ಕಳೆದುಕೊಂಡ ವಿರಾಟ್ ಕೊಹ್ಲಿ..!

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬ್ಯಾಟ್ಸ್‌ಮನ್‌ಗಳ ಟೆಸ್ಟ್ ಶ್ರೇಯಾಂಕದಲ್ಲಿ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ. ಇನ್ನು ಬೌಲಿಂಗ್ ವಿಭಾಗದಲ್ಲಿ ಬುಮ್ರಾ ಟಾಪ್ 10 ಪಟ್ಟಿಯಿಂದಲೇ ಹೊರಬಿದ್ದಿದ್ದಾರೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ.

Steve Smith regain top spot in ICC Test rankings Kohli drops second
Author
Dubai - United Arab Emirates, First Published Feb 26, 2020, 5:55 PM IST

ದುಬೈ(ಫೆ.26): ಭಾರತ-ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಮುಕ್ತಾಯವಾದ ಬೆನ್ನಲ್ಲೇ ICC ಟೆಸ್ಟ್ ರ‍್ಯಾಂಕಿಂಗ್ ಪ್ರಕಟಗೊಂಡಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ. ಇನ್ನು ಬೌಲಿಂಗ್ ವಿಭಾಗದಲ್ಲಿ ಜಸ್ಪ್ರೀತ್ ಬುಮ್ರಾ ಟಾಪ್ 10 ಪಟ್ಟಿಯಿಂದ ಹೊರಬಿದ್ದಿದ್ದಾರೆ.

ICC ಟೆಸ್ಟ್‌ ರ‍್ಯಾಂಕಿಂಗ್: ನಂ.1 ಸ್ಥಾನ ಉಳಿಸಿಕೊಂಡ ಕೊಹ್ಲಿ

ನ್ಯೂಜಿಲೆಂಡ ವಿರುದ್ಧ ವಿರಾಟ್ ಕೊಹ್ಲಿ ಕೇವಲ(2&19) 21 ರನ್‌ಗಳನ್ನು ಬಾರಿಸಲಷ್ಟೇ ಶಕ್ತರಾಗಿದ್ದರು. ಹೀಗಾಗಿ 5 ರೇಟಿಂಗ್ ಅಂಕ ಕುಸಿದಿದ್ದಾರೆ. ಇದೀಗ ಕೊಹ್ಲಿ 906 ಅಂಕಗಳೊಂದಿಗೆ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಇನ್ನು ಸ್ಟೀವ್ ಸ್ಮಿತ್ 5 ಅಂಕ ಮೇಲೇರಿ ನಂ.1 ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಇನ್ನು ಅಜಿಂಕ್ಯ ರಹಾನೆ(760), ಚೇತೇಶ್ವರ್ ಪೂಜಾರ(757) ಹಾಗೂ ಮಯಾಂಕ್ ಅಗರ್‌ವಾಲ್(727) ಕ್ರಮವಾಗಿ 8,9 ಹಾಗೂ 10ನೇ ಸ್ಥಾನದಲ್ಲಿದ್ದಾರೆ. 

ICC ಟಿ20 ರ‍್ಯಾಂಕಿಂಗ್ ಪ್ರಕಟ: 2ನೇ ಸ್ಥಾನ ಕಾಯ್ದುಕೊಂಡ ರಾಹುಲ್

ಇನ್ನುಳಿದಂತೆ ಬ್ಯಾಟಿಂಗ್ ವಿಭಾಗದಲ್ಲಿ ಕೇನ್ ವಿಲಿಯಮ್ಸನ್ ಒಂದು ಸ್ಥಾನ ಮೇಲೇರಿ ಮೂರನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಬೌಲರ್‌ಗಳ ವಿಭಾಗದಲ್ಲಿ ಪ್ಯಾಟ್ ಕಮಿನ್ಸ್ ಅಗ್ರ ಸ್ಥಾನದಲ್ಲೇ ಮುಂದುವರೆದಿದ್ದಾರೆ. ಇನ್ನು ಟಾಪ್ 5 ಪಟ್ಟಿಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇನ್ನು ಭಾರತ ವಿರುದ್ದ ಮೊದಲ ಟೆಸ್ಟ್ ಪಂದ್ಯದಲ್ಲಿ 9 ವಿಕೆಟ್ ಕಬಳಿಸಿ ಮಿಂಚಿದ್ದ  ಟಿಮ್ ಸೌಥಿ 8 ಸ್ಥಾನ ಮೇಲೇರಿ 6ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಅಶ್ವಿನ್ ಒಂದು ಸ್ಥಾನ ಕುಸಿದು 9ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಅಶ್ವಿನ್ ಬೌಲಿಂಗ್ ವಿಭಾಗದಲ್ಲಿ ಟಾಪ್ 10 ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯ ಬೌಲರ್ ಎನಿಸಿದ್ದಾರೆ.

ಟಾಪ್ 10 ಬ್ಯಾಟ್ಸ್‌ಮನ್‌ಗಳ ಪಟ್ಟಿ ಹೀಗಿದೆ:

ಟಾಪ್ 10 ಬೌಲರ್‌ಗಳ ಪಟ್ಟಿ ಹೀಗಿದೆ: 

#NewsIn100Seconds ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್

Follow Us:
Download App:
  • android
  • ios