ರಾಹುಲ್-ಯಶಸ್ವಿ ಫೇಲ್; ಸಿಡ್ನಿ ಟೆಸ್ಟ್‌ನಲ್ಲೂ ಭಾರತಕ್ಕೆ ಆರಂಭಿಕ ಆಘಾತ!
ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ದುಕೊಂಡು ಆರಂಭಿಕ ಆಘಾತ ಅನುಭವಿಸಿದೆ. ಮೊದಲ ದಿನದ ಚಹಾ ವಿರಾಮದ ವೇಳೆಗೆ 3 ವಿಕೆಟ್ ಕಳೆದುಕೊಂಡು ಕೇವಲ 57 ರನ್ ಗಳಿಸಿದೆ. ರಾಹುಲ್, ಜೈಸ್ವಾಲ್ ಮತ್ತು ಗಿಲ್ ವಿಕೆಟ್ ಕಳೆದುಕೊಂಡಿದ್ದಾರೆ.
ಸಿಡ್ನಿ: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಕೊನೆಯ ಪಂದ್ಯವಾದ ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಮತ್ತೆ ಟೀಂ ಇಂಡಿಯಾ ಆರಂಭಿಕ ವೈಫಲ್ಯ ಅನುಭವಿಸಿದ್ದು, ಮೊದಲ ದಿನದಾಟದ ಚಹಾ ಲಂಚ್ ಬ್ರೇಕ್ ವೇಳೆಗೆ ಭಾರತ 3 ವಿಕೆಟ್ ಕಳೆದುಕೊಂಡು ಕೇವಲ 57 ರನ್ ಗಳಿಸಲಷ್ಟೇ ಶಕ್ತವಾಗಿದೆ.
ನಾಯಕ ರೋಹಿತ್ ಶರ್ಮಾ ಸಿಡ್ನಿ ಟೆಸ್ಟ್ ಪಂದ್ಯದಿಂದ ಕೊನೆಯ ಕ್ಷಣದಲ್ಲಿ ಹೊರಗುಳಿಯಲು ತೀರ್ಮಾನಿಸಿದ್ದರಿಂದಾಗಿ ಜಸ್ಪ್ರೀತ್ ಬುಮ್ರಾ ನಾಯಕರಾಗಿ ಭಾರತ ತಂಡವನ್ನು ಮುನ್ನಡೆಸುತ್ತಿದ್ದಾರೆ. ಟಾಸ್ ಗೆದ್ದ ಬುಮ್ರಾ ಮೊದಲು ಬ್ಯಾಟ್ ಮಾಡುವ ತೀರ್ಮಾನ ತೆಗೆದುಕೊಂಡರು. ಭಾರತ ತಂಡದಲ್ಲಿ ಎರಡು ಪ್ರಮುಖ ಬದಲಾವಣೆ ಮಾಡಲಾಗಿದ್ದು, ಶುಭ್‌ಮನ್ ಗಿಲ್ ಹಾಗೂ ಪ್ರಸಿದ್ಧ್ ಕೃಷ್ಣ ತಂಡ ಕೂಡಿಕೊಂಡಿದ್ದಾರೆ. ಇನ್ನು ರೋಹಿತ್ ಶರ್ಮಾ ಹಾಗೂ ಆಕಾಶ್‌ದೀಪ್ ಸಿಡ್ನಿ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ.
Breaking: ಸಿಡ್ನಿ ಟೆಸ್ಟ್‌ನಿಂದ ಹೊರಗುಳಿಯುವ ನಿರ್ಧಾರ ಮಾಡಿದ ರೋಹಿತ್ ಶರ್ಮ
Three morning session wickets for the hosts!#AUSvIND live: https://t.co/RuH7eTzAjE#WTC25 pic.twitter.com/sQdoO4m668
— ICC (@ICC) January 3, 2025
ಇನ್ನು ಬೃಹತ್ ಮೊತ್ತ ಕಲೆಹಾಕುವ ಲೆಕ್ಕಾಚಾರದೊಂದಿಗೆ ಕಣಕ್ಕಿಳಿದ ಟೀಂ ಇಂಡಿಯಾ ಮತ್ತೊಮ್ಮೆ ಆರಂಭಿಕ ಆಘಾತ ಅನುಭವಿಸಿತು. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಮತ್ತೆ ಆರಂಭಿಕನಾಗಿ ಕಣಕ್ಕಿಳಿದ ಕನ್ನಡಿಗ ಕೆ ಎಲ್ ರಾಹುಲ್ ಕೇವಲ 4 ರನ್ ಗಳಿಸಿ ಮಿಚೆಲ್ ಸ್ಟಾರ್ಕ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ಮೆಲ್ಬರ್ನ್ ಟೆಸ್ಟ್ ಪಂದ್ಯದ ಎರಡೂ ಇನ್ನಿಂಗ್ಸ್‌ನಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿದ್ದ ಯಶಸ್ವಿ ಜೈಸ್ವಾಲ್ ಕೇವಲ 10 ರನ್ ಗಳಿಸಿ ಸ್ಕಾಟ್ ಬೊಲೆಂಡ್‌ಗೆ ವಿಕೆಟ್ ಒಪ್ಪಿಸಿದರು.
ಆಸೀಸ್ ಎದುರಿನ ಸಿಡ್ನಿ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 2 ಬದಲಾವಣೆ ಪಕ್ಕಾ; ಘೋಷಣೆಯೊಂದೇ ಬಾಕಿ?
ಇನ್ನು ಜೈಸ್ವಾಲ್ ವಿಕೆಟ್ ಪತನದ ಬಳಿಕ ಕ್ರೀಸ್‌ಗಿಳಿದ ವಿರಾಟ್ ಕೊಹ್ಲಿ ಮೊದಲ ಎಸೆತದಲ್ಲೇ ಸಿಕ್ಕ ಜೀವದಾನವನ್ನು ಬಳಸಿಕೊಳ್ಳುವತ್ತ ದಿಟ್ಟ ಹೆಜ್ಜೆಯಿಡಲಾರಂಭಿಸಿದ್ದಾರೆ. ಮೂರನೇ ವಿಕೆಟ್‌ಗೆ ಶುಭ್‌ಮನ್ ಗಿಲ್ ಹಾಗೂ ವಿರಾಟ್ ಕೊಹ್ಲಿ ಅಮೂಲ್ಯ 40 ರನ್‌ಗಳ ಜತೆಯಾಟ ನಿಭಾಯಿಸಿದರು. ಇನ್ನೇನು ಲಂಚ್ ಬ್ರೇಕ್‌ಗೆ ಕೆಲವೇ ನಿಮಿಷಗಳು ಬಾಕಿ ಇರುವಾಗ ಶುಭ್‌ಮನ್ ಗಿಲ್, ಸ್ಪಿನ್ನರ್ ನೇಥನ್ ಲಯನ್‌ಗೆ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಅನುಭವಿಸಿದರು. ಗಿಲ್ ವಿಕೆಟ್ ಒಪ್ಪಿಸುವ ಮುನ್ನ 64 ಎಸೆತಗಳನ್ನು ಎದುರಿಸಿ 2 ಬೌಂಡರಿ ಸಹಿತ 20 ರನ್ ಗಳಿಸಿದರು. ಇನ್ನು ಮತ್ತೊಂದು ತುದಿಯಲ್ಲಿ ಸಾಕಷ್ಟು ಎಚ್ಚರಿಕೆಯ ಬ್ಯಾಟಿಂಗ್ ನಡೆಸುತ್ತಿರುವ ವಿರಾಟ್ ಕೊಹ್ಲಿ 48 ಎಸೆತಗಳನ್ನು ಎದುರಿಸಿ 12 ರನ್ ಗಳಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ.