ಸಯ್ಯದ್‌ ಮುಷ್ತಾಕ್ ಅಲಿ ಟಿ20 ಟೂರ್ನಿಯ ಕ್ವಾರ್ಟರ್‌ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಕರ್ನಾಟಕ ತಂಡ ಆರಂಭದಲ್ಲೇ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಅಹಮದಾಬಾದ್‌(ಜ.26): ಸಯ್ಯದ್‌ ಮುಷ್ತಾಕ್‌ ಅಲಿ ಟಿ20 ಟೂರ್ನಿಯ ಮೊದಲ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕರ್ನಾಟಕ ತಂಡ ಆರಂಭಿಕ ಆಘಾತ ಅನುಭವಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಲಿಳಿದ ಕರ್ನಾಟಕ ತಂಡವು 26 ರನ್‌ ಗಳಿಸುವಷ್ಟರಲ್ಲಿ ಅಗ್ರಕ್ರಮಾಂಕದ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

ಅದೃಷ್ಟದ ಮೇಲೆ ನಾಕೌಟ್‌ ಹಂತ ಪ್ರವೇಶಿಸಿದ್ದ ಕರ್ನಾಟಕ ತಂಡ ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿದಿತ್ತು. ಹೀಗಿದ್ದು ಉತ್ತಮ ಆರಂಭ ಪಡೆಯುವಲ್ಲಿ ಕರ್ನಾಟಕ ತಂಡ ವಿಫಲವಾಗಿದೆ. ಮೊದಲ 5 ಓವರ್‌ ಮುಕ್ತಾಯದ ವೇಳೆಗೆ ಕರ್ನಾಟಕ ತಂಡ 4 ವಿಕೆಟ್‌ ಕಳೆದುಕೊಂಡು 32 ರನ್‌ ಬಾರಿಸಿದೆ.

ಲಂಕಾ ವಿರುದ್ಧ ಇಂಗ್ಲೆಂಡ್‌ 2-0 ಸರಣಿ ಕ್ಲೀನ್‌ ಸ್ವೀಪ್‌

ಕರ್ನಾಟಕ ಪರ ನಾಯಕ ಕರುಣ್ ನಾಯರ್ 12 ರನ್‌ ಗಳಿಸಿ ಸಂದೀಪ್ ಶರ್ಮಾಗೆ ವಿಕೆಟ್ ಒಪ್ಪಿಸಿದರೆ, ಪಡಿಕ್ಕಲ್(11) ಹಾಗೂ ಪವನ್ ದೇಶ್‌ಪಾಂಡೆ(0) ಅವರನ್ನು ಒಂದೇ ಓವರ್‌ನಲ್ಲಿ ಸಿದ್ದಾರ್ಥ್‌ ಕೌಲ್‌ ಪೆವಿಲಿಯನ್ನಿಗಟ್ಟಿದ್ದಾರೆ. ಇನ್ನು ವಿಕೆಟ್‌ ಕೀಪರ್ ಬ್ಯಾಟ್ಸ್‌ಮನ್‌ ಶರತ್ ಬಿ.ಆರ್‌(02) ಕೂಡಾ ಒಂದಂಕಿ ಮೊತ್ತಕ್ಕೆ ವಿಕೆಟ್‌ ಒಪ್ಪಿಸಿದ್ದಾರೆ.