ಬೆಂಗಳೂರು(ಜ.16): ಪ್ರತಿಭಾನ್ವಿತ ಬ್ಯಾಟ್ಸ್‌ಮನ್‌ ಅನಿರುದ್ಧ್ ಜೋಶಿ ಬಾರಿಸಿದ ಸ್ಫೋಟಕ ಅರ್ಧಶತಕದ ನೆರವಿನಿಂದ ಕರ್ನಾಟಕ ತಂಡವು ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ರೈಲ್ವೇಸ್‌ ವಿರುದ್ದ 8 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

ರೈಲ್ವೇಸ್‌ ನೀಡಿದ್ದ 153 ರನ್‌ಗಳ ಗುರಿ ಬೆನ್ನತ್ತಿದ ಹಾಲಿ ಚಾಂಪಿಯನ್‌ ಕರ್ನಾಟಕ ತಂಡ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ತಂಡ 25 ರನ್‌ ಗಳಿಸುವಷ್ಟರಲ್ಲಿ ರೋಹನ್ ಕದಂ ವಿಕೆಟ್‌ ಕಳೆದುಕೊಂಡಿತು. ಇನ್ನು ಕಳೆದ ಪಂದ್ಯದಲ್ಲಿ ಆಕರ್ಷಕ ಬ್ಯಾಟಿಂಗ್ ನಡೆಸಿದ್ದ ದೇವದತ್ ಪಡಿಕಲ್ ಬ್ಯಾಟಿಂಗ್ 37 ರನ್‌ಗಳಿಗೆ ಸೀಮಿತವಾಯಿತು.

ಮುಷ್ತಾಕ್ ಅಲಿ ಟ್ರೋಫಿ: ಕರ್ನಾಟಕಕ್ಕಿಂದು ರೈಲ್ವೇಸ್‌ ಸವಾಲು

ಅನಿರುದ್ದ್ ಜೋಶಿ ಏಕಾಂಗಿ ಹೋರಾಟ: ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಶ್ರೀಜಿತ್ ಹಾಗೂ ಪ್ರವಿಣ್‌ ದುಬೆ ಶೂನ್ಯ ಸುತ್ತಿ ಪೆವಿಲಿಯನ್ ಸೇರಿದಾಗ ಕರ್ನಾಟಕದ ಪಾಳಯದಲ್ಲಿ ಕೆಲಕಾಲ ಆತಂಕ ಮನೆ ಮಾಡಿತ್ತು. ಆದರೆ ಅನಿರುದ್ದ್ ಜೋಶಿ ಬಾಲಂಗೋಚಿಗಳ ನೆರವಿನಿಂದ ಕರ್ನಾಟಕಕ್ಕೆ ರೋಚಕ ಗೆಲುವು ತಂದುಕೊಟ್ಟರು. ಕೇವಲ 40 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಮನಮೋಹಕ ಸಿಕ್ಸರ್‌ಗಳ ನೆರವಿನಿಂದ 2 ಎಸೆತಗಳು ಬಾಕಿ ಇರುವಂತೆಯೇ ತಂಡಕ್ಕೆ ರೋಚಕ ಜಯ ತಂದುಕೊಟ್ಟರು. ಸತತ 2 ಎಸೆತಗಳಲ್ಲಿ 2 ಸಿಕ್ಸರ್ ಸಿಡಿಸಿ ಅನಿರುದ್ಧ್ ಜೋಶಿ ಕರ್ನಾಟಕ ತಂಡಕ್ಕೆ ಸ್ಮರಣೀಯ ಗೆಲುವು ತಂದಿತ್ತರು.