ಬೆಂಗಳೂರು(ಜ.12): ಸಯ್ಯದ್‌ ಮುಷ್ತಾಕ್‌ ಅಲಿ ಟಿ20 ಟೂರ್ನಿಯಲ್ಲಿ ಶುಭಾರಂಭ ಮಾಡಿರುವ ಹಾಲಿ ಚಾಂಪಿಯನ್‌ ಕರ್ನಾಟಕ ತಂಡ, ಮಂಗಳವಾರ ಪಂಜಾಬ್‌ ತಂಡವನ್ನು ಎದುರಿಸಲಿದೆ. 

ಆಲೂರು ಕ್ರಿಕೆಟ್‌ ಮೈದಾನದಲ್ಲಿ ಪಂದ್ಯ ನಡೆಯಲಿದ್ದು, ಕರುಣ್‌ ನಾಯರ್‌ ಪಡೆ ಮತ್ತೊಂದು ಜಯದ ಲೆಕ್ಕಾಚಾರದಲ್ಲಿದೆ. ಮೊದಲ ಪಂದ್ಯದಲ್ಲಿ ಜಮ್ಮು ಕಾಶ್ಮೀರ ವಿರುದ್ಧ ಕರ್ನಾಟಕ 43 ರನ್‌ಗಳ ಗೆಲುವು ಸಾಧಿಸಿತ್ತು. 

ಫೆಬ್ರವರಿ 11ಕ್ಕೆ ಐಪಿಎಲ್ ಆಟಗಾರರ ಹರಾಜು..?

ಟಾಸ್ ಗೆದ್ದ ಜಮ್ಮು ಮತ್ತು ಕಾಶ್ಮೀರ ಫೀಲ್ಡಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿತ್ತು. ಮೊದಲು ಬ್ಯಾಟಿಂಗ್‌ ಮಾಡಿದ ಜರ್ನಾಟಕ ತಂಡ 5 ವಿಕೆಟ್ ಕಳೆದುಕೊಂಡು 150 ರನ್ ಬಾರಿಸಿತ್ತು. ಇದಕ್ಕುತ್ತರವಾಗಿ ಜಮ್ಮು&ಕಾಶ್ಮೀರ ತಂಡ 107 ರನ್‌ಗಳಿಗೆ ಸರ್ವಪತನ ಕಂಡಿತ್ತು. ಇದರೊಂದಿಗೆ ಹಾಲಿ ಚಾಂಪಿಯನ್ ಕರ್ನಾಟಕ ತಂಡ 43 ರನ್‌ಗಳ ಭರ್ಜರಿ ಗೆಲುವು ದಾಖಲಿಸುವ ಮೂಲಕ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಶುಭಾರಂಭ ಮಾಡಿತ್ತು.

ಪಂದ್ಯ ಆರಂಭ: ಮಧ್ಯಾಹ್ನ 12ಕ್ಕೆ