ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿಂದು ಹಾಲಿ ಚಾಂಪಿಯನ್‌ ಕರ್ನಾಟಕ ತಂಡವು ಲೀಗ್ ಹಂತದ ಕೊನೆಯ ಪಂದ್ಯವನ್ನು ಆಡಲಿದೆ. ಈ ಕುರಿಯಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಬೆಂಗಳೂರು(ಜ.18): ಸಯ್ಯದ್‌ ಮುಷ್ತಾಕ್‌ ಅಲಿ ಟಿ20 ಟೂರ್ನಿಯಲ್ಲಿ ಹಾಲಿ ಚಾಂಪಿಯನ್‌ ಕರ್ನಾಟಕ ತಂಡ ನಾಕೌಟ್‌ ಹಂತಕ್ಕೇರುವ ಸಾಧ್ಯತೆ ಕ್ಷೀಣಿಸಿದೆ. 

ಎಲೈಟ್‌ ‘ಎ’ ಗುಂಪಿನಲ್ಲಿರುವ ಕರ್ನಾಟಕ ತಂಡ 4 ಪಂದ್ಯಗಳಿಂದ 3ರಲ್ಲಿ ಗೆದ್ದು 12 ಅಂಕಗಳಿಸಿ 2ನೇ ಸ್ಥಾನದಲ್ಲಿದ್ದು, ನೆಟ್‌ ರನ್‌ರೇಟ್‌ನಲ್ಲಿ ಭಾರೀ ಹಿನ್ನಡೆ ಅನುಭವಿಸಿದೆ. ಸೋಮವಾರ ಇಲ್ಲಿನ ಆಲೂರು ಮೈದಾನದಲ್ಲಿ ನಡೆಯಲಿರುವ ಲೀಗ್‌ ಹಂತದ ತನ್ನ ಕೊನೆಯ ಪಂದ್ಯದಲ್ಲಿ ಕರ್ನಾಟಕ, ಉತ್ತರ ಪ್ರದೇಶ ತಂಡವನ್ನು ಎದುರಿಸಲಿದೆ. ಯುಪಿ ವಿರುದ್ದ ವಿರುದ್ಧದ ಪಂದ್ಯದಲ್ಲಿ ದೊಡ್ಡ ಅಂತರದ ಗೆಲುವು ಸಾಧಿಸಿ, ಪವಾಡ ನಡೆದರೂ ಕರ್ನಾಟಕ ತಂಡ ಮುಂದಿನ ಹಂತಕ್ಕೇರುವ ಸಾಧ್ಯತೆ ಕಡಿಮೆ.

ಮುಷ್ತಾಕ್ ಅಲಿ ಟ್ರೋಫಿ: ಕರ್ನಾಟಕಕ್ಕೆ ರೋಚಕ ಜಯ ತಂದಿತ್ತ ಅನಿರುದ್ಧ್ ಜೋಶಿ

ಹಾಲಿ ಚಾಂಪಿಯನ್‌ ಕರ್ನಾಟಕ ತಂಡ ಸಯ್ಯದ್ ಮುಷ್ತಾಕ್ ಅಲಿ ಟೂರ್ನಿಯ ಮೊದಲ ಪಂದ್ಯದಲ್ಲಿ ಜಮ್ಮು ಕಾಶ್ಮೀರ ವಿರುದ್ದ ಭರ್ಜರಿ ಗೆಲುವು ಸಾಧಿಸುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿತ್ತು. ಆದರೆ ಎರಡನೇ ಪಂದ್ಯದಲ್ಲಿ ಪಂಜಾಬ್‌ ವಿರುದ್ದ 9 ವಿಕೆಟ್‌ಗಳ ಹೀನಾಯ ಸೋಲು ಕಂಡಿತ್ತು. ಬಳಿಕ ತ್ರಿಪುರಾ ಹಾಗೂ ರೈಲ್ವೇಸ್‌ ವಿರುದ್ದ ಕರುಣ್ ನಾಯರ್ ಪಡೆ ಕಡಿಮೆ ಅಂತರದ ಗೆಲುವು ದಾಖಲಿಸಿದೆ.